ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸರ ಮುಂದೆ ನಟ ದರ್ಶನ್ ಶಾಕಿಂಗ್ ಹೇಳಿಕೆ
ಬೆಂಗಳೂರು, ಜೂನ್ 15: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪೊಲೀಸರ ಮುಂದೆ ಆರೋಪಿಗಳು ಒಂದೊಂದೇ ವಿಚಾರವನ್ನು ಬಾಯ್ಬಿಡುತ್ತಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಎ-೧ ಆರೋಪಿ ಪವಿತ್ರಾ ಗೌಡ, ನಟ ದರ್ಶನ್ ಸೇರಿದಂತೆ ಈಗಾಗಲೇ ಹದಿನೈದಕ್ಕೂ ಹೆಚ್ಚು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಪ್ರಕರಣದ ಎ-೨ ಆರೋಪಿಯಾಗಿರುವ ನಟ ದರ್ಶನನ್ನು ಕೂಡ ವಿಚಾರಣೆ ನಡೆಸಲಾಗುತ್ತಿದ್ದು, ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ. ಈ ಕೊಲೆ ಬಗ್ಗೆ ನನಗೇನು ಗೊತ್ತೇ ಇಲ್ಲ ಎಂದಿದ್ದ ದರ್ಶನ್ ವಿರುದ್ಧ ಅನೇಕ ಸಾಕ್ಷಿಗಳು ಪತ್ತೆಯಾಗಿದ್ದು, ಇದೀಗ ಘಟನೆಯಲ್ಲಿ ತಮ್ಮ ಪಾತ್ರದ ಬಗ್ಗೆ ದರ್ಶನ್ ಒಂದೊಂದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪೊಲೀಸರ ಮುಂದೆ ಹೇಳಿಕೆ ಕೊಟ್ಟ ದರ್ಶನ್ 'ನಾನು ರೇಣುಕಾಸ್ವಾಮಿಗೆ ಹೆದರಿಸಿದ್ದು ಅಷ್ಟೇ. ನಾನು ಕೊಲೆ ಮಾಡಿಲ್ಲ. ನಾನು ಕೊಲೆ ಮಾಡಿ ಅಂತಾನೂ ಯಾರಿಗೂ ಹೇಳಿಲ್ಲ. ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎನ್ನುವುದು ನನಗೆ ಗೊತ್ತಾಗಿದ್ದು ಹೆದರಿಸಿದ್ದೇನೆ' ಎಂದಿದ್ದಾರೆ ಎನ್ನಲಾಗಿದೆ.
ಇನ್ನು ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಹೇಗೆ ಮಾಡಿದ್ದಾನೆ ಎನ್ನುವುದು ನನಗೆ ಗೊತ್ತಿಲ್ಲ. ಯಾಕೆಂದರೆ ನನಗೆ ಸೋಶಿಯಲ್ ಮೀಡಿಯಾ ಬಗ್ಗೆ ಗೊತ್ತಿಲ್ಲ. ನನ್ನ ಖಾತೆಯನ್ನು ನನ್ನ ಟೀಂ ಬಳಸುತ್ತಾರೆ. ನಾನು ಹೆದರಿಸಿದ್ದೇನೆ ಅಷ್ಟೇ ಅಲ್ಲಿ ಏನಾಗ್ತಿದೆ ಅನ್ನುವುದು ನನಗೆ ಗೊತ್ತಿರಲಿಲ್ಲ ಎಂದು ನಟ ದರ್ಶನ್ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾರೆ ಎನ್ನಲಾಗಿದೆ.
ದುಡ್ಡು ಕೊಟ್ಟು ಊಟ ಮಾಡಿಕೊಂಡು ಹೋಗು ಎಂದಿದ್ದೆ- ದರ್ಶನ್
ಸದ್ಯ ಆರೋಪಿಗಳನ್ನು ಆರು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿರುವ ಪೊಲೀಸರು ನಟ ದರ್ಶನನ್ನು ಕೂಡ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಈ ಹಿಂದಿನ ವಿಚಾರಣೆಯಲ್ಲಿ ಹೇಳಿಕೆಕೊಟ್ಟಿದ್ದ ನಟ ದರ್ಶನ್, ಪವನ್ ಎನ್ನುವವನಿಂದ ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಿರೋದು ಗೊತ್ತಾಯ್ತು. ಅದಕ್ಕೆ ರೇಣುಕಾಸ್ವಾಮಿಯನ್ನು ಕರೆತರುವಂತೆ ರಾಘವೇಂದ್ರನಿಗೆ ಸೂಚಿಸಿದೆ. ಶನಿವಾರ ಸಂಜೆ ರೇಣುಕಾಸ್ವಾಮಿಯನ್ನು ಶೆಡ್ನಲ್ಲಿ ಭೇಟಿಯಾದೆ. ಇನ್ನೊಂದು ಸಲ ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಿದರೆ ಸರಿ ಇರಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದೇನೆ. ಬಳಿಕ ದುಡ್ಡು ಕೊಟ್ಟು ಊಟ ಮಾಡಿಕೊಂಡು ಊರು ಸೇರುವಂತೆ ಹೇಳಿ ಹೊರಟು ಹೋದೆ. ನಾನು ಈ ಕೊಲೆಯನ್ನು ಮಾಡಿಲ್ಲ. ನನಗೂ ಇದಕ್ಕೂ ಸಂಬಂಧವಿಲ್ಲ ಎಂದು ಪ್ರಕರಣದ ಎರಡನೇ ಆರೋಪಿ ದರ್ಶನ್ ಹೇಳಿಕೆ ಕೊಟ್ಟಿದ್ದಾನೆ ಎನ್ನಲಾಗಿದೆ.












Click it and Unblock the Notifications