ಯಲಹಂಕದಲ್ಲಿ ಮತ್ತೆ ಬೆಂಕಿಯ ರುದ್ರ ನರ್ತನ

ಬೆಂಗಳೂರು, ಫೆಬ್ರವರಿ 24 : ಯಲಹಂಕದಲ್ಲಿ ಭಾನುವಾರ ಮತ್ತೊಂದು ಅಗ್ನಿ ಅವಘಡ ನಡೆದಿದೆ. ಶನಿವಾರ ಏರ್ ಶೋ ಕಾರು ಪಾರ್ಕಿಂಗ್ ಜಾಗದಲ್ಲಿ ಬೆಂಕಿ ಹೊತ್ತಿಕೊಂಡು 277 ಕಾರುಗಳು ಬೆಂಕಿಗೆ ಆಹುತಿಯಾಗಿತ್ತು.

ಭಾನುವಾರ ಯಲಹಂಕ ವಾಯುನೆಲೆ ಹಿಂಭಾಗದ ಆರ್ ಟಿ ಓ ಕಚೇರಿ ಬಳಿ ಇರುವ ಜಾರಕಬಂಡೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 40 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಂಕಿ ಹಬ್ಬಿದ್ದು, ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ.

Again fire accident at Yelahanka

ಕೆಲವು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಅಂದಾಜಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಹುಲ್ಲು ಒಣಗಿದ್ದರಿಂದ ಬೆಂಕಿ ಬೇಗನೇ ಹಬ್ಬಿದೆ. ಅರಣ್ಯ ಪ್ರದೇಶದೊಳಗೆ ಹೋಗಲು ಸಾಧ್ಯವಿಲ್ಲದಂತೆ ಬೆಂಕಿ ಹೊತ್ತಿ ಉರಿಯುತ್ತಿದೆ.

ಬೆಂಕಿ ಕಾಣಿಸಿಕೊಂಡ ಮಾಹಿತಿ ಸಿಕ್ಕ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶೇ 40ರಷ್ಟು ಬೆಂಕಿಯನ್ನು ಹತೋಟಿಗೆ ತರುವಲ್ಲಿ ಅಗ್ನಿ ಶಾಮಕದ ದಳದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಶನಿವಾರ ಯಲಹಂಕ ವಾಯುನೆಯಲ್ಲಿ ನಡೆಯುತ್ತಿರುವ ಏರ್ ಶೋನ ಪಾರ್ಕಿಂಗ್ ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. 277 ಕಾರುಗಳು ಬೆಂಕಿಗೆ ಆಹುತಿಯಾಗಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+