ತಾಂಜೇನಿಯಾ ವಿದ್ಯಾರ್ಥಿಗಳಿಗೆ ಆತಂಕ ಮೂಡಿಸಿದ ಎಸ್ಎಂಎಸ್
ಬೆಂಗಳೂರು, ಫೆಬ್ರವರಿ 05 : ತಾಂಜೇನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಇದರ ನಡುವೆಯೇ ವಿದ್ಯಾರ್ಥಿಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಬಹುದು ಎಂಬ ಎಸ್ಎಂಎಸ್ ಹರಿದಾಡುತ್ತಿದೆ.
'ಶನಿವಾರದ ತನಕ ಎಚ್ಚರಿಕೆಯಿಂದಿರಿ, ಸ್ಥಳೀಯರು ನಿಮ್ಮ ಮೇಲೆ ಹಲ್ಲೆ ನಡೆಸಬಹುದು' ಎಂಬ ಸಂದೇಶ ಆಫ್ರಿಕಾದ ವಿದ್ಯಾರ್ಥಿಗಳ ಮೊಬೈಲ್ಗಳಲ್ಲಿ ಹರಿದಾಡುತ್ತಿದೆ. ಇದರಿಂದ ಆತಂಕಗೊಂಡ ಕೆಲವು ವಿದ್ಯಾರ್ಥಿಗಳು ಕಾಲೇಜಿಗೂ ಹಾಜರಾಗಿಲ್ಲ. [ವಿದ್ಯಾರ್ಥಿನಿ ಹಲ್ಲೆ: ಪರಂ ವಿರುದ್ಧ ಟ್ವಿಟ್ಟರ್ ಮಂದಿ ಗರಂ]

ಪೊಲೀಸರು ಇಂತಹ ಎಸ್ಎಂಎಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆಚಾರ್ಯ ಕಾಲೇಜಿನಲ್ಲಿನ ಆಫ್ರಿಕಾದ ವಿದ್ಯಾರ್ಥಿಗಳು ಇಂಟರ್ನಲ್ ಪರೀಕ್ಷೆಗಳನ್ನು ಮುಂದೂಡಿ ಎಂದು ಕಾಲೇಜಿನ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ. [ಲೈಂಗಿಕ ದೌರ್ಜನ್ಯ ನಡೆದಿಲ್ಲ, ಪ್ರಕರಣ ಸಿಸಿಬಿಗೆ: ಪರಮೇಶ್ವರ]
ಶುಕ್ರವಾರ ಇಂಟರ್ನಲ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿರುವ ಕಾಲೇಜಿನ ಆಡಳಿತ ಮಂಡಳಿ, ಆಫ್ರಿಕಾದ ವಿದ್ಯಾರ್ಥಿಗಳಿಗೆ ಪತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ವಿದ್ಯಾರ್ಥಿಗಳ ಮನೆಗೆ ತೆರಳಿ ಇಂತಹ ಎಸ್ಎಂಎಸ್ ಬಗ್ಗೆ ಭಯಪಡಬೇಕಾಗಿಲ್ಲ ಎಂದು ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಧೈರ್ಯ ತುಂಬಲಿದ್ದಾರೆ. [ಯುವತಿ ಮೇಲೆ ಹಲ್ಲೆ : ಸಿದ್ದರಾಮಯ್ಯಗೆ ಸುಷ್ಮಾ ಸ್ವರಾಜ್ ಕರೆ]
ಕೇಂದ್ರ ವಿದೇಶಾಂಗ ಸಚಿವಾಲಯ ಮತ್ತು ತಾಂಜೇನಿಯಾ ರಾಯಭಾರ ಕಚೇರಿಯ ಅಧಿಕಾರಿಗಳ ಒಂದು ತಂಡ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಲಿದೆ. ಪ್ರಕರಣದ ಕುರಿತು ವಿವರವಾದ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದೆ.
ಜನವರಿ 31ರ ರಾತ್ರಿ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾಂಜೇನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣದ ಭಾರೀ ವಿವಾದ ಹುಟ್ಟು ಹಾಕಿದ್ದು, ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications