Arohita joins AAP : ಬೆಂಗಳೂರಿನಲ್ಲಿ ಆಪ್ ಸೇರಿದ 'ಕಿರಿಕ್ ಪಾರ್ಟಿ' ಕುವರಿಗೆ ವಸಂತನಗರದ ಮೇಲೆ ಕಣ್ಣು!
ಬೆಂಗಳೂರು, ಸೆಪ್ಟೆಂಬರ್ 15: ಸಿನಿಮಾ ಮಂದಿ ರಾಜಕೀಯಕ್ಕೆ ಹೋಗುವುದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಂತೆ ಆಗುತ್ತಿದೆ. ಸಿನಿ ವಲಯದಲ್ಲಿ ಮಿಂಚಿದ ನಾಯಕ-ನಾಯಕಿಯರು ನಂತರದಲ್ಲಿ ರಾಜಕಾರಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಾರೆ. ಅದೇ ರೀತಿ ಕಿರಿಕ್ ಪಾರ್ಟಿ ಕುವರಿ ಇದೀಗ ಕೈಯಲ್ಲಿ ಆಮ್ ಆದ್ಮಿ ಪೊರಕೆ ಹಿಡಿದು ನಿಂತಿದ್ದಾರೆ.
ಕನ್ನಡದ ಅಧ್ಯಕ್ಷ ಸಿನಿಮಾದ ಮೂಲಕ ಮುನ್ನಲೆಗೆ ಬಂದಿರುವ ನಟಿ ಆರೋಹಿತ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ರಾಜಕೀಯ ಪ್ರವೇಶ ಪಡೆದುಕೊಂಡರು. ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನಟಿ ಆರೋಹಿತರನ್ನು ಎಎಪಿಗೆ ಸ್ವಾಗತಿಸಿದರು.
ಕರ್ನಾಟಕದ ಅನೇಕ ಗಣ್ಯ ಹಾಗೂ ಪ್ರಾಮಾಣಿಕ ವ್ಯಕ್ತಿಗಳು ಭ್ರಷ್ಟಾಚಾರ ಹಾಗೂ ಒಡೆದು ಆಳುವ ನೀತಿಯಿಂದ ಬೇಸತ್ತು ಆಮ್ ಆದ್ಮಿ ಪಾರ್ಟಿಗೆ ಸೇರುತ್ತಿದ್ದಾರೆ. ಈಗ ಈ ಸಾಲಿಗೆ ನಟಿ ಆರೋಹಿತ ಸೇರ್ಪಡೆಯಾಗಿದ್ದು, ಸ್ವಚ್ಛ ರಾಜಕೀಯವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಆಪ್ ಕಡೆಗೆ ಹೊರಳುತ್ತಿರುವ ನಾಯಕರು
ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಈಗಾಗಲೇ ತನ್ನ ಸಾಮರ್ಥ್ಯವನ್ನು ಪ್ರೂವ್ ಮಾಡಿರುವ ಆಮ್ ಆದ್ಮಿ ಪಕ್ಷವನ್ನು ರಾಜ್ಯದಲ್ಲಿ ಬೆಳೆಸುವುದಕ್ಕೆ ಎಲ್ಲ ರೀತಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದ ಹಲವು ನಾಯಕರು ಆಪ್ ತಂಡವನ್ನು ಸೇರಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಹೊಸ್ತಿಲಿನಲ್ಲಿ ನಾಯಕರು ತಮ್ಮ ರಾಜಕೀಯ ನೆಲೆ ಕಂಡುಕೊಳ್ಳುವುದಕ್ಕೆ ಅಣಿಯಾಗುತ್ತಿದ್ದಾರೆ. ನಟಿ ಆರೋಹಿತ ಕೂಡ ಅದೇ ಸಾಲಿಗೆ ಸೇರಿದ್ದಾರೆ.

ನಟಿ ಆರೋಹಿತ ಬಗ್ಗೆ ನಿಮಗೆಷ್ಟು ಗೊತ್ತು?
ಬೆಂಗಳೂರಿನ ವಸಂತ ನಗರ ನಿವಾಸಿ ಆಗಿರುವ ಆರೋಹಿತ ಬಿ.ಕಾಂ ಪದವೀಧರೆ ಆಗಿದ್ದಾರೆ. ಕರಾಟೆ ಪಟುವಾದ ನಟಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಅಭಿನಯ ತರಂಗ ಸಂಸ್ಥೆಯಲ್ಲಿ ನಾಟಕದಲ್ಲಿ ಅಭಿನಯಿಸುವುದನ್ನು ಕಲಿತು, ನಂತರ ಕನ್ನಡ ಚಿತ್ರರಂಗವನ್ನು ಪ್ರವೇಶಿಸಿದ್ದರು. ಅಧ್ಯಕ್ಷ, ಆಟಗಾರ, ರಾಜರಾಜೇಂದ್ರ, ಜಗ್ಗಿ, ಭಾಗ್ಯ ರಾಜ್, ಕಿರಿಕ್ ಪಾರ್ಟಿ, ಗೌಡ್ರು ಹೋಟೆಲ್, ಕಾವೇರಿ, ಆಯುಷ್ಮಾನ್ ಭವ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾಜಕೀಯಕ್ಕೆ ಲಗ್ಗೆಯಿಟ್ಟ ಕಿರಿಕ್ ಪಾರ್ಟಿ ಹುಡುಗಿಯ ಗುರಿಯೇನು?
ಎಎಪಿ ಸೇರ್ಪಡೆ ಕುರಿತು ಮಾತನಾಡಿದ ನಟಿ ಆರೋಹಿತ, "ಕರ್ನಾಟಕ ಹಾಗೂ ದೇಶದೆಲ್ಲೆಡೆ ಯುವಜನತೆಯು ಬದಲಾವಣೆ ಬಯಸುತ್ತಿರುವುದನ್ನು ಗಮನಿಸುತ್ತಿದ್ದೇನೆ. ಹೀಗಾಗಿ ಬದಲಾವಣೆ ಸಾಧ್ಯವಾಗಬೇಕಾದರೆ ಶಾಲೆಗಳಲ್ಲಿ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯು ಸರ್ಕಾರಿ ಶಾಲೆಗಳಲ್ಲಿ ಅದ್ಭುತ ಬದಲಾವಣೆ ತಂದಿದೆ. ಸ್ವಚ್ಛ ಹಾಗೂ ಗುಣಮಟ್ಟದ ಆಡಳಿತದಿಂದ ಮಾತ್ರ ಇದು ಸಾಧ್ಯವಾಗುತ್ತದೆ. ಕರ್ನಾಟಕದಲ್ಲೂ ಅಂತಹ ಆಡಳಿತ ಬರಬೇಕು ಎಂಬ ಉದ್ದೇಶದಿಂದ ಎಎಪಿ ಸೇರಿದ್ದೇನೆ," ಎಂದು ಹೇಳಿದರು.

ಆಪ್ ರಾಜ್ಯಾಧ್ಯಕ್ಷರು ಆರೋಹಿತ ಕುರಿತು ಏನು ಹೇಳುವರು?
ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ, "ಆರೋಹಿತರಂತ ಪ್ರತಿಭಾವನ್ವಿತರು ಸಮಾಜದಲ್ಲಿ ಬದಲಾವಣೆ ತರಬೇಕೆಂಬ ಛಲದೊಂದಿಗೆ ಎಎಪಿ ಸೇರಿದ್ದನ್ನು ನಾವು ಪ್ರತಿದಿನ ನೋಡುತ್ತಿದ್ದೇವೆ. ಇಂತಹ ನಿಪುಣ ಹಾಗೂ ಪ್ರಬಲ ವ್ಯಕ್ತಿತ್ವಗಳನ್ನು ಆಮ್ ಆದ್ಮಿ ಪಾರ್ಟಿ ಮಾತ್ರ ಆಕರ್ಷಿಸಿ, ಕರ್ನಾಟಕದಲ್ಲಿ ಬದಲಾವಣೆ ತರಬಲ್ಲದು" ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, "ತಮ್ಮ ಸ್ವಂತ ವಾರ್ಡ್ ವಸಂತ ನಗರದಿಂದ ಆರೋಹಿತ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲು ಬಯಸಿರುವುದು ಸಂತಸ ತಂದಿದೆ. ಅವರು ಅಲ್ಲಿ ಜಯಗಳಿಸಿ ನವ ಬೆಂಗಳೂರು ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆಂಬ ವಿಶ್ವಾಸವಿದೆ," ಎಂದು ಹೇಳಿದರು.
-
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications