ನಟ ಸರಿಗಮ ವಿಜಿ ನಿಧನ: ಚಾಮರಾಜಪೇಟೆಯಲ್ಲಿ ನಾಳೆ ಅಂತ್ಯ ಸಂಸ್ಕಾರ
arigama Viji death: ಕನ್ನಡ ಚಿತ್ರರಂಗದ ಹಿರಿಯ ನಟರಾದ ಸರಿಗಮ ವಿಜಿ ಅವರು ನಿಧನರಾಗಿದ್ದಾರೆ. ವಿಜಿ ಅವರ ನಿಧನಕ್ಕೆ ಸಾವಿರಾರು ಜನ ಕಂಬನಿ ಮಿಡಿದಿದ್ದಾರೆ. ಬೆಂಗಳೂರುನ ಮಹಾಲಕ್ಷ್ಮಿ ಲೇಔಟ್‌ನ ವಿಜಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯ ಸಂಸ್ಕಾರ ನಾಳೆ ನಡೆಯಲಿದೆ. ಸರಿಗಮ ವಿಜಿ ಅವರು ರಂಗಭೂಮಿಯ ಮೂಲಕ ಖ್ಯಾತಿ ಗಳಿಸಿದ್ದರು. ಕನ್ನಡ ಚಿತ್ರಗಳಲ್ಲಿ ನಟನೆ ಹಾಗೂ ನಿರ್ದೇಶನವನ್ನು ಸಹ ಅವರು ಮಾಡಿದ್ದಾರೆ.
ಬುಧವಾರ ರಾತ್ರಿ (ಜನವರಿ 15) ಸರಿಗಮ ವಿಜಿ ಅವರ ಮನೆ ಬಳಿಯೇ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು. ನಾಳೆ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಗುರುವಾರವೇ ಸರಿಗಮ ವಿಜಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ಕುಟುಂಬದವರು ತಿಳಿಸಿದ್ದಾರೆ.

ಗುರುವಾರ ಬೆಳಗ್ಗೆ 10 ಗಂಟೆಯಿಂದ 11ಗಂಟೆಯ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಗುರುವಾರ ಮಧ್ಯಾಹ್ನದ ಒಳಗಾಗಿ ಬಲಿಜ ಜನಾಂಗದ ಸಂಪ್ರದಾಯದ ಅನುಸಾರ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ವಿಜಿ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಕಳೆದ ವಾರ ಯಶವಂತಪುರ ಸಮೀಪದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಚೆಗೆ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ವಿಜಿ ಅವರಿಗೆ ಬಹು ಅಂಗಾಂಗ ವೈಫಲ್ಯತೆ ಇತ್ತು.
ಸರಿಗಮ ಹೆಸರು ಯಾಕೆ: ವಿಜಿ ಅವರು ರಂಗಭೂಮಿಯಿಂದ ಗುರುತಿಸಿಕೊಂಡಿದ್ದರು. ಅವರ ನಟಿಸಿದ್ದ ಸಂಸಾರದಲ್ಲಿ ಸರಿಗಮ ಎನ್ನುವ ನಾಟಕವು ಬಹಳಷ್ಟು ಜನಪ್ರಿಯತೆ ಗಳಿಸಿತ್ತು. ಈ ಹಿನ್ನೆಲೆಯಲ್ಲಿ ಅವರ ಹೆಸರಿನೊಂದಿಗೆ ಸರಿಗಮ ಎನ್ನುವುದು ಸಹ ಸೇರಿಕೊಂಡಿತ್ತು.
ಬಹುಮುಖ ಪ್ರತಿಭೆ: ವಿಜಿ ಅವರು ಬಹುಮುಖ ಪ್ರತಿಭೆಯಾಗಿದ್ದರು. ರಂಗಭೂಮಿ, ಕಿರುತೆರೆ ಹಾಗೂ ಬೆಳ್ಳಿ ಪರದೆಯ ಮೇಲೆ ಮಿಂಚಿದ್ದರು. ಅಷ್ಟೇ ಅಲ್ಲ ನಿರ್ದೇಶಕ ಹಾಗೂ ನಟರಾಗಿಯೂ ಅವರು ಮಿಂಚಿದ್ದರು. ಚಿತ್ರರಂಗಕ್ಕೆ ಬಂದ ಪ್ರಾರಂಭದ ದಿನಗಳಲ್ಲಿ ಕೆಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿದ್ದರು. ಬೆಳುವಲದ ಮಡಿಲಲ್ಲಿ ಸಿನಿಮಾದ ಮೂಲಕ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.
ಕನ್ನಡದಲ್ಲಿ ಅವರು 269ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ 80 ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅಪಾರ ಅಭಿಮಾನಿ ಬಳಗವನ್ನು ಅವರು ಹೊಂದಿದ್ದಾರೆ. ವಿಜಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಸಿನಿಮಾ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಹಾಸ್ಯದ ಮೂಲಕ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ವಿಜಿ ಅವರು ಕನ್ನಡ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿದ್ದು ಸಹ ಇದೆ. ಪೋಷಕ ನಟನಾಗಿಯೂ ನಟಿಸಿದ್ದು, ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಅಪಾರ ಅಭಿಮಾನಿಗಳು ಅಂತಿಮ ದರ್ಶನಕ್ಕೆ ಬರುತ್ತಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications