ನಟಿ ಸಂಜನಾಗೆ ಸಂಕಟ, ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು
ಬೆಂಗಳೂರು, ಜನವರಿ 13: ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ನಟಿ ಸಂಜನಾ ಗಲ್ ರಾಣಿ ಅವರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಡುರಸ್ತೆಯಲ್ಲಿ ಕಾನೂನು ಉಲ್ಲಂಘನೆ ಮಾಡಿದ ಆರೋಪ ನಟಿ ಮೇಲೆ ಹೊರೆಸಲಾಗಿದೆ.
ಬೆಂಗಳೂರಿನ ಉಪ್ಪಾರಪೇಟೆ ಟ್ರಾಫಿಕ್ ಪೊಲೀಸರು, ನಟಿ ಸಂಜನಾ ಹಾಗೂ ಅವರ ಜೊತೆಗಿದ್ದ ವ್ಯಕ್ತಿ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಜನಾ ಅವರು ಓಪನ್ ಕಾರಿನಲ್ಲಿ ಚಲಿಸುತ್ತಾ ವಿಡಿಯೋ ಮಾಡಿದ್ದಾರೆ. ಟ್ರಾಫಿಕ್ ನಿಯಮದ ಪ್ರಕಾರ ಡ್ರೈವಿಂಗ್ ಮಾಡುವಾಗ ಮೊಬೈಲ್ ಫೋನ್ ಬಳಕೆ ನಿರ್ಬಂಧಿಸಲಾಗಿದೆ.

ಆದರೆ ಡ್ರೈವ್ ಮಾಡುತ್ತಾ ಮಾತನಾಡುತ್ತಿದ್ದ ಸಂಜನಾ ಅವರು ನಾನು ಈಗ ತೆಲುಗು ಸಿನಿಮಾ ''ಸರಿಲೇನು ನಿಕ್ಕೆವರು'' ನೋಡೋಕೆ ಹೋಗ್ತಾ ಇದ್ದೀನಿ, ಐ ಲವ್ ಮಹೇಶ್ ಬಾಬು.. ಧಕ್ ಧಕ್ ಧಕ್ ಎಂದು ಹಾರ್ಟ್ ಸಿಂಬಲ್ ತೋರಿಸುತ್ತಾ, ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತಾರೆ. ಟ್ರಾಫಿಕ್ ನಡುವೆ ಕಾರಿನಲ್ಲಿ ಕುಳಿತು ವಿಡಿಯೋ ಹಂಚಿಕೊಂಡಿರುವ ಸಂಜನಾ ವಿರುದ್ಧ ಟ್ರಾಫಿಕ್ ಪೊಲೀಸರು ಗರಂ ಆಗಿದ್ದಾರೆ.
#BIGNEWS: Sandalwood actress #Sanjjanaagalrani lands in trouble for violating traffic rules. #Upparpet Traffic Police register a case against the actress for filming using a mobile while driving. pic.twitter.com/1DrMUZ7dJF
— NEWS9 (@NEWS9TWEETS) January 13, 2020
ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ದೇಶಾದ್ಯಂತ ಜಾರಿಗೆ ಬಂದ ಬಳಿಕ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದರೆ ಭಾರಿ ದಂಡ ವಿಧಿಸಲಾಗುತ್ತದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications