Aero India 2023: ಮಾಂಸ ಮಾರಾಟ ನಿಷೇಧ ಹಿಂಪಡೆದ ಬಿಬಿಎಂಪಿಯಿಂದ ತ್ಯಾಜ್ಯ ವಿಲೇವಾರಿಗೆ ಸೂಚನೆ
ಏರೋ ಇಂಡಿಯಾ 2023 ನಡೆಯಲಿರುವ ಬೆಂಗಳೂರಿನ ಯಲಹಂಕ ವಾಯುನೆಲೆ ವ್ಯಾಪ್ತಿಗೆ ಸಂಬಂಧಪಟ್ಟಂತೆ ಮಾಂಸ ಮಾರಾಟ ನಿಷೇಧಿಸಿದ ಆದೇಶ ಹಿಂಪಡೆದಿದ್ದೇಕೆ ಬಿಬಿಎಂಪಿ, ತಿಳಿಯಿರಿ.
ಬೆಂಗಳೂರು, ಫೆಬ್ರುವರಿ 05: ಏರೋ ಇಂಡಿಯಾ 2023 ನಡೆಯಲಿರುವ ಬೆಂಗಳೂರಿನ ಯಲಹಂಕ ವಾಯುನೆಲೆ ವ್ಯಾಪ್ತಿಗೆ ಸಂಬಂಧಪಟ್ಟಂತೆ ಮಾಂಸ ಮಾರಾಟ ನಿಷೇಧಿಸಿದ ಹೊರಡಿಸಿದ್ದ ಆದೇಶವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಹಿಂಪಡೆದಿದೆ. ಜೊತೆಗೆ ಮಾಂಸಾಹಾರ ತ್ಯಾಜ್ಯವನ್ನು ಸೂಕ್ತ ವಿಲೇವಾರಿಗೆ ಸೂಚಿಸಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂವ ವಲಯದ ವಾಯು ನೆಲೆಯಲ್ಲಿ ಇದೇ ಫೆಬ್ರುವರಿ 13 ರಿಂದ ಫೆಬ್ರುವರಿ 17ರವರೆಗೆ ಅಂತಾರಾಷ್ಟ್ರೀಯ ಮಟ್ಟದ 'ಏರೋ ಇಂಡಿಯಾ-2023' (ವೈಮಾನಿಕ ಪ್ರದರ್ಶನ Air Show) ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ವಾಯು ನೆಲೆ ವ್ಯಾಪ್ತಿಯ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನವರಿ 30 ರಿಂದ ಫೆಬ್ರುವರಿ 20 ರವರೆಗೆ ಎಲ್ಲ ರೀತಿಯ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು.
ಏರೋ ಇಂಡಿಯಾ ಪ್ರದರ್ಶನದ ವೇಳೆ ವಿಮಾನಗಳ ಹಾರಾಟದ ನಡುವೆ ಸುರಕ್ಷತೆಯ ದೃಷ್ಟಿಯಿಂದ ಹಕ್ಕಿಗಳ ಹಾರಾಟ ತಡೆಗಟ್ಟಲು ಜನವರಿ 17ರಂದು ಈ ರೀತಿ ಆದೇಶಿಸಲಾಗಿದೆ ಎಂದು ಯಲಹಂಕ ವಲಯದ ಉದ್ದಿಮೆದಾರರಿಗೆ, ನಾಗರಿಕರಿಗೆ ತಿಳಿಸಲಾಗಿತ್ತು. ಈ ಆದೇಶ ಪ್ರಕಟವಾದ ನಂತರ ಮಾಂಸಹಾರಿ ಹೋಟೆಲ್/ಉದ್ದಿಮೆಗಳನ್ನು ತೆರೆಯಲು ಅನುಮತಿ ನೀಡುವಂತೆ ವಲಯ ಆಯುಕ್ತರಿಗೆ ಮನವಿ ಸಲ್ಲಿಕೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಶನಿವಾರ ಆದೇಶ ನಿರ್ಬಂಧ ಹಿಂಪಡೆದಿರುವುದಾಗಿ ತಿಳಿಸಿರುವ ಬಿಬಿಎಂಪಿ ಬೇರೆ ನಿರ್ಧಾರವೊಂದನ್ನು ಪ್ರಕಟಿಸಿದೆ.
ಯಲಹಂಕ ವಾಯುನೆಲೆ ಪ್ರದೇಶದಿಂದ 10 ಕಿ.ಮೀ ವ್ಯಾಪ್ತಿಯಲ್ಲಿ ವಿವಿಧ ಮಾಂಸಹಾರಿ ಹೋಟೆಲ್/ಉದ್ದಿಮೆಗಳನ್ನು ತೆರೆದು, ಸದರಿ ಹೋಟೆಲ್/ಉದ್ದಿಮೆಗಳಲ್ಲಿ ಉತ್ಪತ್ತಿಯಾಗುವ ಮಾಂಸಹಾರಿ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡಬಾರದು. ಅದನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಷರತ್ತಿಗೆ ಒಳಪಡಿಸಿ ಹೋಟೆಲ್/ಉದ್ದಿಮೆ ನಡೆಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ತಿಳಿಸಿದೆ.

ಒಂದು ವೇಳೆ ಮಾಂಸಾಹಾರಿ ತ್ಯಾಜ್ಯ ಎಲ್ಲೆಂದರಲ್ಲಿ ಬಿಸಾಡಿದರೆ ಅದನ್ನು ಆಯಲು ಬರುವ ಹಕ್ಕಿಗಳ ಹಾರಾಟದಿಂದ ಏರೋ ಇಂಡಿಯಾ ಪ್ರದರ್ಶನಕ್ಕೆ ತೊಂದರೆಯಾಗಬಹುದು ಎನ್ನಲಾಗಿದೆ. ಮೇಲೆ ಉಲ್ಲೇಖಿಸಲಾಗಿರುವ ಅಂಶಗಳನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಎರ್‌ಕ್ರಾಪ್ಟ್ ರೂಲ್ಸ್ 1937 ರ ರೂಲ್ 91 ಅಗತ್ಯ ಕ್ರಮ ವಹಿಸಲಾಗುವುದು ಎಂದು ಯಲಹಂಕ ವಲಯ ಜಂಟಿ ಆಯುಕ್ತರಾದ ಶ್ರೀಮತಿ ಪೂರ್ಣಿಮಾ ರವರು ತಿಳಿಸಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications