ಏರೋ ಇಂಡಿಯಾ 2021: ವೈದ್ಯಕೀಯ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧತೆ

ಬೆಂಗಳೂರು,ಜನವರಿ 28: ಏರೋ ಇಂಡಿಯಾ ಸಂದರ್ಭದಲ್ಲಿ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಬೆಂಗಳೂರಿನ 62 ಆಸ್ಪತ್ರೆಗಳಲ್ಲಿ 2500ಕ್ಕೂ ಹೆಚ್ಚು ಹಾಸಿಗೆಗಳನ್ನು ಮೀಸಲಿಡಲಾಗಿದೆ. ಒಟ್ಟು 14 ಸರ್ಕಾರಿ ಹಾಗೂ 48 ಖಾಸಗಿ ಆಸ್ಪತ್ರೆಗಳಿರಲಿವೆ.26 ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. 46 ಮೆಡಿಕಲ್ ಅಸಿಸ್ಟೆಂಟ್‌ಗಳು ಇರಲಿದ್ದಾರೆ.

ಭಾರತೀಯ ವಾಯುಸೇನೆ ಕಮಾಂಡ್ ಆಸ್ಪತ್ರೆಯಲ್ಲಿ 105 ಸ್ಪೆಷಾಲಿಸ್ಟ್ ಹಾಗೂ 500 ಮೆಡಿಕಲ್ ಅಸಿಸ್ಟೆನ್ಸ್‌ಗಳಿರಲಿದ್ದಾರೆ.ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ನೈಸರ್ಗಿಕ ವಿಪತ್ತು ನಿರ್ವಹಣಾ ಮಾರ್ಗಸೂಚಿ ಪ್ರಕಟವಾಗಿರುವ ಮಾಹಿತಿ ಲಭ್ಯವಾಗಿದೆ.

Aero India 2021: 2,500 Hospital Beds, 4 Aircraft On Standby For Medical Emergencies

ಕಳೆದ ವರ್ಷ ಏರೋ ಇಂಡಿಯಾ ಪ್ರದರ್ಶನದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದ ಹಿನ್ನೆಲೆಯಲ್ಲಿ ಈ ಬಾರಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ, ಏರೋ ಇಂಡಿಯಾ ಪ್ರದರ್ಶನದ ವೇಳೆ ಸಂಭವಿಸಬಹುದಾದ ಸುಮಾರು 10ಕ್ಕು ಹೆಚ್ಚು ಬಗೆಯ ವಿಪತ್ತುಗಳನ್ನು ಗುರುತಿಸಲಾಗಿದೆ .

ವಿಪತ್ತು ನಿರ್ವಹಣೆಗಾಗಿ ಒಬ್ಬ ಪ್ರತ್ಯೇಕ ಅಧಿಕಾರಿಯನ್ನೇ ನಿಯೋಜಿಸಿದ್ದೇವೆ,ಫೆಬ್ರವರಿ 3ರಿಂದ 5 ರ ವರೆಗೆ 2021 ಏರ್ ಷೋ ನಡೆಯಲಿದೆ,ಒಟ್ಟು 14 ರಾಷ್ಟ್ರಗಳ 541 ಪ್ರದರ್ಶಕರು ಭಾಗವಹಿಸಲಿದ್ದಾರೆ, 463 ಭಾರತೀಯ, 78 ವಿದೇಶಿ ಪ್ರದರ್ಶಕರು ಭಾಗವಹಿಸಲಿದ್ದಾರೆ,61 ವಿಮಾನಗಳು ಪ್ರದರ್ಶನಗೊಳ್ಳಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+