ನಟಿ ಚಂದನಾ ಆತ್ಮಹತ್ಯೆ; ಪ್ರಿಯಕರ ದಿನೇಶ್ ಬಂಧನ

ಬೆಂಗಳೂರು, ಜೂನ್ 07 : ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಿನೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದನಾ ಮೇ 28ರಂದು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಸದ್ದುಗುಂಟೆಪಾಳ್ಯ ಪೊಲೀಸರು ಚಂದನಾ (29) ಪ್ರಿಯಕರ ದಿನೇಶ್‌ನನ್ನು ಬಂಧಿಸಿದ್ದಾರೆ. ಚಂದನಾ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಬೆಳಕಿಗೆ ಬಂದ ಬಳಿಕ ದಿನೇಶ್ ತಲೆಮರೆಸಿಕೊಂಡಿದ್ದ. ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನ ಮನೆಯಲ್ಲಿ ಮೇ 28ರಂದು ಚಂದನಾ ಸೆಲ್ಫಿ ವಿಡಿಯೋ ಮಾಡಿ, ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದರು.

dinesh

ಚಂದನಾ ಮತ್ತು ದಿನೇಶ್ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಚಂದನಾ ಬಳಿ 5 ಲಕ್ಷ ಹಣವನ್ನು ಪಡೆದಿದ್ದ ಆರೋಪಿ ದಿನೇಶ್ ದೈಹಿಕ ಸಂಪರ್ಕವನ್ನು ಬೆಳೆಸಿದ್ದ ಎಂದು ಆರೋಪಿಸಲಾಗಿದೆ. ಆದರೆ, ವಿವಾಹವಾಗಲು ಆತ ನಿರಾಕರಿಸಿದ್ದ.

ದಿನೇಶ್ ತನಗೆ ಮೋಸ ಮಾಡಿದ್ದಾನೆ ಎಂದು ಕಣ್ಣೀರು ಹಾಕುತ್ತಾ ವಿಡಿಯೋ ಮಾಡಿದ್ದ ಚಂದನಾ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಪತ್ತೆಯಾಗಿದ್ದ ದಿನೇಶ್ ಈಗ ಪೊಲೀಸರ ಬಲಗೆ ಬಿದಿದ್ದಾನೆ.

ಕಾನೂನು ಕ್ರಮಕ್ಕೆ ಆಗ್ರಹ : "ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು" ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಒತ್ತಾಯಿಸಿದ್ದರು.

"ಆರೋಪಿ ದಿನೇಶ್‌ನನ್ನು ಕೂಡಲೇ ಬಂಧಿಸಬೇಕು. ಅವನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು" ಎಂದು ಒತ್ತಾಯಿಸಿದ್ದರು. ಮಹಿಳಾ ಆಯೋಗದ ವತಿಯಿಂದಲೂ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+