ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರ: ಮೌಲ್ವಿ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು, ಡಿಸೆಂಬರ್ 14: ಡ್ರಗ್ ಜಾಲದಲ್ಲಿ ಜೈಲಿಗೆ ಹೋಗಿದ್ದ ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಅವರನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರೊಗಳಿಸಲಾಗಿದೆ ಎಂದು ಆರೋಪಿ ಮುಸ್ಲಿಂ ಮೌಲ್ವಿ ವಿರುದ್ದ ಕಾಟನ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
Recommended Video
ಡ್ರಗ್ ಜಾಲ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ಸಂಜನಾ ಅವರಿಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ಇದೇ ಆಧಾರದ ಮೇಲೆ ಜಾಮೀನು ನೀಡುವಂತೆ ಕೋರಿ ಸಂಜನಾ ಪರ ವಕೀಲರು ಹೈಕೋರ್ಟ್ ಮೊರೆ ಹೊಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಮೂರು ತಿಂಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸಂಜನಾ ಇತ್ತೀಚೆಗೆ ಬಿಡುಗಡೆಯಾಗಿದ್ದರು. ಇದೀಗ ಅವರು ಬಲವಂತವಾಗಿ ಮತಾಂತರಗೊಂಡ ಪ್ರಕರಣದಲ್ಲಿ ಸಂಕಷ್ಟಕ್ಕೀಡಾಗಿದ್ದಾರೆ.
ಸ್ಯಾಂಡಲ್ ವಡ್ ನಟಿ ಸಂಜನಾ ಅವರನ್ನು ಬಲವಂತಾವಿ ದೂಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ. ಟ್ಯಾಣರಿ ರಸ್ತೆಯ ದಾರುಲ್ ಉಲಮ್ ಶಾವಲಿಲುಲ್ಲಾ ಎಂಬ ಮೌಲ್ವಿ ಬಲವಂತವಾಗಿ ಮತಾಂತರಗೊಳಿಸಿದ್ದಾರೆ ಎಂದು ಆರೋಪಿಸಿ ವಕೀಲ ಅಮೃತೇಶ್ ಕಾಟನ್ ಪೇಟೆ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ನಟಿ ಸಂಜನಾ 2018 ಅಕ್ಟೋಬರ್ 09 ರಂದು ಹಿಂದೂ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮಾಂತರ ಮಾಡಲಾಗಿದೆ. ಅಲ್ಲದೇ ಅವರಿಗೆ "ಮಹಿರಾ" ಎಂದು ಹೆಸರು ಮರು ನಾಮಕರಣ ಮಾಡಲಾಗಿದೆ. ಇದಕ್ಕೆ ದಾಖಲಾಗಿ ಮರು ನಾಮಕರಣ ಮಾಡಿದ ಪ್ರಮಾಣ ಪತ್ರ ನೀಡಲಾಗಿದೆ. ಆದರೆ ಮತಾಂತರ ನಟಿಯ ಇಚ್ಛೆಯ ವಿರುದ್ಧ ಬಲವಂತದಿಂದ ನಡೆದಿದೆ ಎಂದು ಎಫ್ಐಆರ್ ನಲ್ಲಿ ವಿವರಿಸಲಾಗಿದೆ. ಈ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.
ನಟಿ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಅಜೀಜ್ ಎಂಬುವರು ಮದುವೆಯಾಗಿದ್ದಾರೆಂದು ಹೇಳಲಾದ ಪೋಟೋ ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿತ್ತು. ಈ ವೇಳೆ ಸಂಜನಾ ಮತಾಂತರ ಗೊಂಡು ಹೆಸರು ಬದಲಿಸಿಕೊಂಡಿರುವ ದಾಖಲೆಗಳು ಹೊರ ಬಿದ್ದಿದ್ದವು.
ಸ್ವಯಂ ಪ್ರೇರಿತ ಮತಾಂತರ: ಸಂಜನಾ ಮತಾಂತರ ಸಂಗತಿ ಹೊರ ಬೀಳುತ್ತಿದ್ದಂತೆ ಟ್ಯಾನರಿ ರಸ್ತೆಯ ಮದರಸಾ ಮೌಲ್ವಿ ಪ್ರತಿಕ್ರಿಯೆ ನೀಡಿದ್ದರು. ಸಂಜನಾ ಇಬ್ಬರ ಜತೆ ಸ್ವಯಂ ಪ್ರೇರಿತವಾಗಿ ಬಂದು ಮತಾಂತರಗೊಂಡಿದ್ದರು. ಅವರು ಇಸ್ಲಾಂ ಧರ್ಮದ ತತ್ವ ಸಿದ್ಧಾಂತ ಒಪ್ಪಿ ಬಂದಿರುವುದಾಗಿ ಹೈಕೋರ್ಟ್ ನಿಂದ ಪ್ರಮಾಣ ಪತ್ರ ತಂದಿದ್ದರು. ಅವರನ್ನು ಯಾರೂ ಬಲವಂತವಾಗಿ ಮತಾಂತರ ಮಾಡಿಲ್ಲ. ನ್ಯಾಯಾಲಯದ ಪ್ರಮಾಣ ಪತ್ರ ನೋಡಿಯೇ ಮಾಡಿರಿವುದಾಗಿ ಮೌಲ್ವಿ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದರು. ಇದೀಗ ಜಾಮೀನು ಮೇಲೆ ಬಿಡುಗಡೆಯಾಗಿರುವ ಸಂಜನಾ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರನ್ನು ಈ ವಿವಾದ ಕುರಿತು ಸಂಪರ್ಕಿಸಲು ಪ್ರಯತ್ನಿಸಿದರೂ ಸಿಗಲಿಲ್ಲ.
ವೈದ್ಯ ಅಜೀಜ್ ಅವರನ್ನು ಮದುವೆಯಾಗುವ ಸಲುವಾಗಿಯೇ ಸಂಜನಾ ಮತಾಂತರಗೊಂಡು ಮಹಿರಾ ಎಂಬ ಹೆಸರು ಇಟ್ಟುಕೊಂಡಿದ್ದರು. ಇದೀಗ ಎಫ್‌ಐಆರ ದಾಖಲಾದ ಹಿನ್ನೆಲೆಯಲ್ಲಿ ಸಂಜನಾ ಅವರನ್ನು ಮತಾಂತರಗೊಳಿಸಿದ ಮೌಲ್ಲಿ, ನಟಿಯನ್ನು ಕರೆದೊಯ್ದಿದ್ದ ಇಬ್ಬರನ್ನು ವಿಚಾರಣೆ ನಡೆಸಲಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications