ಬೆಂಗಳೂರಲ್ಲಿ ಕೋವಿಡ್ ಪ್ರಕರಣ ಏರಿಕೆ; ಆರೋಗ್ಯ ಇಲಾಖೆ ಸ್ಪಷ್ಟನೆ

ಬೆಂಗಳೂರು, ಏಪ್ರಿಲ್ 24; ಉದ್ಯಾನ ನಗರಿ ಬೆಂಗಳೂರಿನಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 100ರ ಗಡಿ ದಾಟಿದೆ. ಮಾರ್ಚ್ 18ರ ಬಳಿಕ ನಗರದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 100ಕ್ಕಿಂತ ಹೆಚ್ಚಾಗಿದೆ.

ಶನಿವಾರದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು ನಗರ ಜಿಲ್ಲೆಯಲ್ಲಿ 132 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ1601. ಒಟ್ಟು ಪ್ರಕರಣಗಳ 1782879. 24 ಗಂಟೆಯಲ್ಲಿ 3878 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ.

ಹೆಲ್ತ್ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ ಪತ್ತೆಯಾದ ಹೊಸ ಪ್ರಕರಣಗಳು 139. ಇದರಲ್ಲಿ 132 ಪ್ರಕರಣಗಳು ಬೆಂಗಳೂರಿನಲ್ಲಿಯೇ ದಾಖಲಾಗಿವೆ. ಉಳಿದಂತೆ ಚಿತ್ರದುರ್ಗ 2, ಚಿಕ್ಕಮಗಳೂರು 1, ದಾವಣಗೆರೆ 1, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರದಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.

Covid Cases

24 ಗಂಟೆಯಲ್ಲಿ ರಾಜ್ಯದಲ್ಲಿ 55 ಜನರು ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಯಾರೂ ಸಹ ಮೃತಪಟ್ಟಿಲ್ಲ. ರಾಜ್ಯದ ಸಕ್ರಿಯ ಪ್ರಕರಣಗಳು 1679. ಪಾಸಿಟಿವಿಟಿ ದರ ಶೇ 1.37 ಆಗಿದೆ. ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 3946874. ಇದುವರೆಗೂ ಗುಣಮುಖಗೊಂಡವರು 3905096.

ಆರೋಗ್ಯ ಇಲಾಖೆ ಸ್ಪಷ್ಟನೆ; ಬೆಂಗಳೂರು ನಗರದಲ್ಲಿ ಹೊಸ ಕೋವಿಡ್ ಪ್ರಕರಣ ಏರಿಕೆಯಾಗುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಆರೋಗ್ಯ ಇಲಾಖೆ ಆಯುಕ್ತ ರಣದೀಪ್ ಡಿ. ಈ ಕುರಿತು ಟ್ವೀಟ್ ಮಾಡಿದ್ದಾರೆ.

ಕೆಲವು ಮಾಧ್ಯಮಗಳು ಬೆಂಗಳೂರಿನಲ್ಲಿ ಬಿಎ 2.10 ಮತ್ತು ಬಿಎ 2.12 ಮಾದರಿ ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂದು ವರದಿ ಮಾಡುತ್ತಿದೆ. ಆದರೆ ಇದು ಇನ್ನೂ ಖಚಿತವಾಗಿಲ್ಲ. ಐಎನ್‌ಎಸ್‌ಎಸಿಓಜಿ ಪ್ರಯೋಗಾಲಯದ ವರದಿಯೂ ಇದನ್ನು ಖಚಿತಪಡಿಸಿಲ್ಲ ಎಂದು ಹೇಳಿದ್ದಾರೆ.

ಕೋವಿಡ್ ಸೋಂಕಿನಿಂದ ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಳವಾಗಿಲ್ಲ. ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿತರ ಸಾವು ಸಹ ಶೂನ್ಯವಾಗಿದೆ. ರಾಜ್ಯ ಬೆಂಗಳೂರಿನಲ್ಲಿ ಕಣ್ಗಾವಲು ವ್ಯವಸ್ಥೆಯನ್ನು ಮುಂದುವರೆಸಿದೆ. ನಗರದಲ್ಲಿ ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+