ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಹಲವೆಡೆ ಸಾಧಾರಣ ಮಳೆ: ಎರಡು ದಿನ ಮಳೆ ನಿರೀಕ್ಷೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 07 : ನಗರದ ಹಲವೆಡೆ ಸಾಧಾರಣ ಮಳೆಯಾಗಿದ್ದು ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕಳೆದ ಮೂರು ವರ್ಷಗಳಲ್ಲಿ ಫೆಬ್ರವರಿಯಲ್ಲಿ ಈ ಪ್ರಮಾಣದ ಮಳೆಯು ಇದೇ ಮೊದಲ ಬಾರಿ ಆಗಿದೆ. ತುಮಕೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವೆಡೆ ತುಂತುರು ಮಳೆಯಾಗಿದೆ.
ಮಲ್ಲೇಶ್ವರಂ, ಜಯನಗರ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್ ಸುತ್ತಮುತ್ತಲ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ. ಇನ್ನೂ 48 ಗಂಟೆಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ.

 After Long dry spell, rainy days ahead for Bengaluru

ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಹಾಗೂ ಮಾಲ್ಡೀವ್ಸ್ ನಿಂದ ಕರ್ನಾಟಕ ಕರಾವಳಿ ಪ್ರದೇಶದ ವರೆಗೆ ವಾಯುಭಾರ ಕುಸಿತ ಉಂಟಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರವಾಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಎಂ.ಮೇತ್ರಿ ತಿಳಿಸಿದ್ದಾರೆ.

ಬೀದರ್ ನಲ್ಲಿ ಬುಧವಾರ10.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 32.3 ಡಿಗ್ರಿ ಸೆ. ಗರಿಷ್ಠ ಉಷ್ಣಾಂಶ ಹಾಗೂ 20 ಡಿಗ್ರಿ ಸೆ. ಕನಿಷ್ಠ ತಾಪಮಾನ ದಾಖಲಾಗಿದೆ. ಕೆಐಎಎಲ್ ನಲ್ಲಿ ಗರಿಷ್ಠ 30 ಡಿಗ್ರಿ ಸೆ. ಹಾಗೂ ಕನಿಷ್ಠ 18 ಡಿಗ್ರಿ, ಎಚ್ ಎಎಲ್ ನಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 18.4 ಡಿಗ್ರಿ ಸೆ. ತಾಪಮಾನ ದಾಖಲಾಗಿದೆ.

English summary
The unexpected rains on Wednesday broke three years long dry in February month . As per skymet Weather , the garden city all set to witness rain and thundershowers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X