Aero India 2025: ಬೆಂಗಳೂರು ಏರ್‌ಪೋರ್ಟ್ ಪ್ರಯಾಣಿಕರಿಗೆ ಮಹತ್ವದ ಸೂಚನೆ
ಬೆಂಗಳೂರು, ಜನವರಿ 21: ಬೆಂಗಳೂರು ನಗರದಲ್ಲಿ ನಡೆಯುವ ಏರೋ ಇಂಡಿಯಾ-2025ಕ್ಕೆ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 10 ರಿಂದ 14ರ ವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನಗಳ ಸಂಚಾರದಲ್ಲಿ ಸಹ ಬದಲಾವಣೆಯಾಗಲಿದೆ. ಈ ಕುರಿತು ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿದೆ.
ಈ ಕುರಿತು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಬಿ) ಪ್ರಯಾಣಿಕರಿಗೆ ಮಾಹಿತಿ ನೀಡಿದೆ. ಏರೋ ಇಂಡಿಯಾ-2025ರ ಹಿನ್ನಲೆಯಲ್ಲಿ ಬೆಂಗಳೂರು ಏರ್‌ಪೋರ್ಟ್‌ನ ವಾಣಿಜ್ಯ ವಿಮಾನಗಳ ಹಾರಾಟದಲ್ಲಿ ಕೆಲವು ಬದಲಾವಣೆಗಳು ಆಗಲಿವೆ ಎಂದು ಹೇಳಿದೆ.

ಫೆಬ್ರವರಿ 5 ರಿಂದ 14ರ ತನಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ದಿನವು ಕೆಲವು ಗಂಟೆಗಳ ಕಾಲ ಮುಚ್ಚಲಾಗುತ್ತದೆ ಎಂದು ತಿಳಿಸಿದೆ. ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯುವ ಸಮಯ ಮತ್ತು ವಿಮಾನಗಳ ತರಬೇತಿ ಹಾರಾಟದ ಸಮಯದಲ್ಲಿ ವಿಮಾನ ನಿಲ್ದಾಣದ ಕಾರ್ಯಚರಣೆಯಲ್ಲಿ ಕೆಲವು ಬದಲಾವಣೆಯಾಗಲಿದೆ.
ಪ್ರಯಾಣಿಕರಿಗೆ ಮಾಹಿತಿ: ಕೆಐಎಬಿ/ ಬಿಎಲ್‌ಆರ್ ಫೆಬ್ರವರಿ 5 ರಿಂದ 14ರ ತನಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳು ನೀಡುವ ವೇಳಾಪಟ್ಟಿಯನ್ನು ಪರಿಶೀಲನೆ ನಡೆಸಿ ಪ್ರಯಾಣದ ಯೋಜನೆ ರೂಪಿಸಬೇಕು ಎಂದು ಹೇಳಿದೆ.
* ಫೆಬ್ರವರಿ 5-8, 2025. ವಾಯುನೆಲೆ 09-12ರ ತನಕ, 1400-1700 ತನಕ ಮುಚ್ಚಿರುತ್ತದೆ.
* ಫೆಬ್ರವರಿ 9, 2025. ವಾಯುನೆಲೆ 09-12ರ ತನಕ ಮುಚ್ಚಿರುತ್ತದೆ.
* ಫೆಬ್ರವರಿ 10, 2025. ವಾಯುನೆಲೆ 09-12, 1400-1600 ತನಕ ಮುಚ್ಚಿರುತ್ತದೆ
* ಫೆಬ್ರವರಿ 11-12, 2025. ವಾಯುನೆಲೆ 1200-1500ರ ತನಕ ಮುಚ್ಚಿರುತ್ತದೆ
* ಫೆಬ್ರವರಿ 13-14, 2025. ವಾಯುನೆಲೆ 09-12, 1400-1700ರ ತನಕ ಮುಚ್ಚಿರುತ್ತದೆ
ಏರೋ ಇಂಡಿಯಾ-2025: ಏಷ್ಯಾದ ಅತಿದೊಡ್ಡ ಏರೋ ಶೋ 15ನೇ ಆವೃತ್ತಿಯ ಏರೋ ಇಂಡಿಯಾ-2025 ಫೆಬ್ರವರಿ 10 ರಿಂದ 14ರ ತನಕ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿದೆ. ಈ ಬಾರಿಯ ಏರ್ ಶೋ ಅನ್ನು 'ರನ್ ವೇ ಟು ಎ ಬಿಲಿಯನ್ ಆಪರ್ಚುನಿಟೀಸ್' ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲಾಗಿದೆ. ಇದು ವಿದೇಶಿ ಮತ್ತು ಭಾರತೀಯ ಸಂಸ್ಥೆಗಳ ನಡುವಿನ ಪಾಲುದಾರಿಕೆಯನ್ನು ರೂಪಿಸಲು ಮತ್ತು ಜಾಗತಿಕವಾಗಿ ಹೊಸ ಒಪ್ಪಂದಗಳಿಗೆ ವೇದಿಕೆಯಾಗಲಿದೆ.
ಏರ್ ಶೋನ ಮೊದಲ ಮೂರು ದಿನ (ಫೆಬ್ರವರಿ 10 , 11 ಮತ್ತು 12) ವ್ಯವಹಾರದ ದಿನಗಳು. ಆದರೆ ಫೆಬ್ರವರಿ 13 ಮತ್ತು 14 ಸಾರ್ವಜನಿಕ ದಿನಗಳಾಗಿವೆ. ಅಂದು ವೈಮಾನಿಕ ಪ್ರದರ್ಶನಗಳು ನಡೆಯಲಿದ್ದು, ಜನರು ಅದನ್ನು ವೀಕ್ಷಣೆ ಮಾಡಲು ಅವಕಾಶ ನೀಡಲಾಗಿದೆ. ಉದ್ಘಾಟನಾ ಕಾರ್ಯಕ್ರಮ, ರಕ್ಷಣಾ ಮಂತ್ರಿಗಳ ಸಭೆ, ಸಿಇಒಗಳ ರೌಂಡ್-ಟೇಬಲ್ ಸಭೆ, ಏರ್ ಶೋಗಳು ಮುಂತಾದ ಹಲವಾರು ಕಾರ್ಯಕ್ರಮಗಳನ್ನು ಇದು ಒಳಗೊಂಡಿದೆ.
ಬೆಂಗಳೂರಿನಲ್ಲಿ 1996 ರಿಂದ 14 ಏರ್ ಶೋಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಏರೋ ಇಂಡಿಯಾ ಈಗಾಗಲೇ ಜಾಗತಿಕವಾಗಿ ಒಂದು ಪ್ರಮುಖ ಏರೋಸ್ಪೇಸ್ ಪ್ರದರ್ಶನವಾಗಿ ತನ್ನದೇ ಆದ ಸ್ಥಾನವನ್ನು ಪಡೆದುಕೊಂಡಿದೆ. ವಿವಿಧ ದೇಶಗಳ ಗಣ್ಯರು, ಉದ್ಯಮಿಗಳು, ಹೂಡಿಕೆದಾರರು, ಸ್ಟಾರ್ಟ್ ಅಪ್‌ಗಳನ್ನು ಇದು ಆಕರ್ಷಿಸುತ್ತದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications