Get Updates
Get notified of breaking news, exclusive insights, and must-see stories!

Aero India 2023: ಪ್ರಯಾಣಿಕರೇ ಗಮನಿಸಿ, ಗುರುವಾರ, ಶುಕ್ರವಾರ ಬಳ್ಳಾರಿ ರಸ್ತೆಯಿಂದ ದೂರವಿರಿ

ಬೆಳಗ್ಗೆ 6 ರಿಂದ ರಾತ್ರಿ 10ರ ವರೆಗೆ ಬಳ್ಳಾರಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಹೊರತುಪಡಿಸಿ ಎಲ್ಲ ರೀತಿಯ ಸರಕು ಸಾಗಣೆ ವಾಹನಗಳು ಮತ್ತು ಭಾರಿ ವಾಹನಗಳ ಸಂಚಾರ ನಿಷೇಧ.

ಬೆಂಗಳೂರು, ಫೆಬ್ರವರಿ. 16: ಯಲಹಂಕದಲ್ಲಿ ನಡೆಯುಯುತ್ತಿರುವ ಏರೋ ಇಂಡಿಯಾ ಪ್ರದರ್ಶನಕ್ಕೆ ಗುರುವಾರ ಮತ್ತು ಶುಕ್ರವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆಯಿರುವುದರಿಂದ ಎರಡು ದಿನಗಳು ಬಳ್ಳಾರಿ ರಸ್ತೆಯನ್ನು ಬಳಸದಂತೆ ಸಾರ್ವಜನಿಕರಿಗೆ ಪೊಲೀಸರು ಸೂಚಿಸಿದ್ದಾರೆ.

ಈ ಎರಡು ದಿನಗಳಲ್ಲಿ ಯಲಹಂಕ ವಾಯನೆಲೆಯಲ್ಲಿ ಏರ್ ಶೋ ಸಾರ್ವಜನಿಕರಿಗೆ ಮುಕ್ತವಾಗಿದ್ದು, ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವ ವಾಹನಗಳು ಮತ್ತು ವಾಪಸ್ ಬರುವ ವಾಹನಗಳು ಹೆಣ್ಣೂರು - ಬಾಗಲೂರು ರಸ್ತೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸಂಚಾರ ಸಲಹೆ ನೀಡಲಾಗಿದೆ.

Aero India 2023: Stay away from Ballari Road on Thursday and Friday

ಏರೋ ಇಂಡಿಯಾ ಪ್ರದರ್ಶನಕ್ಕೆ ಭೇಟಿ ನೀಡುವ ಸಾರ್ವಜನಿಕರು ತಮ್ಮ ವಾಹನಗಳನ್ನು ಜಿಕೆವಿಕೆ ಕ್ಯಾಂಪಸ್ ಅಥವಾ ಜಕ್ಕೂರು ಕ್ಯಾಂಪಸ್‌ನಲ್ಲಿ ನಿಲ್ಲಿಸಬೇಕು. ಅಲ್ಲಿಂದ ಪ್ರದರ್ಶನದ ಸ್ಥಳಕ್ಕೆ ಹೋಗಲು ಬಿಎಂಟಿಸಿ ಬಸ್‌ಗಳನ್ನು ಬಳಸಬೇಕು ಎಂದು ಸೂಚಿಸಲಾಗಿದೆ

ಬೆಳಗ್ಗೆ 6 ರಿಂದ ರಾತ್ರಿ 10ರ ವರೆಗೆ ಬಳ್ಳಾರಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಹೊರತುಪಡಿಸಿ ಎಲ್ಲ ರೀತಿಯ ಸರಕು ಸಾಗಣೆ ವಾಹನಗಳು ಮತ್ತು ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

1. ನಾಗೇನಹಳ್ಳಿ ಗೇಟ್‌ನಿಂದ ಬೆಂಗಳೂರು - ಬಳ್ಳಾರಿ ರಸ್ತೆಗೆ ಸಂಪರ್ಕ ಕಲ್ಪಿಸುವ ಆಂಬಿಯನ್ಸ್ ಧಾಬಾ ಕ್ರಾಸ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

2. ಬೆಂಗಳೂರು - ಬಳ್ಳಾರಿ ರಸ್ತೆಯ ಮೇಖ್ರಿ ವೃತ್ತದಿಂದ ದೇವನಹಳ್ಳಿವರೆಗಿನ ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ನಿಷೇಧಿಸಲಾಗಿದೆ.

Aero India 2023: Stay away from Ballari Road on Thursday and Friday

3. ಗೊರಗುಂಟೆಪಾಳ್ಯದಿಂದ ಹೆಣ್ಣೂರು ಜಂಕ್ಷನ್‌ವರೆಗಿನ ವರ್ತುಲ ರಸ್ತೆಯ ಎರಡೂ ಬದಿಯಲ್ಲಿಯೂ ಸಂಚಾರ ನಿರ್ಬಂಧ.

4. ಬಾಗಲೂರು ಮುಖ್ಯರಸ್ತೆಯಲ್ಲಿ ರೇವಾ ಕಾಲೇಜು ಜಂಕ್ಷನ್‌ನಿಂದ ಬಾಗಲೂರು ಕ್ರಾಸ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ಸಂಚಾರ ನಿಷೇಧ.

5. ನಾಗವಾರ ಜಂಕ್ಷನ್‌ನಿಂದ ಥಣಿಸಂದ್ರ ಮುಖ್ಯರಸ್ತೆ ಮೂಲಕ ಬಾಗಲೂರು ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+