ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್ ತಿರುಮಂತ್ರ: ಪರಮೇಶ್ವರ್

|
Google Oneindia Kannada News

ಬೆಂಗಳೂರು, ಮಾರ್ಚ್ 09: ಬೆಂಗಳೂರು ರಕ್ಷಿಸಿ ಯಾತ್ರೆ ಮೂಲಕ ಜನರಲ್ಲಿ ಬಿಜೆಪಿಯವರು ತಪ್ಪು ಕಲ್ಪನೆ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಅದಕ್ಕೆ ತಿರುಗೇಟು ನೀಡುವಲ್ಲಿ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದರು.

ಪ್ರತಿಯೊಂದು ಕ್ಷೇತ್ರದ ಮಾಹಿತಿ ಕಲೆ ಹಾಕಿದ್ದು, ಅಲ್ಲಿ ಗೆಲ್ಲುವುದು ಹೇಗೆ ಎನ್ನುವುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಏಪ್ರಿಲ್ ಮೊದಲ ವಾರದಿಂದ 23 ವರೆಗೆ 224 ಕ್ಷೇತ್ರಗಳಲ್ಲಿ ನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ. ಮನೆ ಮನೆಗೆ ಪಾದಯಾತ್ರೆ ನಡೆಸುವುದ ಬಿಜೆಪಿ ಅಧಿಕಾರಕ್ಕೆ ಬರಬಾರದು ಅನ್ನೋದರ ಬಗ್ಗೆ ಏನೆಲ್ಲಾ ಮಾಡಬೇಕು, ಕಾಂಗ್ರೆಸ್ ಪಕ್ಷವನ್ನ ಹೇಗೆ ಅಧಿಕಾರಕ್ಕೆ ತರಬೇಕು ಎನ್ನುವುದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು. 224 ಕ್ಷೇತ್ರಗಳ ಪದಾಧಿಕಾರಿಗಳ ಜೊತೆ‌ ಸಭೆ ನಡೆದಿದ್ದೇವೆ.

ಕಾಂಗ್ರೆಸ್ ಟಿಕೆಟ್ ರಾಜಕೀಯ : 224 ಕ್ಷೇತ್ರಕ್ಕೆ 1,004 ಅರ್ಜಿಗಳುಕಾಂಗ್ರೆಸ್ ಟಿಕೆಟ್ ರಾಜಕೀಯ : 224 ಕ್ಷೇತ್ರಕ್ಕೆ 1,004 ಅರ್ಜಿಗಳು

ನಮ್ಮ ಅಭ್ಯರ್ಥಿ ಗೆಲ್ಲಲು ಮಾಡಬೇಕಾದ ಕೆಲಸದ ಬಗ್ಗೆ ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿ ಮಾಡುತ್ತಿರುವ ಸುಳ್ಳು ಗಳಿಗೆ ಯಾವ ರೀತಿ ಉತ್ತರ ಕೊಡಬೇಕು ಅನ್ನುವುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರಿನಲ್ಲಿ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಬೆಂಗಳೂರಿಗೆ ಕೊಟ್ಟ ಕಾರ್ಯಗಳ ಬಗ್ಗೆ ವಿನೂತನ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಹೇಳಿದರು.

After BJP ending Padayatra now congress turn

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನ ತಲುಪಿಸುವಂತೆ ಸೂಚನೆ ನೀಡಿದ್ದೇವೆ. ಟಿಕೆಟ್ ಆಕಾಂಕ್ಷಿಯಾಗಿರುವ ಪದಾಧಿಕಾರಿಗಳು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿ ಕ್ಷೇತ್ರದಲ್ಲಿ ಚುನಾವಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಸೂಚನೆ ನೀಡಿದ್ದೇವೆ. ರಾಹುಲ್‌ ಗಾಂಧಿ ಪ್ರವಾಸದಲ್ಲಿ ಕಾರಣ ಕೊಡದೇ ಗೈರಾದ ಪದಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಸಿಎಲ್ ಪಿ ಸೂಚಿಸಿದರೆ ನಾನು ಸಿಎಂ ಆಗಲು ಸಿದ್ಧ: ಪರಮೇಶ್ವರ್ಸಿಎಲ್ ಪಿ ಸೂಚಿಸಿದರೆ ನಾನು ಸಿಎಂ ಆಗಲು ಸಿದ್ಧ: ಪರಮೇಶ್ವರ್

English summary
KPCC president DR G Parameshwar said that to counter BJP'S Bengaluru Rakshisi Padayatra congress party will hold padayatra in all 224 constituencies from April 1 to 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X