• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರಜೆಗಳಾಗಿ ನಾವು ಕಾನೂನಿಗೆ ತಲೆ ಬಾಗಬೇಕು : ಯಶ್

|
Google Oneindia Kannada News

ಬೆಂಗಳೂರು, ಜನವರಿ 03: ಕನ್ನಡ ಚಲನಚಿತ್ರರಂಗದ ಪ್ರಮುಖ ನಟ, ನಿರ್ಮಾಪಕರ ಮನೆ, ಕಚೇರಿ ಮೇಲೆ ಗುರುವಾರದಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮುಂದುವರೆಸಲಾಗಿದೆ. ಘಟನೆ ಬಗ್ಗೆ ತಿಳಿದ ಕೂಡಲೇ ಮುಂಬೈನಲ್ಲಿದ್ದ ಯಶ್ ಅವರು ಬೆಂಗಳೂರಿಗೆ ಬಂದಿದ್ದಾರೆ.

ರಾಜಕೀಯ ಪ್ರವೇಶ ಉದ್ದೇಶಕ್ಕಾಗಿ ರೈತನಿಗೆ ನೆರವಾಗುತ್ತಿಲ್ಲ: ಯಶ್ರಾಜಕೀಯ ಪ್ರವೇಶ ಉದ್ದೇಶಕ್ಕಾಗಿ ರೈತನಿಗೆ ನೆರವಾಗುತ್ತಿಲ್ಲ: ಯಶ್

ಮುಂಬೈನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಪ್ರಜೆಗಳಾಗಿ ಕಾನೂನಿಗೆ ತಲೆ ಬಾಗಬೇಕು, ನನಗೆ ದಾಳಿ ಬಗ್ಗೆ ವಿಷಯ ತಿಳಿದ ಕೂಡಲೇ ಇಲ್ಲಿಗೆ ಆಗಮಿಸಿದ್ದೇನೆ. ಮನೆಯವರ ಜತೆ ಸಂಪರ್ಕ ಸಾಧ್ಯವಾಗಿಲ್ಲ.

ಐಟಿ ದಾಳಿ ಬಗ್ಗೆ ನನಗೇನು ಆತಂಕವಿಲ್ಲ : ನಟ ಸುದೀಪ್ಐಟಿ ದಾಳಿ ಬಗ್ಗೆ ನನಗೇನು ಆತಂಕವಿಲ್ಲ : ನಟ ಸುದೀಪ್

ಇದು ಕೆಜಿಎಫ್ ಚಿತ್ರದ ಯಶಸ್ಸಿನ ಕಾರಣಕ್ಕೆ ಆಗಿದೆ ಎಂಬುದರ ಬಗ್ಗೆ ಏನು ಹೇಳಲಾರೆ, ಸುಮ್ಮನೆ ನಾವು ಊಹೆ ಮಾಡಿಕೊಂಡು ಹೇಳಿಕೆ ನೀಡುವುದರಲ್ಲಿ ಅರ್ಥವಿಲ್ಲ. ನಾನು ಮನೆಗೆ ಹೋಗುತ್ತಿದ್ದೇನೆ, ನಂತರ ಈ ಬಗ್ಗೆ ತಿಳಿಯಲಿದೆ ಎಂದರು.


ಪವರ್ ಸ್ಟಾರ್ ಪುನೀತ್, ರಾಕಿಂಗ್ ಸ್ಟಾರ್ ಯಶ್, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರ ಮನೆ ಮೇಲೆ ದಾಳಿ ನಡೆದಿದೆ. ನಿರ್ಮಾಪಕರಾದ ವಿಜಯ್ ಕಿರಗಂದೂರು, ಜಯಣ್ಣ, ಶಾಸಕ ಸಿಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

ಯಶ್ ಅವರ ಪತ್ನಿ ರಾಧಿಕಾ ಪಂಡಿತ್ ಅವರ ಗಾಯತ್ರಿ ನಗರದ ಮನೆ, ಯಶ್ ಅವರ ಕತ್ರಿಗುಪ್ಪೆ, ಹೊಸಕೆರೆಹಳ್ಳಿ ನಿವಾಸ, ಕತ್ರಿಗುಪ್ಪೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ರಾಧಿಕಾ ಅವರ ತಂದೆ ಕೃಷ್ಣಪ್ರಸಾದ್ ಅವರನ್ನು ವಿಚಾರಣೆಗಾಗಿ ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಕೃಷ್ಣಪ್ರಸಾದ್ ಅವರ ಬ್ಯಾಂಕ್ ಖಾತೆ ಬಗ್ಗೆ ಪರಿಶೀಲನೆ ನಡೆಸಲಾಗಿದೆ.

ಸ್ಯಾಂಡಲ್ ವುಡ್ ನಟರಿಗೆ ಬಿಗ್ ಶಾಕ್! ಯಾರ್ಯಾರ ಮನೆ ಮೇಲೆ ಐಟಿ ದಾಳಿ?ಸ್ಯಾಂಡಲ್ ವುಡ್ ನಟರಿಗೆ ಬಿಗ್ ಶಾಕ್! ಯಾರ್ಯಾರ ಮನೆ ಮೇಲೆ ಐಟಿ ದಾಳಿ?

ಜಿ ಎಸ್ ಟಿ ಹೊಸ ನಿಯಾಮಾವಳಿಗಳ ಪ್ರಕಾರ 20 ಲಕ್ಷಕ್ಕೂ ಹೆಚ್ಚು ಅದಾಯ ಪಡೆದುಕೊಳ್ಳುವ ಕಲಾವಿದರು ಶೇಕಡಾ 28 ರಷ್ಟು ತೆರಿಗೆ ಪಾವತಿ ಮಾಡಬೇಕು

ಜಿ ಎಸ್ ಟಿ ಹೊಸ ನಿಯಾಮಾವಳಿಗಳ ಪ್ರಕಾರ 20 ಲಕ್ಷಕ್ಕೂ ಹೆಚ್ಚು ಅದಾಯ ಪಡೆದುಕೊಳ್ಳುವ ಕಲಾವಿದರು ಶೇಕಡಾ 28 ರಷ್ಟು ತೆರಿಗೆ ಪಾವತಿ ಮಾಡಬೇಕು

ನಟ ಪುನೀತ್, ಶಿವಣ್ಣ, ರಾಕ್ ಲೈನ್ ಮನೆ ಮೇಲೆ ಐಟಿ ದಾಳಿನಟ ಪುನೀತ್, ಶಿವಣ್ಣ, ರಾಕ್ ಲೈನ್ ಮನೆ ಮೇಲೆ ಐಟಿ ದಾಳಿ

ಆದರೆ ಸಂಭಾವನೆಯನ್ನು ನಿಯಮಿತವಾಗಿ ಪಡೆದು ಸಿನಿಮಾದ ಒಟ್ಟು ಆದಾಯದಲ್ಲಿ ಇಂತಿಷ್ಟು ‌ಅಂತಾ ಪಡೆದುಕೊಳ್ಳುವ ನಟರಿಂದ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಅಂಶವನ್ನು ಮುಂದಿಟ್ಟುಕೊಂಡು ಐಟಿ ಅಧಿಕಾರಿಗಳು ಕೋರ್ಟಿನಿಂದ ಆದೇಶ ಪಡೆದು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

English summary
Actor Yash reaction to Income Tax raids at his residence and office.Yash today evening returned KIAL and rushed to his house at Hosakerehalli from Mumbai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X