• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇಂದಿರಾ ಕ್ಯಾಂಟೀನ್‌ಗೆ ಅದಮ್ಯ ಚೇತನ ಸಂಸ್ಥೆಯಿಂದ ಆಹಾರ ಪೂರೈಕೆ?

|

ಬೆಂಗಳೂರು, ಫೆಬ್ರವರಿ 5: ಇಂದಿರಾ ಕ್ಯಾಂಟೀನ್‌ಗೆ ಇನ್ನುಮುಂದೆ ಅದಮ್ಯ ಚೇತನ ಸಂಸ್ಥೆ ಆಹಾರ ಸರಬರಾಜು ಮಾಡಲಿದೆ.

ಇಂದಿರಾ ಕ್ಯಾಂಟೀನ್ ಆರಂಭದಿಂದ ಈವರೆಗೆ ಆಹಾರ ಸರಬರಾಜು ಗುತ್ತಿಗೆ ಪಡೆದುಕೊಂಡಿದ್ದ ಚೇಫ್‌ಟಾಕ್ ಮತ್ತು ರಿವಾರ್ಡ್ಸ್‌ ಸಂಸ್ಥೆಯ ವಿರುದ್ಧ ಸಾಕಷ್ಟು ಆರೋಪ ಹಾಗೂ ಪೊಲೀಸ್ ತನಿಖೆ ನಡೆಯುತ್ತಿರುವುದರಿಂದ ಇಂದಿರಾ ಕ್ಯಾಂಟೀನ್ ಆಹಾರ ಸರಬರಾಜು ಗುತ್ತಿಗೆ ಅದಮ್ಯ ಚೇತನಕ್ಕೆ ನೀಡಲು ನಿರ್ಧರಿಸಲಾಗಿದೆ.

ಬಿಬಿಎಂಪಿ ಸದಸ್ಯರಿಗೆ ಇಂದಿರಾ ಕ್ಯಾಂಟೀನ್‌ ಊಟವಿಲ್ಲ!

ಚೆಫ್‌ಟಾಕ್ ಮತ್ತು ರಿವಾರ್ಡ್ಸ್ ಸಂಸ್ಥೆಯ ಗುತ್ತಿಗೆ ಕಳೆದ ಆಗಸ್ಟ್ 15ಕ್ಕೆ ಮುಕ್ತಾಯಗೊಂಡಿದೆ.ಹೀಗಾಗಿ ನಾಲ್ಕು ಪ್ಯಾಕೇಜ್‌ಗಳಲ್ಲಿ ನಗರದ ಸ್ಥಿರ ಹಾಗೂ ಮೊಬೈಲ್ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಕಳೆದ ಡಿಸೆಂಬರ್‌ನಲ್ಲಿ ಟೆಂಡರ್ ಆಹ್ವಾನಿಸಲಾಗಿತ್ತು.

4 ಪ್ಯಾಕೇಜ್ ಪೈಕಿ 3 ಪ್ಯಾಕೇಜ್‌ನಲ್ಲಿ ಚೇಫ್‌ಟಾಕ್ ಮತ್ತು ರಿವಾರ್ಡ್ಸ್ ಸಂಸ್ಥೆಗಳು ಅತಿ ಕಡಿಮೆ ದರ ನಮೂದಿಸಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ.ಈ ನಡುವೆ ಚೆಫ್‌ಟಾಕ್ ಮತ್ತು ರಿವಾರ್ಡ್ಸ್ ಸಂಸ್ಥೆಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿಬಿಎಂಪಿ ಅಧಿಕಾರಿಗಳೇ ಈ ಎರಡು ಸಂಸ್ಥೆಗಳು 2017ರ ಆಗಸ್ಟ್‌ ನಿಂದ ಇಂದಿರಾ ಕ್ಯಾಂಟೀನ್‌ಗೆ ಆಹಾರ ಪೂರೈಕೆಯಲ್ಲಿ ಅವ್ಯವಹಾರ ಮಾಡಿದೆ ಎನ್ನುವ ಆರೋಪ ಕೇಳಿಬಂದಿತ್ತು.

English summary
The Adamya Chetana Organisation, Led by Tejaswini Anant Kumar, Is likely To win the contract for Supply Food to Indira Canteen.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X