Aero India 2023 Dates: ಬೆಂಗಳೂರಲ್ಲಿ 2023ನೇ ಸಾಲಿನ ಏರ್‌ಶೋಗೆ ದಿನಾಂಕ ನಿಗದಿ
ಬೆಂಗಳೂರು, ನವೆಂಬರ್ 28; ಉದ್ಯಾನ ನಗರಿ ಬೆಂಗಳೂರು ಮತ್ತೆ ಲೋಕಹ ಹಕ್ಕಿಗಳ ಕಲರವಕ್ಕೆ ಸಾಕ್ಷಿಯಾಗಲಿದೆ. ಏರೋ ಇಂಡಿಯಾ 2023ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.
ಕೇಂದ್ರ ರಕ್ಷಣಾ ಸಚಿವಾಲಯ ಏರೋ ಇಂಡಿಯಾ 2023ಕ್ಕೆ ದಿನಾಂಕ ನಿಗದಿ ಮಾಡಿದೆ. ನಗರದ ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ.
2023ರ ಫೆಬ್ರವರಿ 13 ರಿಂದ 17ರ ತನಕ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ಇದು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ 14ನೇ ಅವೃತ್ತಿಯ ಏರ್ ಶೋ ಆಗಿದೆ.

ಕೇಂದ್ರ ರಕ್ಷಣಾ ಸಚಿವಾಲಯ ಪ್ರತಿ ಎರಡು ವರ್ಷಗಳಿಗೊಮ್ಮೆ ಏರ್ ಶೋ ಆಯೋಜನೆ ಮಾಡುತ್ತದೆ. ಬೆಂಗಳೂರು ನಗರ ಈ ಏರ್ ಶೋ ಆತಿಥ್ಯವನ್ನು ವಹಿಸುತ್ತದೆ. ಈ ಹಿಂದೆ ಏರ್ ಶೋ ಗೋವಾಕ್ಕೆ ಸ್ಥಳಾಂತರವಾಗಲಿದೆ ಎಂಬ ಸುದ್ದಿಗಳು ಸಹ ಕೇಳಿ ಬಂದಿದ್ದವು.
ಲಕ್ಷಾಂತರ ಜನರು ಭಾಗಿ; ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಸಾವಿರಾರು ಕೋಟಿ ರೂ. ಒಪ್ಪಂದಗಳಿಗೆ ಸಾಕ್ಷಿಯಾಗುತ್ತದೆ. ಅಲ್ಲದೇ ಏರ್ ಶೋ ನಡೆಯುವಾಗ ಲೋಕದ ಹಕ್ಕಿಗಳ ಹಾರಾಟವನ್ನು ವೀಕ್ಷಣೆ ಮಾಡಲು ಲಕ್ಷಾಂತರ ಜನರು ಆಗಮಿಸುತ್ತಾರೆ.
ಬೆಂಗಳೂರಿನ ಯಲಹಂಕದಲ್ಲಿ 13ನೇ ಆವೃತ್ತಿಯ ಏರೋ ಇಂಡಿಯಾ ಪ್ರದರ್ಶನ 2021ರಲ್ಲಿ ನಡೆದಿತ್ತು. 14ನೇ ಆವೃತ್ತಿಯ ಪ್ರದರ್ಶನಕ್ಕೆ ಈಗ ದಿನಾಂಕ ಘೋಷಣೆಯಾಗಿದೆ.
ರಕ್ಷಣಾ ಸಚಿವಾಲಯದ ಡಿಫೆನ್ಸ್ ಎಕ್ಸಿಬಿಷನ್ ಆರ್ಗನೈಜೇಷನ್ ವತಿಯಿಂದ ಏರೋ ಇಂಡಿಯಾ ಪ್ರದರ್ಶನದ ವೇಳೆ ವೈಮಾನಿಕ ಪ್ರದರ್ಶನ ನಡೆಯಲಿದೆ. ಆಗಸದಲ್ಲಿ ಹಲವಾರು ವಿಮಾನಗಳ ಸಾಹಸ ಪ್ರದರ್ಶನ ನೋಡುವುದು ಕಣ್ಣಿಗೆ ಹಬ್ಬವಾಗಿದೆ.
ಭಾರತ ಮತ್ತು ಇತರ ದೇಶಗಳ ಏರೋಸ್ಪೆಸ್ ಉದ್ಯಮದ ಹಲವಾರು ಮಾರಾಟಗಾರರು ಈ ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಾರೆ. ರಕ್ಷಣಾ ಇಲಾಖೆಯಲ್ಲಿ ಹೊಸ ಹೊಸ ಒಪ್ಪಂದಗಳು ನಡೆಯುತ್ತವೆ.
ಬೆಂಗಳೂರು ನಗರದಲ್ಲಿ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಏಷ್ಯಾದ ಅತ್ಯಂತ ದೊಡ್ಡ ವೈಮಾನಿಕ ಪ್ರದರ್ಶನ ಎಂಬ ಹೆಗ್ಗಳಿಕೆ ಪಡೆದಿದೆ. 2023ನೇ ಸಾಲಿನ ಪ್ರದರ್ಶನ ಫೆಬ್ರವರಿ 13ರ ಸೋಮವಾರದಿಂದ ಶುಕ್ರವಾರದ ತನಕ ನಡೆಯಲಿದೆ.
ವಿವಿಧ ಯುದ್ಧ ವಿಮಾನಗಳು ಭಾಗಿ; ಬೆಂಗಳೂರು ಏರ್ ಶೋನಲ್ಲಿ ಹೆಲಿಕಾಪ್ಟರ್, ಸುಖೋಯ್, ಮಿಗ್ 29, ಮಿರಾಜ್, ಹೆಚ್‌ಎಎಲ್ ನಿರ್ಮಿತ ದೇಶಿಯ ತೇಜಸ್ ಲಘು ಯುದ್ಧ ವಿಮಾನಗಳು ಸಾಹಸಮಯ ಪ್ರದರ್ಶನವನ್ನು ನೀಡಲಿವೆ.
2021ರಲ್ಲಿ ನಡೆದ ಏರ್ ಶೋ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗಿತ್ತು. ಏರ್ ಶೋ ವೀಕ್ಷಣೆ ಮಾಡಲು ಆನ್‌ಲೈನ್ ಮೂಲಕ ಸಹ ಅವಕಾಶವನ್ನು ಕಲ್ಪಿಸಲಾಗಿತ್ತು. ಪ್ರತಿಯೊಂದು ಹಂತದಲ್ಲಿಯೂ ತಪಾಸಣೆ ಮಾಡಲಾಗುತ್ತಿತ್ತು. ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿತ್ತು.
ಏರ್‌ಶೋಗೆ ಆಗಮಿಸುವ ಜನರು ಮೊದಲು ಕೋವಿಡ್ ಪರೀಕ್ಷೆಗಳನ್ನು ಮಾಡಿಸಿಕೊಂಡು ನೆಗೆಟಿವ್ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡಿದ ಬಳಿಕ ಪಾಸ್ ನೀಡಲಾಗಿತ್ತು. ಕೋವಿಡ್ ಕಠಿಣ ನಿಯಮಗಳ ಕಾರಣ ಕಳೆದ ಬಾರಿಯ ಏರ್ ಶೋಗೆ ಜನರ ಭಾವಹಿಸುವಿಕೆ ಸಹ ಕಡಿಮೆ ಇತ್ತು.
ಏರೋ ಇಂಡಿಯಾ 2023ರ ಬಗ್ಗೆ ಮಾಹಿತಿ ನೀಡಲು ಕೇಂದ್ರ ರಕ್ಷಣಾ ಸಚಿವಾಲಯ ವೆಬ್‌ಸೈಟ್ ಸಹ ಅನಾವರಣಗೊಳಿಸಿದೆ. ಜನರು https://aeroindia.gov.in/ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಮಾಹಿತಿ ಪಡೆಯಬಹುದು.
ಸಾಮಾನ್ಯವಾಗಿ ಕೇಂದ್ರ ರಕ್ಷಣಾ ಸಚಿವರು ಏರೋ ಇಂಡಿಯಾ ಪ್ರದರ್ಶನಕ್ಕೆ ಚಾಲನೆ ನೀಡುತ್ತಾರೆ. ರಾಜ್ಯದ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸಹ ಪಾಲ್ಗೊಳ್ಳುತ್ತಾರೆ.
ಬೆಂಗಳೂರು ನಗರದಲ್ಲಿರುವ ಹೆಚ್ಎಎಲ್ ಭಾರತೀಯ ವಾಯುಪಡೆಗೆ ಲಘು ಯುದ್ಧ ವಿಮಾನಗಳನ್ನು ಒದಗಿಸುತ್ತದೆ. ಅಲ್ಲದೇ ವಿಮಾನದ ಬಿಡಿಭಾಗಗಳನ್ನು ಉತ್ಪಾದನೆ ಮಾಡುತ್ತದೆ. ಬೆಂಗಳೂರಿನಲ್ಲಿಯೇ ಏರ್ ಶೋ ನಡೆಯುವುದರಿಂದ ಹೆಚ್‌ಎಎಲ್‌ಗೂ ಸಹಾಯಕವಾಗಲಿದೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ











Click it and Unblock the Notifications