Aero India 2023: ಫೆ. 13ಕ್ಕೆ ಬೆಂಗಳೂರಿನಲ್ಲಿ ಏರೋ ಶೋ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ
ಐದು ದಿನಗಳ ಏರೋ ಇಂಡಿಯಾ 2023 ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13 ರಂದು ಉದ್ಘಾಟಿಸಲಿದ್ದಾರೆ.
ಬೆಂಗಳೂರು, ಫೆಬ್ರವರಿ. 09: ಸಿಲಿಕಾನ್ ಸಿಟಿ ಬೆಂಗಳೂರಿನ ಯಲಹಂವ ವಲಯದ ವಾಯು ನೆಲೆಯಲ್ಲಿ ಇದೇ ಫೆಬ್ರವರಿ 13 ರಿಂದ ಫೆಬ್ರವರಿ 17ರ ವರೆಗೆ ಅಂತಾರಾಷ್ಟ್ರೀಯ ಮಟ್ಟದ 'ಏರೋ ಇಂಡಿಯಾ-2023' ಪ್ರದರ್ಶನ ನಡೆಯಲಿದೆ.
ಐದು ದಿನಗಳ ಏರೋ ಇಂಡಿಯಾ 2023 ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13 ರಂದು ಉದ್ಘಾಟಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಬುಧವಾರ ತಿಳಿಸಿದೆ.
"ಜಾಗತಿಕ ವಾಯುಯಾನ ಉದ್ಯಮದಲ್ಲಿ ಒಂದು ಪ್ರಮುಖ ಪ್ರದರ್ಶನ, ಏರೋ ಇಂಡಿಯಾವು ಭಾರತದ ವೈಮಾನಿಕ ಮತ್ತು ರಕ್ಷಣಾ ಪ್ರದರ್ಶನವಾಗಿದೆ. ಯಲಹಂಕದ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಸುಮಾರು 35,000 ಚದರ ಮೀಟರ್ ಪ್ರದೇಶದಲ್ಲಿ ದ್ವೈವಾರ್ಷಿಕವಾಗಿ ಈ ಪ್ರದರ್ಶನ ನಡೆಯುತ್ತದೆ. ಈ ಪ್ರದರ್ಶನವು ವಾಯುಯಾನ ಉದ್ಯಮಕ್ಕೆ ಅದರ ಸಾಮರ್ಥ್ಯಗಳು, ಸೇವೆಗಳು ಮತ್ತು ಉತ್ಪನ್ನಗಳನ್ನು ಪ್ರದರ್ಶಿಸಲು ಒಂದು ಉತ್ತಮ ಅವಕಾಶವಾಗಿದೆ. ಈ 2023ರ ಆವೃತ್ತಿಯಲ್ಲಿ ಪ್ರಪಂಚದಾದ್ಯಂತ 731 ಪ್ರದರ್ಶಕರು ಭಾಗವಹಿಸುತ್ತಾರೆ" ಎಂದು ಸಚಿವಾಲಯ ತಿಳಿಸಿದೆ.

ಏರೋ ಇಂಡಿಯಾದ 14 ನೇ ಆವೃತ್ತಿಯು ಏರೋಸ್ಪೇಸ್ ಕಂಪನಿಗಳ ದೊಡ್ಡ ಪ್ರದರ್ಶನ ಮತ್ತು ವ್ಯಾಪಾರ ಮೇಳದೊಂದಿಗೆ ವಿಮಾನದ ವೈಮಾನಿಕ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ ಎಂದು ಸಚಿವಾಲಯ ಹೇಳಿದೆ.
ಮೊದಲ ದಿನ ಸಿಇಒಗಳ ದುಂಡುಮೇಜಿನ ಸಭೆಯು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ.
ಈ ಏರ್ ಶೋ "ಆಕಾಶಕ್ಕೆ ಮಿತಿಯಲ್ಲ: ಗಡಿಗಳನ್ನು ಮೀರಿದ ಅವಕಾಶಗಳು" ಎಂಬ ಥೀಮ್‌ನೊಂದಿಗೆ ಮೇಕ್ ಇನ್ ಇಂಡಿಯಾವನ್ನು ಉತ್ತೇಜಿಸುವ ದೃಷ್ಟಿಯಿಂದ ಉದ್ಯಮ ಪಾಲುದಾರರು ಮತ್ತು ಸರ್ಕಾರದ ನಡುವೆ ಸಂವಹನದ ಅಡಿಪಾಯವನ್ನು ಹಾಕುವ ನಿರೀಕ್ಷೆಯಿದೆ.

ಅಂತಾರಾಷ್ಟ್ರೀಯ ಮಟ್ಟದ 'ಏರೋ ಇಂಡಿಯಾ-2023' ಹಿನ್ನೆಲೆ ಯಲಹಂಕ ವಾಯು ನೆಲೆ ವ್ಯಾಪ್ತಿಯ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನವರಿ 30 ರಿಂದ ಫೆಬ್ರುವರಿ 20 ರವರೆಗೆ ಎಲ್ಲ ರೀತಿಯ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು. ಬಳಿಕ ಆದೇಶ ಹಿಂಪಡೆದಿರುವ ಬಿಬಿಎಂಪಿ, ಮಾಂಸಹಾರಿ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡಬಾರದು. ಅದನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಷರತ್ತಿಗೆ ಒಳಪಡಿಸಿ ಹೋಟೆಲ್, ರೆಸ್ಟೋರೆಂಟ್ ನಡೆಸಲು ಅವಕಾಶ ಕಲ್ಪಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ












Click it and Unblock the Notifications