ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಒಂದೇ ತಿಂಗಳಿನಲ್ಲಿ 80 ಸಾವಿರಕ್ಕೂ ಹೆಚ್ಚು ಅರ್ಜಿ

|
Google Oneindia Kannada News

ಬೆಂಗಳೂರು, ಜನವರಿ 3: ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬೆಳಕಿಗೆ ಬಂದ ಬಳಿಕ ಮತದಾರರು ಜಾಗೃತರಾಗಿದ್ದು, ಮತದಾರರದಲ್ಲಿ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎನ್ನುವುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅನೇಕರಿಗೆ ಈಗಾಗಲೇ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರದೇ ಇರುವುದು ಕಂಡು ಬಂದಿದ್ದು, ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಹೈರಿಸ್ಕ್ ದೇಶಗಳ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಹೈರಿಸ್ಕ್ ದೇಶಗಳ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ

ಬೆಂಗಳೂರಿನಲ್ಲಿ ಒಂದು ತಿಂಗಳೊಳಗೆ 80 ಸಾವಿರಕ್ಕೂ ಹೆಚ್ಚು ಜನರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರಿಸಲು ಬೆಂಗಳೂರು ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದಾರೆ. ನವೆಂಬರ್ 9 ರಿಂದ ಡಿಸೆಂಬರ್ 8ರ ವರೆಗೆ ಒಟ್ಟು 25 ವಿಧಾನಸಭಾ ಕ್ಷೇತ್ರಗಳಲ್ಲಿ 57,252 ಅರ್ಜಿಗಳು ಸಲ್ಲಿಕೆಯಾಗಿದ್ದು, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ, ಮಹದೇವಪುರ, ಶಿವಾಜಿನಗರದಿಂದ ಸುಮಾರು 23,589 ಅರ್ಜಿಗಳು ಸಲ್ಲಿಕೆಯಾಗಿದೆ ಎಂದು ವರದಿಯಾಗಿದೆ.

After Bengaluru Voters Data Theft Case More Than 80,000 People Apply For Inclusion In Voters List

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅತಿ ಹೆಚ್ಚು ಅರ್ಜಿಗಳು ಬರುತ್ತಿದ್ದು, ಈ ವೇಳೆ ಅಕ್ರಮಗಳು ನಡೆಯುವ ಸಾಧ್ಯತೆ ಕೂಡ ಇದೆ. ಆದರೆ ಬಿಬಿಎಂಪಿ ಅಧಿಕಾರಿಗಳು ಈ ಬಗ್ಗೆ ವಿವರಣೆ ನೀಡಿದ್ದಾರೆ. ಒಂದು ತಿಂಗಳಲ್ಲೇ ಸುಮಾರು 80,000ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಈ ಅವಧಿಯಲ್ಲಿ ನೀಡಿದ ವ್ಯಾಪಕ ಪ್ರಚಾರದ ಹಿನ್ನಲೆಯಿಂದಾಗಿ ಸಾಮಾನ್ಯವಾಗಿ ಹೆಚ್ಚಿನ ಅರ್ಜಿಗಳನ್ನು ಪಡೆಯುತ್ತಿದ್ದೇವೆ ಎಂದು ತಿಳಿಸಿದರು.

ಮತದಾರರ ದತ್ತಾಂಶ ಪ್ರಕರಣದ ಬಳಿಕ ನಾಗರಿಕರು ಜಾಗೃತರಾಗಿದ್ದು, ಸ್ಥಳೀಯ ಅಧಿಕಾರಿಗಳ ಬಳಿ ಕರಡು ಮತದಾರರ ಪಟ್ಟಿಯನ್ನು ಪರಿಶೀಲನೆ ನಡೆಸಿ ಬಿಬಿಎಂಪಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಮತದಾರರ ಪಟ್ಟಿಗೆ ಸೇರ್ಪಡೆಗಾಗಿ ಅರ್ಜಿಗಳಲ್ಲದೆ ಮಾರ್ಪಾಡುಗಳನ್ನು ಕೋರಿ 44,197 ಅರ್ಜಿಗಳು ಬಿಬಿಎಂಪಿಗೆ ಬಂದಿದ್ದು, ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಲು 14,952 ಅರ್ಜಿಗಳನ್ನು ಸಹ ಸಲ್ಲಿಸಲಾಗಿದೆ ಎಂದು ವರದಿಯಾಗಿದೆ. ಇನ್ನು ಮಹದೇವಪುರ 14,226, ಶಿವಾಜಿನಗರ 5,813 ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ 3,550 ಅರ್ಜಿಗಳು ಬಿಬಿಎಂಪಿಗೆ ಬಂದಿವೆ ಎನ್ನಲಾಗಿದೆ.

English summary
After Bengaluru voters data theft case more than 80,000 people apply for inclusion in voters list within a month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X