ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎನ್ ಆರ್ ಸಂತೋಶ್ ಆರೋಗ್ಯ ಚೇತರಿಕೆ: ಸೋಮವಾರ ಮಧ್ಯಾಹ್ನ 2 ಗಂಟೆಗೆ ಡಿಸ್ಚಾರ್ಜ್

|
Google Oneindia Kannada News

ಬೆಂಗಳೂರು, ನವೆಂಬರ್.30: ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ಸೋಮವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ.

ಸೋಮವಾರ ಬೆಳಗ್ಗೆ 11 ಗಂಟೆಗೆ ವೈದ್ಯರು ರೋಟಿನ್ ಚೆಕ್ ಅಪ್ ನಡೆಸಲಿದ್ದಾರೆ. ತದನಂತರದಲ್ಲಿ ಎನ್.ಆರ್.ಸಂತೋಷ್ ಆರೋಗ್ಯ ಸ್ಥಿತಿಯನ್ನು ನೋಡಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಸಂತೋಷ್ ಆತ್ಮಹತ್ಯೆ ಪ್ರಯತ್ನ ಪ್ರಕರಣ: ಯಡಿಯೂರಪ್ಪ ಪ್ರತಿಕ್ರಿಯೆಸಂತೋಷ್ ಆತ್ಮಹತ್ಯೆ ಪ್ರಯತ್ನ ಪ್ರಕರಣ: ಯಡಿಯೂರಪ್ಪ ಪ್ರತಿಕ್ರಿಯೆ

ಕಳೆದ ನವೆಂಬರ್.27ರ ರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅದೇ ರಾತ್ರಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಅವರನ್ನು ರವಾನಿಸಲಾಗಿತ್ತು. ಒಂದು ದಿನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ ಬಳಿಕ ಬಾನುವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು.

After Routine Checkup, N R Santosh Discharge From Hospital On Monday

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ:

ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನರಲ್ ವಾರ್ಡಿಗೆ ಶಿಫ್ಟ್ ಮಾಡುತ್ತಿದ್ದಂತೆ ಪೊಲೀಸರು ಸಂತೋಷ್ ರಿಂದ ಹೇಳಿಕೆ ಪಡೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ವೈದ್ಯರು 48 ಗಂಟೆಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ಹೇಳಿದ್ದರು. ಹೀಗಾಗಿ ಎನ್.ಆರ್. ಸಂತೋಷ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಮನೆಗೆ ತೆರಳಿ ಸದಾಶಿವನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಮಂಜುನಾಥ್ ಅವರು ಹೇಳಿಕೆ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

English summary
Karnataka CM Political Secretary N R Santosh Discharge From Hospital After Routine Checkup On Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X