ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ? ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಭಾರಿ ಬದಲಾವಣೆ?
ಡಿ.ಕೆ. ಶಿವಕುಮಾರ್ ಒಂದಲ್ಲ ಒಂದು ದಿನ ಸಿಎಂ ಆಗಬೇಕು ಅಂತಾ ಗುರಿ ಇಟ್ಟುಕೊಂಡಿದ್ದು, ಅವರ ಆಸೆ ಶೀಘ್ರದಲ್ಲೇ ಈಡೇರುತ್ತದೆ ಅಂತಾ ಅಭಿಮಾನಿಗಳು & ಬೆಂಬಲಿಗರು ಕಾಯುತ್ತಿದ್ದರು. ಇದೀಗ ಆ ಸಮಯ ಬಂದೇ ಬಿಟ್ಟಿದೆ, ಲೋಕಸಭೆ ಚುನಾವಣೆ 2024ರ ರಿಸಲ್ಟ್ ಬಂದ ನಂತರ ಡಿ.ಕೆ. ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುತ್ತಿದ್ದಾರೆ!
2024ರ ಲೋಕಸಭೆ ಚುನಾವಣೆ ಫಲಿತಾಂಶ ಇನ್ನೇನು ಹೊರಬೀಳಲಿದೆ. ಹೀಗಾಗಿ ಸಕಲ ಸಿದ್ಧತೆ ಸಾಗಿದೆ. ಜೂನ್ 4 ರಂದು ಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಸೋಲು & ಗೆಲುವಿನ ಭಾರಿ ಲೆಕ್ಕಾಚಾರ ಶುರುವಾಗಿದೆ. ಹೀಗಿದ್ದಾಗ ಕರ್ನಾಟಕದ ರಾಜಕೀಯದಲ್ಲೂ ಸಂಚಲನ ಸೃಷ್ಟಿಯಾಗಿ ಸರ್ಕಾರ ಬದಲಾಗಲಿದೆ, ಸಿಎಂ ಸ್ಥಾನ ಕೂಡ ಬದಲಾಗುತ್ತೆ ಅಂತಾ ಈಗ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಮಾತನಾಡುತ್ತಿದ್ದಾರೆ. ಹೀಗಾಗಿ ಡಿ.ಕೆ. ಶಿವಕುಮಾರ್ ಶೀಘ್ರದಲ್ಲೇ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಾ ಮಾಡ್ತಾರಾ ಎಂಬ ಪ್ರಶ್ನೆ ಮೂಡಿದೆ. ಹಾಗಾದ್ರೆ ಈ ಬಗ್ಗೆ ಕಾಂಗ್ರೆಸ್ ವರಿಷ್ಠರ ಲೆಕ್ಕಾಚಾರ ಏನು?

ಡಿ.ಕೆ. ಶಿವಕುಮಾರ್ ಮುಂದಿನ ಸಿಎಂ?
ಈಗಿರುವ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ವರಿಷ್ಠರು ಅಂದ್ರೆ ಹೈಕಮಾಂಡ್ ನಾಯಕರಿಗೆ ರಾಜ್ಯ ನಾಯಕತ್ವದಲ್ಲಿ ಬದಲಾವಣೆ ಮಾಡುವ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಯಾಕಂದ್ರೆ ಕರ್ನಾಟಕ ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಮಾಡಬೇಕು ಎಂಬ ಬೇಡಿಕೆಯನ್ನ ಈ ಮೊದಲಿನಿಂದಲು ಮುಂದಿಡುತ್ತಿದ್ದಾರೆ ನಾಯಕರು. ಇದೀಗ ಆ ಮಾತಿಗೆ ಮನ್ನಣೆ ನೀಡಿ, ಕರ್ನಾಟಕ ರಾಜ್ಯದಲ್ಲಿನ ಮುಖ್ಯಮಂತ್ರಿ ಸ್ಥಾನ ಬದಲಾಯಿಸಲು ಕಾಂಗ್ರೆಸ್ ನಾಯಕರು ಕರ್ನಾಟಕಕ್ಕೆ ಬರ್ತಾರೆ ಎನ್ನಲಾಗ್ತಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ, ಹೀಗಾಗಿ ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರಾ? ಎಂಬ ಕುತೂಹಲ ಗಮನ ಸೆಳೆಯುತ್ತಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ?
ಕರ್ನಾಟಕದಲ್ಲಿ ಅಕಸ್ಮಾತ್ ಸಿಎಂ ಸ್ಥಾನ ಬದಲಾವಣೆ ಆಗಿದ್ದೇ ನಿಜವಾದರೆ ಭಾರಿ ದೊಡ್ಡದಾದ ಸಂಚಲನ ಸೃಷ್ಟಿ ಆಗೋದು ಪಕ್ಕಾ ಅನ್ನೋ ಮಾತುಗಳು ಕೂಡ ಕೇಳಿಬರುತ್ತಿವೆ. ಯಾಕಂದ್ರೆ ಈ ನಿರ್ಧಾರ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡುವುದು ಪಕ್ಕಾ ಎನ್ನಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ವರಿಷ್ಠರು ಅಳೆದು & ತೂಗಿ ಈ ಬಗ್ಗೆ ಲೆಕ್ಕಾಚಾರ ಶುರು ಮಾಡಿದ್ದಾರೆ. ಮುಂದಿನ ಸಾಧ್ಯತೆಗಳು ಹಾಗೂ ಏನೆಲ್ಲಾ ಹೆಚ್ಚುಕಮ್ಮಿ ಆಗಬಹುದು? ಎಂಬ ಕುರಿತು ಈಗ ಚರ್ಚೆ ನಡೆಯುತ್ತಿದೆ. ಹೀಗೆ ಮತ್ತೊಮ್ಮೆ ಇಡೀ ದೇಶಾದ್ಯಂತ ಕರ್ನಾಟಕದ ರಾಜಕಾರಣದ ಕುರಿತು ಚರ್ಚೆ ಶುರುವಾಗುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ.
ಡಿಕೆ ಸಹೋದರರಿಗೆ ಜಯ?
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ಭಾರತದ ಮೂಲೆ ಮೂಲೆಯಲ್ಲಿ ಸದ್ದು ಮಾಡಿತ್ತು ಯಾಕಂದ್ರೆ ಈ ಕ್ಷೇತ್ರದಲ್ಲಿ ಸತತವಾಗಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರನ್ನು ಕಟ್ಟಿಹಾಕಲು ನೇರ ಬಿಜೆಪಿ ಕೇಂದ್ರ ನಾಯಕರೆ ಸಿದ್ಧತೆ ನಡೆಸಿದ್ರು. ಇದು ಮಾತ್ರವಲ್ಲ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಅಳಿಯ ಡಾ. ಸಿ.ಎನ್. ಮಂಜುನಾಥ್ ಅವರನ್ನೇ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಕಣಕ್ಕೆ ಇಳಿಸಿದ್ದರು ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ಅವರು, ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಹಾಗಾದ್ರೆ ಈ ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಎಂಬ ಪ್ರಶ್ನೆ ಕುತೂಹಲ ಕೆರಳಿಸಿದೆ.












Click it and Unblock the Notifications