ಕರ್ನಾಟಕದಲ್ಲಿ ಹೂಡಿಕೆ ಮಾಡಲು ವೈಮಾನಿಕ ಸಂಸ್ಥೆಗಳಿಗೆ ಸಿಎಂ ಮನವಿ
ಬೆಂಗಳೂರು, ಫೆಬ್ರವರಿ 20: ಕರ್ನಾಟಕ ಹಾಗೂ ಬೆಂಗಳೂರು ಭಾರತದ ಬಾಹ್ಯಾಕಾಶ ರಾಜಧಾನಿ ಎಂಬ ಹೆಗ್ಗಳಿಕೆಯನ್ನು ಹೊಂದಿದೆ.
ಕರ್ನಾಟಕದಲ್ಲಿನ ಔದ್ಯೋಗಿಕ ಅವಕಾಶಗಳನ್ನು ಬಳಸಿಕೊಂಡು ಏರೋ ಇಂಡಿಯಾವನ್ನು ಇನ್ನಷ್ಟು ಯಶಸ್ವಿಗೊಳಿಸಬೇಕೆಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಏರೋ ಇಂಡಿಯಾ ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಹಾಗೂ ಬೆಂಗಳೂರು ಮೊದಲಿನಿಂದಲೂ ಏರೋಸ್ಪೇಸ್ ಕೈಗಾರಿಕೆಗಳಿಗೆ ಪ್ರಾಶಸ್ತ್ಯ ಜಾಗವಾಗಿದೆ. ಕರ್ನಾಟಕದಲ್ಲಿ ಸಾಕಷ್ಟು ವೈಮಾನಿಕ ಹಬ್‌ಗಳು ಹಾಗೂ ಎಸ್‌ಇಝಡ್‌ಗಳು ಕೂಡ ಇರುವುದು ಇದಕ್ಕೆ ಉದಾಹರಣೆಯಾಗಿದೆ.

ಈ ಇಟ್ಟಿನಲ್ಲಿ ಕರ್ನಾಟಕ ಮುಂದಿನ ನಾಲ್ಕು ದಿನಗಳಲ್ಲಿ 50ಕ್ಕೂ ಹೆಚ್ಚು ಸಂಸ್ಥೆಗಳ ಜತೆಗೆ ಮಾತುಕತೆ ನಡೆಸುತ್ತಿದೆ. ಕರ್ನಾಟಕದಲ್ಲಿ ಈ ಕಂಪನಿಗಳು ಇನ್ನಷ್ಟು ಹೂಡಿಕೆ ಮಾಡಬೇಕು ಹಾಗೂ ಏರೋಸ್ಪೇಸ್ ಕೈಗಾರಿಕೆಗಳ ಬೆಳವಣಿಗೆಗೆ ಮುಂದಾಗಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ ನಿನ್ನ ಸೂರ್ಯ ಕಿರಣ ಅವಘಡದಲ್ಲಿ ಮೃತಪಟ್ಟ ಪೈಲಟ್ ಸಾಹಿಲ್ ಗಾಂಧಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ ಸೂಚಿಸಿದರು.












Click it and Unblock the Notifications