Darshan and Team: ಪೊಲೀಸ್ ಕಸ್ಟಡಿ ತಪ್ಪಿದ್ರೆ ದರ್ಶನ್ & ಗ್ಯಾಂಗ್ ಪರಪ್ಪನ ಅಗ್ರಹಾರಕ್ಕೆ.?
Darshan Thoogudeepa And Team: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಜೊತೆಗೆ ನಟ ದರ್ಶನ್‌ನ ಕರಾಳ ಮುಖದ ಸತ್ಯಗಳು ಒಂದೊಂದೇ ಹೊರಬೀಳುತ್ತಲೇ ಇವೆ. ಇನ್ನು ಇಂದು (ಜೂನ್ 20) ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಮುಕ್ತಾಯವಾಗಿದ್ದು, ಅವರನ್ನು ಕೋರ್ಟ್‌ಗೆ ಕರೆದೊಯ್ಯಲಾಗುತ್ತಿದೆ. ಒಂದು ವೇಳೆ ಇಂದು ಪೊಲೀಸ್ ಕಸ್ಟಡಿ ತಪ್ಪಿದ್ರೆ ಇವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಫಿಕ್ಸ್ ಎಂದು ಹೇಳಲಾಗುತ್ತಿದೆ.
ಇಂದು ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್, ವಿನಯ್, ಪ್ರದೋಶ್, ಧನರಾಜ್ ನನ್ನು ಅನ್ನಪೂರ್ಣೇಶ್ವರಿ ಠಾಣೆಯಿಂದ ಕೋರ್ಟ್‌ನತ್ತ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾರೆ. ಇನ್ನು ಈ ವೇಳೆ ಅನ್ನಪೂರ್ಣೇಶ್ವರಿ ಠಾಣೆ ಹಾಗೂ ಕೋರ್ಟ್ ಮುಂದೆ ಅಂಧಾಭಿಮಾನಿಗಳು ಹುಚ್ಚಾಟ ಮೆರೆದ ಘಟನೆ ನಡೆದಿದ್ದು, ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ಈಗಾಗಲೇ ಕೋರ್ಟ್ ಮತ್ತು ಪರಪ್ಪನ ಅಗ್ರಹಾರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನು ಗಮನಿಸಿದರೆ, ಇಂದು ದರ್ಶನ್ ಮತ್ತು ಗ್ಯಾಂಗ್ ಪರಪ್ಪನ ಅಗ್ರಹಾರಕ್ಕೆ ಸೇರಲಿದೆ ಎನ್ನುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.
ವಿಡಿಯೋ ಭಾರೀ ವೈರಲ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡದುಕೊಳ್ಳುತ್ತಲೇ ಇದೆ. ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಆಗಿದ್ದು, ಎ2 ಆರೋಪಿ ನಟ ದರ್ಶನ್ ಆಗಿದ್ದಾರೆ. ಈಗಾಗಲೇ ಈ ಬಗ್ಗೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರವನ್ನೇ ಇಟ್ಟುಕೊಂಡು ರೀಲ್ಸ್ ಮಾಡಿರುವ ವಿಡಿಯೋಗಳು ಭಾರೀ ವೈರಲ್ ಆಗುತ್ತಿವೆ. ಹಾಗೆಯೇ ಇದೀಗ ದರ್ಶನ್, ಪವಿತ್ರಾ ಗೌಡ ವಿಚಾರ ಯಕ್ಷಗಾನಕ್ಕೂ ಎಂಟ್ರಿ ಕೊಟ್ಟಿದ್ದು, ಈ ವಿಡಿಯೋ ಸಹ ಸಖತ್ ಸದ್ದು ಮಾಡುತ್ತಿವೆ.
ಈ ಪ್ರಕರಣ ಬರೀ ರಾಜ್ಯ ಅಲ್ಲದೆ, ಇಡೀ ದೇಶಾದ್ಯಂತ ಹರಡಿಬಿಟ್ಟಿದೆ. ಸುದ್ದಿ ಮಾಧ್ಯಮ, ಟ್ರೋಲ್ ಪೇಜ್, ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿಯದ್ದೇ ಚರ್ಚೆಯಾಗುತ್ತಿದದೆ. ಅಷ್ಟೇ ಅಲ್ಲದೆ ಇದೀಗ ನಟ ದರ್ಶನ್ ಮತ್ತು ಪವಿತ್ರಾ ವಿಚಾರ ಯಕ್ಷಗಾನ ಪ್ರಸಂಗಕ್ಕೂ ಎಂಟ್ರಿ ಕೊಟ್ಟಿದ್ದು, ಈ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಹಾಗಾದರೆ ಈ ವಿಡಿಯೋದಲ್ಲೆ ಏನಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಯಕ್ಷಗಾನ ಅಂದರೆ ಅದರದ್ದೇ ಆದ ಪ್ರಮುಖ ಶೈಲಿಗಳಿವೆ ಅಲ್ಲದೆ ಇದಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡಲಾಗುತ್ತದೆ. ಯಕ್ಷಗಾನ ಪ್ರಸಂಗದಲ್ಲಿ ಕೆಲವು ಬಾರಿ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳನ್ನು ಕೂಡ ಮಾಡಲಾಗುತ್ತದೆ. ಈ ಸನ್ನಿವೇಶಗಳು ಪ್ರೇಕ್ಷಕರನ್ನು ರಂಜಿಸುತ್ತವೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಯಕ್ಷಗಾನ ಪ್ರಸಂಗವೊಂದರಲ್ಲಿ ಪ್ರಜ್ವಲ್ ರೇವಣ್ಣ ಹೆಸರು ಸಹ ಪ್ರಸ್ತಾಪ ಆಗಿತ್ತು. ಈ ವಿಡಿಯೋ ಭಾರೀ ಸದ್ದು ಮಾಡಿತ್ತು. ಇದೀಗ ತುಳು ಯಕ್ಷಗಾನ ಬಯಲಾಟವೊಂದರಲ್ಲಿ ರಂಗಸ್ಥಳದಲ್ಲಿ ಹಾಸ್ಯಕಲಾವಿದರ ನಡುವೆ ನಡೆದ ಸಂಭಾಷಣೆಯಲ್ಲಿ ದರ್ಶನ್-ಪವಿತ್ರಾ ಹೆಸರು ಪ್ರಸ್ತಾಪ ಆಗಿದ್ದು, ಈ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಇನ್ನು ಈ ವಿಡಿಯೋವನ್ನು ಸ್ವಸ್ತಿಕ್ ಕನ್ಯಾಡಿ (@swasthik_kanyadi) ಎಂಬವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, "ಯಕ್ಷಗಾನದಲ್ಲಿ ದರ್ಶನ್-ಪವಿತ್ರ ಮ್ಯಾಟರ್" ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.












Click it and Unblock the Notifications