• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸದ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಸುವ ಪ್ರಶ್ನೆಯೇ ಇಲ್ಲ: ಆರ್. ಅಶೋಕ್!

|

ಬೆಂಗಳೂರು, ಡಿ. 06: ಎರಡು ತಿಂಗಳುಗಳಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಗಿಸುವಂತೆ ಹೈಕೋರ್ಟ್‌ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಆದರೂ ರಾಜ್ಯ ಬಿಜೆಪಿ ಹಾಗೂ ರಾಜ್ಯ ಸರ್ಕಾರಕ್ಕೆ ಈಗಲೇ ಬಿಬಿಎಂಪಿ ಚುನಾವಣೆ ನಡೆಸುವ ಮನಸ್ಸಿಲ್ಲ. ಹೀಗಾಗಿ ಒಂದಿಲ್ಲೊಂದು ಕಾರಣ ಹೇಳುತ್ತಿದ್ದಾರೆಂದು ವಿರೋಧ ಪಕ್ಷಗಳ ನಾಯಕರು ಆರೋಪಿಸುತ್ತಿದ್ದಾರೆ. ವಿಪಕ್ಷ ನಾಯಕರ ಹೇಳಿಕೆಗೆ ಪುಷ್ಟಿಕೊಡುವಂತೆ ಕಂದಾಯ ಸಚಿವ ಆರ್. ಅಶೋಕ್ ಅವರು ಹೇಳಿಕೆ ಕೊಟ್ಟಿದ್ದಾರೆ.

ಸಧ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಸುವ ಪ್ರಶ್ನೆಯೇ ಇಲ್ಲ. ವಾರ್ಡ್ ಪುನರ್ ವಿಂಗಡಣೆ ಪೂರ್ಣಗೊಳಿಸಿದ ಬಳಿಕ 223 ವಾರ್ಡ್‌ಗಳಿಗೆ ಚುನಾವಣೆ ನಡೆಸಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಭಾರಿ ಚರ್ಚೆಗೆ ಕಾರಣವಾದ ಕಂದಾಯ ಸಚಿವ ಅಶೋಕ್ ಹೇಳಿಕೆ!

   T Natarajan ಮೋದಲ ಸರಣಿಯಲ್ಲೇ ಭರವಸೆಯ ಆಟವಾಡಿದರು | Oneindia Kannada

   ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಬರುವ ಅಧಿವೇಶನದಲ್ಲಿ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆಯನ್ನು ಮಂಡಿಸಲಾಗುತ್ತಿದೆ. ಕಾಯ್ದೆ ಜಾರಿಗೆ ಬಂದ ನಂತರ, ವಾರ್ಡ್ ಪುನರ್ ವಿಂಗಡಣೆ ಪೂರ್ಣಗೊಳಿಸಿದ ಬಳಿಕವೇ ಚುನಾವಣೆ ನಡೆಸಬೇಕಾಗುತ್ತದೆ ಎಂದು ಕಾನೂನು ತಜ್ಞರೂ ಸ್ಪಷ್ಟಪಡಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯಕ್ಕೂ ಸಹ ಇದೇ ವಿಷಯ ಮನವರಿಕೆ ಮಾಡಿ ಕೊಡುತ್ತೇವೆ ಎಂದಿದ್ದಾರೆ.

   English summary
   There is no question of currently holding BBMP elections. After completing the ward restructuring, the elections for the 223 wards will be held says Revenue Minister R Ashok in Bengaluru. Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X