Aero India 2025: ಏರ್ ಶೋ 2025: ಬೆಂಗಳೂರಿನ ಈ ಭಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಹೊಸ ಸೂಚನೆ
Aero India 2025: ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತ ಏರ್ ಶೋಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 1996ರಿಂದಲೂ ಏರ್‌ಶೋ ನಡೆಯುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಏರ್ ಶೋ ನಡೆಯುವ ಸಂದರ್ಭದಲ್ಲಿ ಭಾರೀ ಅವಘಡ ಸಂಭವಿಸಿತ್ತು. ಇದಾದ ಮೇಲೆ ಬೆಂಗಳೂರಿನ ಏರ್‌ಶೋಗೆ ಹಲವು ತಿಂಗಳುಗಳು ಬಾಕಿ ಉಳಿದಿರುವಾಗಲೇ ಏರ್‌ಶೋಗೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅದೇ ರೀತಿ ಈ ಬಾರಿಯೂ ಬೆಂಗಳೂರಿನಲ್ಲಿ ಏರ್ ಶೋಗೆ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರಮುಖ ಭಾಗದಲ್ಲಿ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪ್ರಮುಖ ಸೂಚನೆಯೊಂದನ್ನು ಕೊಟ್ಟಿದೆ. ಹೀಗಾಗಿ ಬೆಂಗಳೂರಿನಲ್ಲಿ ಏರ್ ಶೋ ಮುಕ್ತಾಯವಾಗುವ ವರೆಗೂ ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಮಾಡುವಾಗ ಈ ನಿಯಮವನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ. ಅದೇನು ನಿಯಮ ಹಾಗೂ ಬೆಂಗಳೂರಿನ ಯಾವ ಭಾಗಕ್ಕೆ ಅನ್ವಯಿಸಲಿದೆ ಎನ್ನುವ ವಿವರ ಇಲ್ಲಿದೆ.
ಏರ್ ಶೋ 2025ರ ಭಾಗವಾಗಿ ಯಲಹಂಕ ವಾಯುಸೇನಾ ನೆಲೆಯ ಸುತ್ತಮುತ್ತಲಿ ಪ್ರದೇಶದಲ್ಲಿ ಕೆಲವೊಂದು ವಿಶೇಷ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪ್ರತಿ ವರ್ಷವೂ ಏರ್‌ಶೋಗಿಂತ ಮುಂಚೆ ಕೆಲವೊಂದು ಪ್ರಮುಖ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ. ಅದರಲ್ಲಿ ಯಲಹಂಕದ ವಾಯುಸೇನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾಂಸ ಮಾರಾಟ ಮಾಡಬಾರದು ಎನ್ನುವುದು ಪ್ರಮುಖವಾಗಿದೆ. ಇನ್ನು ಈ ಬಾರಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆದೇಶವೊಂದನ್ನು ಮಾಡಲಾಗಿದೆ. ಇದರ ಪ್ರಕಾರ ಬೆಂಗಳೂರಿನ ಯಲಹಂಕದ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಕ್ರೇನ್ ಎತ್ತರವನ್ನು ತಗ್ಗಿಸುವುದಕ್ಕೆ ಸೂಚನೆ ನೀಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆ(Air Force Station)ಯಲ್ಲಿ ಫೆಬ್ರವರಿ 01ರಿಂದ ಫೆಬ್ರವರಿ14 ರವರೆಗೆ ಅಂತರರಾಷ್ಟ್ರೀಯ ಮಟ್ಟದ ಏರ್ ಇಂಡಿಯಾ-2025(AERO INDIA) ಏರ್ ಇಂಡಿಯಾ ಶೋ ನಡೆಯಲಿದೆ. ಏರ್ ಶೋ-2025 ನಡೆಯುತ್ತಿರುವುದರಿಂದ ಯಲಹಂಕ ವಾಯುಸೇನಾ ನೆಲೆಯಿಂದ 10 ಕಿ.ಮೀ ಅಂತರದಲ್ಲಿ ಅಥವಾ ವ್ಯಾಪ್ತಯಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ಕಟ್ಟಡಗಳಲ್ಲಿ ಉಪಯೋಗಿಸುವ ಕ್ರೇನ್‌ಗಳ ಎತ್ತರವನ್ನು ಏರ್ ಶೋ ನಡೆಯುವ ಅವಧಿಯಲ್ಲಿ ತಗ್ಗಿಸುವಂತೆ ಸೂಚನೆ ಕೊಡಲಾಗಿದೆ. ಅಲ್ಲದೆ ಕ್ರೇನ್ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಬಹುಮಹಡಿ ಕಟ್ಟಡಗಳ ಸಂಸ್ಥೆಗಳು ಹಾಗೂ ಕಟ್ಟಡ ನಿರ್ಮಾಣ ಮಾಡುತ್ತಿರುವವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಮುಂದುವರಿದು ವಾಯುಸೇನಾ ನೆಲೆಯಿಂದ 10 ಕಿ.ಮೀ ನಿರ್ಮಾಣ ಹಂತದಲ್ಲಿರುವ ಎಲ್ಲಾ ಬೃಹತ್ ಕಟ್ಟಡಗಳಿಗೆ ಈ ನಿಯಮ ಅನ್ವಯವಾಗಲಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಬಿಬಿಎಂಪಿ ಕಾಯ್ದೆ 2020 ಹಾಗೂ ಭಾರತೀಯ ಏರ್‌ಕ್ರಾಪ್ಟ್ 1937ರ ರೂಲ್ 91ರ ಅನ್ವಯ ಕಾನೂನು ಕ್ರಮ ತೆಗೆದಯಕೊಳ್ಳುವುದಾಗಿ ಬಿಬಿಎಂಪಿಯ ನಗರ ಯೋಜನೆ ಉತ್ತರ ವಿಭಾಗದ ಜಂಟಿ ನಿರ್ದೇಶಕರು ಎಚ್ಚರಿಕೆ ಕೊಟ್ಟಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ತಾತ್ಕಾಲಿಕ ನಿಯಮ: ಇನ್ನು ಬೆಂಗಳೂರಿನಲ್ಲಿ ಈ ನಿಯಮವು ಏರ್ ಶೋ ಮುಕ್ತಾಯವಾಗುವವರೆಗೂ ಇರಲಿದೆ. ಈ ಸಂಬಂಧ ಬೆಂಗಳೂರಿನ ಯಲಹಂಕದಲ್ಲಿ ಅದರಲ್ಲೂ ವಾಯುಸೇನೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಇರುವವರಿಗೆ (ಕಟ್ಟಡ ನಿರ್ಮಿಸುತ್ತಿರುವವರಿಗೆ) ಅನುಮಾನಗಳಿದ್ದರೆ. ಬಿಬಿಎಂಪಿಯ ವಿ. ರಾಕೇಶ್ ಕುಮಾರ್, ಜಂಟಿ ನಿರ್ದೇಶಕರು, ನಗರ ಯೋಜನೆ-ಉತ್ತರ ವಿಭಾಗ ಅವರನ್ನು ದೂರವಾಣಿ ಸಂಖ್ಯೆ
9986364862ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications