Aero India 2023: ಮೋದಿ ಜೊತೆ ಭೋಜನ ಸವಿದ ಗಣ್ಯರು- ಯಶ್, ರಿಷಬ್, ಕುಂಬ್ಳೆ ಸೇರಿ ಹಲವರು ಭಾಗಿ- ಇನ್ನೆಲ್ಲಾ ಯಾರು? ತಿಳಿಯಿರಿ
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ, ರಾಜ್ಯದ ಹಲವು ಗಣ್ಯರಿಗೆ ಭೋಜನಕೂಟಕ್ಕೆ ಆಹ್ವಾನಿಸಿದ್ದರು. ಸಿನಿಮಾ, ಕ್ರೀಡೆ ಹಾಗೂ ಉದ್ಯಮ ಕ್ಷೇತ್ರಗಳ ಗಣ್ಯರ ಜೊತೆ ಪ್ರಧಾನಿ ಮೋದಿ ಭೋಜನ ಸವಿದರು. ಯಾರ್ಯಾರು ಭಾಗವಹಿಸಿದ್ದರು? ಇಲ್ಲಿದೆ ಮಾಹಿತಿ
ಬೆಂಗಳೂರು, ಫೆಬ್ರವರಿ 13: Aero India 2023 ಉದ್ಘಾಟನೆಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ರಾಜಭವನದಲ್ಲಿ ತಂಗಿದ್ದಾರೆ. ಇಂದು ಬೆಳಿಗ್ಗೆ ಏಷ್ಯಾದ ಅತಿದೊಡ್ಡ ಏರ್ ಶೋಗೆ ಚಾಲನೆ ನೀಡಲಿದ್ದಾರೆ. ಐದು ದಿನಗಳ ಕಾಲ ನಡೆಯುವ ಏರ್ ಶೋನಲ್ಲಿ ಹಲವಾರ ದೇಶಗಳ ವಿಮಾನಗಳು ಪ್ರದರ್ಶನಗೊಳ್ಳಲಿವೆ. ಬೆಂಗಳೂರಿನ ಯಲಹಂಕಾದಲ್ಲಿ ನಡೆಯುತ್ತಿರುವ ಏರ್ ಶೋ ಭಾರತದಲ್ಲಿ ಅಷ್ಟೇ ಅಲ್ಲದೇ, ಏಷ್ಯಾದಲ್ಲಿಯೇ ಅತಿ ದೊಡ್ಡ ಏರ್ ಶೋ ಎನ್ನಲಾಗಿದೆ. ನಿನ್ನೆ ರಾತ್ರಿ ರಾಜಭವನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲರಾದ ತಾವರ್‌ಚಂದ್ ಗೆಹಲೋಟ್ ಅವರು ಬರಮಾಡಿಕೊಂಡರು. Aero India 2023- ಇದು ಹದಿನಾಲ್ಕನೇ ಆವೃತ್ತಿಯಾಗಿದೆ. ಮೊದಲ ಏರ್ ಶೋ 1996 ರಲ್ಲಿ ಆರಂಭವಾಗಿತ್ತು.

ರಾಜಭವನಕ್ಕೆ ಆಗಮಿಸಿದ ಮೋದಿ
ರಾಜಭವನದಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ಯದ ಹಲವು ಗಣ್ಯರಿಗೆ ಭೋಜನಕೂಟಕ್ಕೆ ಆಹ್ವಾನಿಸಿದ್ದರು. ಸಿನಿಮಾ, ಕ್ರೀಡೆ ಹಾಗೂ ಉದ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ವ್ಯಕ್ತಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಭೋಜನ ಸವಿದರು. ಪ್ರಧಾನಿ ಮೋದಿ ಅವರ ಜೊತೆ ಊಟ ಮಾಡಿದ ಗಣ್ಯರು ಹಲವಾರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ಎನ್ನಲಾಗಿದೆ.

ಸಿನಿಮಾ ಕ್ಷೇತ್ರದ ಕುರಿತು ಮಾತುಕತೆ
ಸಿನಿಮಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ಹಲವು ವಿಚಾರಗಳನ್ನು ಪ್ರಸ್ತುತಪಡಿಸಿದರು. ಇದೇ ವೇಳೆ, ತಮ್ಮ ಕ್ಷೇತ್ರಗಳಲ್ಲಿರುವ ಸಮಸ್ಯೆ ಹಾಗೂ ಅವುಗಳಿಗೆ ಪರಿಹಾರದ ಕುರಿತು ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಅಭಿವೃದ್ಧಿಯ ಕುರಿತಾಗಿಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಕ್ರಿಕೆಟ್ ಸೇರಿದಂತೆ ಇತರ ಕ್ರೀಡೆಗಳ ಬಗ್ಗೆಯೂ ಪ್ರಧಾನಿ ಹಾಗೂ ಗಣ್ಯರು ಮಾತುಕತೆ ನಡೆಸಿದರು.

ಕೆಜಿಎಫ್, ಕಾಂತಾರ ಚಿತ್ರಗಳ ಕುರಿತು ಮೆಚ್ಚುಗೆ
ಕೆಜಿಎಫ್ ಹಾಗೂ ಕಾಂತಾರ ಚಿತ್ರಗಳ ಬಗ್ಗೆ ಪ್ರಧಾನಿ ಮೋದಿ ಕೊಂಡಾಡಿದ್ದಾರೆ ಎನ್ನಲಾಗಿದೆ. ಶನಿವಾರ ಮಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಸಹ ಕಾಂತಾರ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಕಾಂತಾರ ಚಿತ್ರವು ದೇಶದ ಮೂಲ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಹಾಡಿ ಹೊಗಳಿದ್ದರು. ಕಾಂತಾರ ಚಿತ್ರದಲ್ಲಿನ ರಿಷಬ್ ಶೆಟ್ಟಿ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
|
ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ಭಾಗಿ
ಪ್ರಧಾನಿ ಮೋದಿ ಅವರ ಭೋಜನ ಕೂಟಕ್ಕೆ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ (ದಂಪತಿ), ಜಾವಗಲ್ ಶ್ರೀನಾಥ್ ಹಾಗೂ ವೆಂಕಟೇಶ್ ಪ್ರಸಾದ್ ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಚಿತ್ರರಂಗಕ್ಕೆ ಸಂಬಂಧಿಸಿದಂತೆ ದಿವಂಗತ ಡಾ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಭೋಜನ ಕೂಟಕ್ಕೆ ಆಗಮಿಸಿದ್ದರು. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್, ಹೊಂಬಾಳೆ ಪ್ರೊಡಕ್ಷನ್ಸ್ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ರಾಕಿಂಗ್ ಸ್ಟಾರ್ ಯಶ್ ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದರು. ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರೂ ಪ್ರಧಾನಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಉದ್ಯಮಿಗಳಾದ ತರುಣ್ ಮೆಹ್ತಾ ಹಾಗೂ ನಿತಿನ್ ಕಾಮತ್ ಅವರೂ ಪ್ರಧಾನಿಯೊಂದಿಗೆ ಅನೌಪಚಾರಿಕವಾಗಿ ಚರ್ಚೆ ನಡೆಸಿದ್ದಾರೆ.

ಐದು ದಿನಗಳ ಏರೋ ಇಂಡಿಯಾ 2023
ಸೋಮವಾರ ಉದ್ಘಾಟನೆಗೊಳ್ಳಲಿರುವ ಐದು ದಿನಗಳ ಏರೋ ಇಂಡಿಯಾ 2023, ಬೆಂಗಳೂರಿನಲ್ಲಿ ಮಿಲಿಟರಿ ಪರಾಕ್ರಮವನ್ನು ಪ್ರದರ್ಶಿಸಲು ಸಿದ್ಧವಾಗಿದೆ, ಅಲ್ಲಿ ಹಲವಾರು ಮೇಡ್-ಇನ್-ಇಂಡಿಯಾ ರಕ್ಷಣಾ ಉತ್ಪನ್ನಗಳನ್ನು ಪ್ರದರ್ಶಿಸಲಾಗುತ್ತದೆ. ಏರೋ ಇಂಡಿಯಾದ 14ನೇ ಆವೃತ್ತಿಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು.

ಪ್ರಮುಖ ಪ್ರದರ್ಶನಕಾರರು
ವಾಯುಪಡೆಯ ವಿಶೇಷ ವಿಮಾನದಲ್ಲಿ ಬಂದಿಳಿದ ಮೋದಿ ಅವರನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಏರ್‌ಬಸ್, ಬೋಯಿಂಗ್, ಡಸಾಲ್ಟ್ ಏವಿಯೇಷನ್, ಲಾಕ್‌ಹೀಡ್ ಮಾರ್ಟಿನ್, ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರಿ, ಬ್ರಹ್ಮೋಸ್ ಏರೋಸ್ಪೇಸ್, ಆರ್ಮಿ ಏವಿಯೇಷನ್, ಎಚ್‌ಸಿ ರೋಬೋಟಿಕ್ಸ್, ಎಸ್‌ಎಬಿ, ಸಫ್ರಾನ್, ರೋಲ್ಸ್ ರಾಯ್ಸ್, ಲಾರ್ಸೆನ್ ಮತ್ತು ಟೂಬ್ರೋ, ಭಾರತ್ ಫೋರ್ಜ್ ಲಿಮಿಟೆಡ್, ಹಿಂದೂಸ್ತಾನ್ ಏರೋನೌ Aero India 2023 ಪ್ರಮುಖ ಪ್ರದರ್ಶನಕಾರರು
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications