ಪ್ರಜೆಗಳಾಗಿ ನಾವು ಕಾನೂನಿಗೆ ತಲೆ ಬಾಗಬೇಕು : ಯಶ್

ಬೆಂಗಳೂರು, ಜನವರಿ 03: ಕನ್ನಡ ಚಲನಚಿತ್ರರಂಗದ ಪ್ರಮುಖ ನಟ, ನಿರ್ಮಾಪಕರ ಮನೆ, ಕಚೇರಿ ಮೇಲೆ ಗುರುವಾರದಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮುಂದುವರೆಸಲಾಗಿದೆ. ಘಟನೆ ಬಗ್ಗೆ ತಿಳಿದ ಕೂಡಲೇ ಮುಂಬೈನಲ್ಲಿದ್ದ ಯಶ್ ಅವರು ಬೆಂಗಳೂರಿಗೆ ಬಂದಿದ್ದಾರೆ.

ಮುಂಬೈನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಪ್ರಜೆಗಳಾಗಿ ಕಾನೂನಿಗೆ ತಲೆ ಬಾಗಬೇಕು, ನನಗೆ ದಾಳಿ ಬಗ್ಗೆ ವಿಷಯ ತಿಳಿದ ಕೂಡಲೇ ಇಲ್ಲಿಗೆ ಆಗಮಿಸಿದ್ದೇನೆ. ಮನೆಯವರ ಜತೆ ಸಂಪರ್ಕ ಸಾಧ್ಯವಾಗಿಲ್ಲ.

ಇದು ಕೆಜಿಎಫ್ ಚಿತ್ರದ ಯಶಸ್ಸಿನ ಕಾರಣಕ್ಕೆ ಆಗಿದೆ ಎಂಬುದರ ಬಗ್ಗೆ ಏನು ಹೇಳಲಾರೆ, ಸುಮ್ಮನೆ ನಾವು ಊಹೆ ಮಾಡಿಕೊಂಡು ಹೇಳಿಕೆ ನೀಡುವುದರಲ್ಲಿ ಅರ್ಥವಿಲ್ಲ. ನಾನು ಮನೆಗೆ ಹೋಗುತ್ತಿದ್ದೇನೆ, ನಂತರ ಈ ಬಗ್ಗೆ ತಿಳಿಯಲಿದೆ ಎಂದರು.

Actor Yash reaction to Income Tax raids

ಪವರ್ ಸ್ಟಾರ್ ಪುನೀತ್, ರಾಕಿಂಗ್ ಸ್ಟಾರ್ ಯಶ್, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರ ಮನೆ ಮೇಲೆ ದಾಳಿ ನಡೆದಿದೆ. ನಿರ್ಮಾಪಕರಾದ ವಿಜಯ್ ಕಿರಗಂದೂರು, ಜಯಣ್ಣ, ಶಾಸಕ ಸಿಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

ಯಶ್ ಅವರ ಪತ್ನಿ ರಾಧಿಕಾ ಪಂಡಿತ್ ಅವರ ಗಾಯತ್ರಿ ನಗರದ ಮನೆ, ಯಶ್ ಅವರ ಕತ್ರಿಗುಪ್ಪೆ, ಹೊಸಕೆರೆಹಳ್ಳಿ ನಿವಾಸ, ಕತ್ರಿಗುಪ್ಪೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ರಾಧಿಕಾ ಅವರ ತಂದೆ ಕೃಷ್ಣಪ್ರಸಾದ್ ಅವರನ್ನು ವಿಚಾರಣೆಗಾಗಿ ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಕೃಷ್ಣಪ್ರಸಾದ್ ಅವರ ಬ್ಯಾಂಕ್ ಖಾತೆ ಬಗ್ಗೆ ಪರಿಶೀಲನೆ ನಡೆಸಲಾಗಿದೆ.

ಜಿ ಎಸ್ ಟಿ ಹೊಸ ನಿಯಾಮಾವಳಿಗಳ ಪ್ರಕಾರ 20 ಲಕ್ಷಕ್ಕೂ ಹೆಚ್ಚು ಅದಾಯ ಪಡೆದುಕೊಳ್ಳುವ ಕಲಾವಿದರು ಶೇಕಡಾ 28 ರಷ್ಟು ತೆರಿಗೆ ಪಾವತಿ ಮಾಡಬೇಕು

ಜಿ ಎಸ್ ಟಿ ಹೊಸ ನಿಯಾಮಾವಳಿಗಳ ಪ್ರಕಾರ 20 ಲಕ್ಷಕ್ಕೂ ಹೆಚ್ಚು ಅದಾಯ ಪಡೆದುಕೊಳ್ಳುವ ಕಲಾವಿದರು ಶೇಕಡಾ 28 ರಷ್ಟು ತೆರಿಗೆ ಪಾವತಿ ಮಾಡಬೇಕು

ಆದರೆ ಸಂಭಾವನೆಯನ್ನು ನಿಯಮಿತವಾಗಿ ಪಡೆದು ಸಿನಿಮಾದ ಒಟ್ಟು ಆದಾಯದಲ್ಲಿ ಇಂತಿಷ್ಟು ‌ಅಂತಾ ಪಡೆದುಕೊಳ್ಳುವ ನಟರಿಂದ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ಐಟಿ ಅಧಿಕಾರಿಗಳು ಕೋರ್ಟಿನಿಂದ ಆದೇಶ ಪಡೆದು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+