Darshan Thoogudeepa: ಇಂದು ನಟ ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನು ಭವಿಷ್ಯ ಬೇಲ್ ಸಿಗುತ್ತಾ?
ಬೆಂಗಳೂರು, ನವೆಂಬರ್ 21: ಮಧ್ಯಂತರ ಜಾಮೀನಿನ ಮೇಲೆ ಬಳ್ಳಾರಿ ಜೈಲಿನಿಂದ ಬಿಡುಗಡೆ ಆದ ನಟ ದರ್ಶನ್ ತೂಗುದೀಪ ಅವರು ರೇಣುಕಾಸ್ವಾಮಿ ಪ್ರಕರಣದಿಂದ ಜಾಮೀನು ನೀಡುವಂತೆ ಈ ಹಿಂದೆ ಹೈಕೋರ್ಟ್ ಸಾಮಾನ್ಯ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆಯು ಇಂದು ಗುರುವಾರ ನವೆಂಬರ್ 21ರಂದು ಕರ್ನಾಟಕ ಹೈಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ. ಡಿ.ಬಾಸ್ ಅಭಿಮಾನಿಗಳಿಗೆ ಈ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಅವರು ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ವಿಶೇಷ ಜಾಮೀನು ಅರ್ಜಿ ಸಲ್ಲಿಕೆ ಆಗಿತ್ತು. ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ವಾದ ಮಾಡಿದ್ದ ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನು ಕೊಡಿಸುವಲ್ಲಿ ಯಶಸ್ವಿಯಾದರು.

ಇದೀಗ ನಟ ದರ್ಶನ್ ಅವರು ಅನಾರೋಗ್ಯಕ್ಕು ಮೊದಲೇ ಜೈಲಿನಿಂದ ಬಿಡುಗಡೆಗಾಗಿ ಜಾಮೀನು ಕೋರಿ ಕೋರ್ಟ್‌ಗೆ ಸಾಮಾನ್ಯ ಅರ್ಜಿ ಸಲ್ಲಿಸಿದ್ದರು. ಅದರ ಅರ್ಜಿ ವಿಚಾರಣೆಯು ಗುರುವಾರ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿರುವ ನ್ಯಾಯಪೀಠದಲ್ಲಿ ನಡೆಯಲಿದೆ. ದರ್ಶನ್ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ.
ಅನಾರೋಗ್ಯದ ಹೆಸರಿನಲ್ಲಿ ಆರು ವಾರಗಳ ಕಾಲ ಜಾಮೀನು ಪಡೆದಿರುವ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರಿಗೆ ಈವರೆಗೂ ಆಪರೇಷನ್ ಮಾಡಿಲ್ಲ. ಮೂರು ವಾರ ಕಳೆದಿವೆ. ಇದೇ ಕಾರಣದಿಂದಾಗಿ ಪೊಲೀಸರು ನಟ ದರ್ಶನ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ದರ್ಶನ್ ಜೈಲಿನಿಂದ ಹೊರ ಬಂದರು ಸಹಿತ ಶಸ್ತ್ರಚಿಕಿತ್ಸೆಗೆ ಒಳಗಾಗದೇ ಕೇವಲ ಫಿಜಿಯೋಥೆರಪಿ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಇದರಿಂದ ಪ್ರಕರಣ ಮತ್ತಷ್ಟು ವಿಳಂಬವಾಗಬಹುದು ಎಂಬ ದೂರದೃಷ್ಟಿಯಿಂದಾಗಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ದರ್ಶನ್ ಗೆ ನೀಡಿರುವ ಮಧ್ಯಂತರ ಜಾಮೀನು ರದ್ದುಮಾಡುವಂತೆ ಕೋರಿದ್ದಾರೆ.
ಇಂದೇ ನಟಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾಗೌಡ ಅವರು ಜೈಲುಪಾಲಾಗಿ ಸುಮಾರು 5 ತಿಂಗಳಾಗಿದೆ. ಅವರಿಗೆ ಇನ್ನೂವರೆಗೂ ಜಾಮೀನು ಸಿಕ್ಕಿಲ್ಲ. ಪವಿತ್ರಾ ಗೌಡ ಸೇರಿದಂತೆ ಪ್ರಕರಣ ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆ ಇಂದು ಗುರುವಾರ ನವೆಂಬರ್ 21ರಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ನ್ಯಾ. ವಿಶ್ವಜಿತ್ ಶೆಟ್ಟಿ ಅವರಿರುವ ನ್ಯಾಯಪೀಠದಲ್ಲಿ ನಡೆಯಲಿದೆ.
ಪ್ರಕರಣ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಗುರುವಾರ ನ್ಯಾಯಾಲಯದಿಂದ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಪ್ರಕರಣದಲ್ಲಿ ಕೆಲವರಿಗೆ ಜಾಮೀನು ಸಿಕ್ಕಿ, ಪವನ್ ಮತ್ತು ನಂದೀಶ್ ಅವರು ಜಾಮೀನು ಅರ್ಜಿ ಬುಧವಾರ (ನವೆಂಬರ್ 20) ರಂದು ವಜಾಗೊಂಡಿದೆ.












Click it and Unblock the Notifications