Aero India 2023: ಕರ್ನಾಟಕಕ್ಕೆ ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು
ರಾಜ್ಯವು ಏರೊಸ್ಪೇಸ್ ನೀತಿ 'ಹಾಗೂ ರಕ್ಷಣಾ ಪಾರ್ಕ್ ನ ಮೊದಲ ಹಂತ ಪೂರ್ಣಗೊಂಡಿದೆ. 2 ನೇ ಹಂತವೂ ಆರಂಭವಾಗಿದೆ. ಏರ್ ಶೋ 2023 ಪೂರ್ವ ಭಾವಿ ಸಭೆಯಲ್ಲಿ ಮಹತ್ವ ಸಂಗತಿ ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು, ಫೆಬ್ರವರಿ 12: ರಾಜ್ಯದಲ್ಲಿ ಏರೊಸ್ಪೇಸ್ ನೀತಿ ಮತ್ತು ರಕ್ಷಣಾ ಪಾರ್ಕ್ ನ ಮೊದಲ ಹಂತ ಪೂರ್ಣಗೊಂಡಿದೆ. 2 ನೇ ಹಂತವೂ ಆರಂಭವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಏರೋಸ್ಪೇಸ್ ಕೇಂದ್ರವಾಗಿದೆ. ಇದು ಏರ್ ಶೊ ನಡೆಸಲು ಅತ್ಯಂತ ಸೂಕ್ತ ಸ್ಥಳ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.
ಭಾನುವಾರ ಬೆಂಗಳೂರಿನ ತಾಜ್ ವೆಸ್ಟ್ಎಂಡ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ 'ಏರೋ ಇಂಡಿಯಾ 2023' ಪೂರ್ವಭಾವಿ ಸಭೇಯಲ್ಲಿ ಅವರು ಮಾತನಾಡಿದರು. ಈ ವೇಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹ ಪಾಲ್ಗೊಂಡಿದ್ದರು.

Aero India 2023: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ನಿಷೇಧ, ಪರ್ಯಾಯ ಮಾರ್ಗ?, ನಿಲುಗಡೆ ಎಲ್ಲಿ? ತಿಳಿಯಿರಿ
ಗೌರವದ ಸಂಕೇತವಾಗಿರುವ ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು. ಬೆಂಗಳೂರು ವಾಣಿಜ್ಯ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿದೆ. ಬೆಂಗಳೂರು ಭವಿಷ್ಯದಲ್ಲಿ ಸ್ವಂತ ಏರ್ ಕ್ರಾಪ್ಟ್ ತಯಾರಿಸುವ ಗುರಿ ಹೊಂದಿದೆ. ಈ ಕಾರ್ಯಸಾಧನೆಗೆ ಜಾಗತಿಕವಾಗಿ ಸಾಕಷ್ಟು ಕ್ರಮ ವಹಿಸಿದ್ದು,
ಈ ದೇಶದ ಭವಿಷ್ಯಕ್ಕೆ ನಾವು ಸೂಕ್ತ ಸ್ಥಳ ಮತ್ತು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.
ಹಿಂದಿನಿಂದಲೂ ಬೆಂಗಳೂರು 'ಏರೋ ಇಂಡಿಯಾ ಶೋ' ಆತಿಥ್ಯ ವಹಿಸುವುದು ಗೌರವದ ಸಂಕೇತವಾಗಿದೆ. ಏರೊ ಸ್ಪೇಸ್ ಇಕೋ ಸಿಸ್ಟಮ್ ಅಭಿವೃದ್ಧಿ ಪಡಿಸಿದ ನಾಡಿನ ಹಿರಿಯ ನಾಯಕರಿಗೆ. ಪ್ರತಿ ವರ್ಷ ಏರ್ ಶೋ ಆತಿಥ್ಯ ವಹಿಸಿದಾಗಲೂ ಅತ್ಯಂತ ಯಶಸ್ವಿಯಾಗಿ ರಕ್ಷಣಾ ಹಾಗೂ ಏರೋಸ್ಪೇಸ್ ಉದ್ಯಮ ಮತ್ತು ಸಾಮರ್ಥ್ಯದ ಪ್ರದರ್ಶನ ಮಾಡಿದ್ದೇವೆ. ಕೋವಿಡ್ ಕಾಲದಲ್ಲಿ ಇವೆಲ್ಲವುಗಳು ರದ್ದಾಗಿದ್ದವು. ಎರಡು ವರ್ಷದಿಂದ ಮತ್ತೆ ಎಲ್ಲ ಏರ್ ಶೋ ಆರಂಭವಾಗುವ ಮೂಲಕ ಬೆಂಗಳೂರಿನ ಆತ್ಮ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ ಎಂದರು.
ಈ ಏರ್ ಶೋನಲ್ಲಿ ಅತ್ಯಧಿಕ ವಿದೇಶಿ ರಕ್ಷಣಾ ಮಂತ್ರಿಗಳು, ಏರ್ ಪೋರ್ಸ್ ಸಿಇಒ ಅಧಿಕಾರಿಗಳು, 35000 ಚದರ ಅಡಿ ವಿಸ್ತೀರ್ಣದ ಪ್ರದರ್ಶನ, 67 ವಸ್ತು ಪ್ರದರ್ಶನ, 98 ವಿದೇಶಿ ಗಣ್ಯರು ಇದರಲ್ಲಿ ಭಾಗವಹಿಸುತ್ತಾರೆ. ರಕ್ಷಣಾ ಇಲಾಖೆಗೆ ಕುರಿತಂತೆ ಅತ್ಯಧಿಕ ಒಪ್ಪಂದಗಳು ಏರ್ಪಡುತ್ತವೆ ಎಂದು ಅವರು ವಿವರಿಸಿದರು.
ವಾಯುಪಡೆಯ ತಂತ್ರಜ್ಞಾನ, ಸಾಮರ್ಥ್ಯ ವೃದ್ಧಿ
ನಿರಂತರವಾಗಿ ವಾಯುಪಡೆಯ ತಂತ್ರಜ್ಞಾನ, ಸಾಮರ್ಥ್ಯ, ಮಾನವ ಸಂಪನ್ಮೂಲ ಇನ್ನಿತರ ಅಂಶಗಳನ್ನು ಬಲಪಡಿಸಲಾಗುತ್ತದೆ. ಕೇಂದ್ರ ರಕ್ಞಾಣ ಸಚಿವರ ನಾಯಕತ್ವದಲ್ಲಿ ರಕ್ಷಣಾ ಉತ್ಪಾದನೆಯಲ್ಲಿ, ತಂತ್ರಜ್ಞಾನ ಮೇಲ್ದರ್ಜೆಗೆ ಏರುವಲ್ಲಿ ಭಾರತ ಆತ್ಮ ನಿರ್ಭರತೆ ಸಾಧಿಸುತ್ತಿದೆ. ಮೊದಲು ಆಮದಾಗುತ್ತಿದ್ದ ಶೇ.75% ರಕ್ಷಣಾ ಉಪಕರಣಗಳು ಇದೀಗ ಭಾರತದಿಂದಲೇ ರಫ್ತಾಗುತ್ತಿವೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ 1960 ರಲ್ಲಿ ಇಸ್ರೊ (ISRO) ಆರಂಭವಾಯಿತು. ಪ್ರತಿ ಹತ್ತು ವರ್ಷಕ್ಕೊಮ್ಮೆ ಏರೊಸ್ಪೇಸ್ ಅಭಿವೃದ್ಧಿಯಾಗಿದೆ. ಸ್ಥಳ, ಸಾಮರ್ಥ್ಯ ವೃದ್ಧಿ ಆಗುತ್ತಿದೆ. 1960 ಆರ್ಯಭಟ ಉಪಗ್ರಹ ಬೆಂಗಳೂರಿನಿಂದ ಉಡಾವಣೆ ಆಯಿತು. ಶೇ 67% ರಷ್ಟು ಏರೋಸ್ಪೇಸ್ ಗೆ ಸಂಬಂಧಿಸಿದ ಉಪಕರಣಗಳು ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತದೆ.

ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮದ ವಿಸ್ತರಣೆಗೆ ಈ ವಾರ್ಷಿಕ ಏರ್ ಶೋ ಸಹಕಾರಿ ಆಗುತ್ತದೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023 ಅನ್ನು ಜನರು ನೆನಪಿನಲ್ಲಿಡುತ್ತಾರೆ. ಅಲ್ಲದೇ ಇಲ್ಲಿಂದ ಒಳ್ಳೆಯ ನೆನಪುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಈ ಕಾರ್ಯಕ್ರಮ ಯಶಸ್ವಿಯಾಗುವ ವಿಶ್ವಾಸವಿದ್ದು, ಏರೋಸ್ಪೇಸ್ ಹಾಗೂ ರಕ್ಷಣಾ ಉದ್ಯಮದ ವಿಸ್ತರಣೆಗೆ ಇದು ಸಹಕಾರಿಯಾಗಲಿದೆ. ಅರ್ಧ ಜಗತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಇಡೀ ವಿಶ್ವವೇ ನಮ್ಮ ಕಡೆ ನೋಡುವಂತಾಗಬೇಕು ಎಂದು ಆಶಿಸಿದರು.
ಕೇಂದ್ರ ರಕ್ಷಣ ಇಲಾಖೆ ರಾಜ್ಯ ಸಚಿವ ಅಜಯ್ ಭಟ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗಿರಿಧರ್ , ಎ. ಸಿ.ಎಸ್ ರಮಣ ರೆಡ್ಡಿ, ನಟರಾಜನ್, ಅನುರಾಗ್ ಬಾಜಪೇಯಿ ಮತ್ತಿತರರು ಪಾಲ್ಗೊಂಡಿದ್ದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications