ಬೆಂಗಳೂರು ಏರ್‌ ಶೋ, ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಆಗಸ್ಟ್ 21 : ಯಲಹಂಕದಲ್ಲಿ ನಡೆಯುವ ಏರ್ ಶೋವನ್ನು ಗೋವಾಕ್ಕೆ ಸ್ಥಳಾಂತರ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. 2017ರ ಏರ್‌ ಶೋ ಗೋವಾಕ್ಕೆ ಸ್ಥಳಾಂತರವಾಗಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಪತ್ರವನ್ನು ಬರೆಯಲಾಗಿದೆ.

ಮುಂದಿನ ಏರೋ ಇಂಡಿಯಾ ಶೋವನ್ನು ಗೋವಾದಲ್ಲಿ ನಡೆಸಲು ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಆಸಕ್ತಿ ವಹಿಸಿದ್ದಾರೆ ಎಂಬ ವರದಿಗಳ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಈ ಪತ್ರ ಬರೆದಿದ್ದು, ಬೆಂಗಳೂರಿನಲ್ಲಿಯೇ ಮುಂದಿನ ಏರ್ ಶೋ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. [ಏರ್ ಶೋ ಉದ್ಘಾಟಿಸಿದ ಮೋದಿ]

aero india

1996ರಿಂದ 2015ರ ತನಕ ಬೆಂಗಳೂರಿನಲ್ಲಿ 10 ಏರ್‌ ಶೋಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. 2017ರಲ್ಲಿ ನಡೆಯುವ 11ನೇ ಏರ್‌ ಶೋವನ್ನು ಬೆಂಗಳೂರಿನಲ್ಲಿಯೇ ಆಯೋಜಿಸಬೇಕು ಎಂದು ಪತ್ರದಲ್ಲಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. [2015ರ ಏರ್ ಶೋ ಚಿತ್ರಗಳನ್ನು ನೋಡಿ]

ಬೆಂಗಳೂರಿನಲ್ಲಿ ಇಸ್ರೋ, ಎಚ್‌ಎಎಲ್, ಡಿಆರ್‌ಡಿಓ ನಂತಹ ರಕ್ಷಣಾ ವಲಯದ ಪ್ರತಿಷ್ಠಿತ ಸಂಸ್ಥೆಗಳಿವೆ. ಯಲಹಂಕ ವಾಯಯನೆಲೆಯಲ್ಲಿ ಏರ್‌ ಶೋ ನಡೆಸಲು ಅಗತ್ಯವಿರುವ ಮೂಲ ಸೌಕರ್ಯಗಳಿವೆ. ಆದ್ದರಿಂದ ಏರ್‌ ಶೋವನ್ನು ಬೆಂಗಳೂರಿನಲ್ಲಿಯೇ ಆಯೋಜಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಯಲಹಂಕ ವಾಯನೆಲೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹತ್ತಿರದಲ್ಲಿದೆ. ಯಲಹಂಕ ಸಮೀಪ 100 ಎಕರೆ ಜಾಗದಲ್ಲಿ ಏರೋ ಸ್ಪೇಸ್ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಪ್ರಧಾನಮಂತ್ರಿಗಳಿಗೆ ವಿವರಣೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+