NEP ರದ್ದು: 2013-18ರಲ್ಲಿ ಸಿದ್ದರಾಮಯ್ಯ ಸರ್ಕಾರವೇ ನೀತಿ ಒಪ್ಪಿತ್ತು, ಈಗ ಪುನರ್ ಪರಿಶೀಲಿಸಿ: ಬೊಮ್ಮಾಯಿ

ಬೆಂಗಳೂರು, ಆಗಸ್ಟ್ 15: ನಾಡಿನ ಮಕ್ಕಳ ಭವಿಷ್ಯವನ್ನು ಕಡೆಗಣಿಸಿ ಕೇವಲ ರಾಜಕಾರಣಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಮಂಗಳವಾರ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರೂಪಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಸಿದ್ದರಾಮಯ್ಯನವರ 2013-18ರ ಅವಧಿಯ ಸರ್ಕಾರ ಒಪ್ಪಿಗೆ ಕೊಟ್ಟಿತ್ತು. ಅದರ ನೇತೃತ್ವವನ್ನು ಕಸ್ತೂರಿರಂಗನ್ ಅವರು ವಹಿಸಿದ್ದರು. ಕರ್ನಾಟಕದ ಶಿಕ್ಷಣ ನೀತಿ ರಚಿಸಿದ್ದ ಕಸ್ತೂರಿರಂಗನ್ ಅವರೇ ಇಡೀ ದೇಶದ ಈ ಎನ್‍ಇಪಿ ನೀತಿ ಮಾಡಿದ್ದರು ಎಂದು ಅವರು ವಿವರಿಸಿದರು.

agreed-nep-in-2013-18

ಇದು ಮಕ್ಕಳ ಭವಿಷ್ಯದ ಬಗ್ಗೆ ಚೆಲ್ಲಾಟ ಎಂದು ಆಕ್ಷೇಪಿಸಿದರು. ಇಡೀ ದೇಶದಲ್ಲಿ ಇರುವ ವ್ಯವಸ್ಥೆ ನಮ್ಮ ರಾಜ್ಯದಲ್ಲಿ ಇಲ್ಲದಿದ್ದರೆ ನಮ್ಮ ಮಕ್ಕಳು ಪೈಪೋಟಿ ಮಾಡುವುದು ಹೇಗೆ ಎಂದು ಅವರು ಪ್ರಶ್ನಿಸಿದರು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬಹಳ ದೊಡ್ಡ ಹಿನ್ನಡೆ ಆಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರು ರಾಜಕೀಯ ಕಾಮಾಲೆ ಕಣ್ಣಿನಿಂದ ನೋಡದೆ ಮಕ್ಕಳ ಉಜ್ವಲ ಭವಿಷ್ಯವನ್ನು ನೋಡಬೇಕು. ಈ ವಿಚಾರವನ್ನು ಪುನರ್ ವಿಮರ್ಶೆ ಮಾಡಬೇಕು. ಇಲ್ಲವಾದರೆ ಪಾಲಕರು, ಶಿಕ್ಷಣ ಸಂಸ್ಥೆಗಳ ಜೊತೆಗೂಡಿ ಬಿಜೆಪಿ ದೊಡ್ಡ ಆಂದೋಲನ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಪ್ರಕರಣಗಳ ರಾಜಕೀಯ ಪ್ರೇರಿತ ತನಿಖೆ

ಸಿದ್ದರಾಮಯ್ಯನವರು ನಮ್ಮ ಅಧಿಕಾರ ಅವಧಿಯ ಕಾಮಗಾರಿಗಳ ತನಿಖೆ ಮಾಡುವುದಾಗಿ ಹೇಳಿ ಮೂರು ತಿಂಗಳಾಗಿದೆ. ಹಲವು ವರದಿಗಳು ಬಂದಿದ್ದು, ಅದರಲ್ಲಿ ಏನೂ ಇಲ್ಲವೆಂದು ಗೊತ್ತಾಗಿ ಪುನರ್ ತನಿಖೆ ಮಾಡುತ್ತಿದ್ದಾರೆ. ರಾಜಕೀಯಪ್ರೇರಿತ ತನಿಖೆಗಳು ನಡೆಯುತ್ತಿವೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲಿ. ತನಿಖೆ ಹೆಸರಿನಲ್ಲಿ ತಿಂಗಳುಗಟ್ಲೆ ಬಾರ್ಗೇನ್ ಮಾಡಲು ಉಪಯೋಗ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಕೇಳಿದರು.

agreed-nep-in-2013-18

ಬಿಜೆಪಿಗೆ ಮತ ಕೊಡುವವರು ರಾಕ್ಷಸರು ಎಂಬ ಸುರ್ಜೇವಾಲಾರ ಹೇಳಿಕೆ ಅತ್ಯಂತ ಖಂಡನೀಯ. ದೇಶದ ನಾಗರಿಕರಿಗೆ ಮಾಡಿದ ಈ ಅವಮಾನವನ್ನು ಪ್ರತಿಯೊಬ್ಬ ನಾಗರಿಕರೂ ಖಂಡಿಸಬೇಕು. ಕಾಂಗ್ರೆಸ್ ಏನು ಸ್ವಚ್ಛವಾಗಿ ತೊಳೆದ ಮುತ್ತೇ? ಅಲ್ಲಿ ಎಲ್ಲರೂ ಹರಿಶ್ಚಂದ್ರರೇ ಇದ್ದಾರಾ? ಎಂದು ಪ್ರಶ್ನಿಸಿದ್ದರು.

ಕಳೆದ 75 ವರ್ಷದ ಟ್ರ್ಯಾಕ್ ರೆಕಾರ್ಡ್ ಪರಿಶೀಲಿಸಿದರೆ ಅತ್ಯಂತ ಭ್ರಷ್ಟ, ಜನವಿರೋಧಿ ಸರ್ಕಾರಗಳನ್ನು ನಾವು ನೋಡಿದ್ದೇವೆ. ಎಷ್ಟು ಜನ ಕಾಂಗ್ರೆಸ್ ನಾಯಕರು ಜೈಲಿನಲ್ಲಿದ್ದಾರೆ? ಎಷ್ಟು ಕೇಸುಗಳಿವೆ? ಎಂದು ಪ್ರಶ್ನೆ ಹಾಕಿದರು. ಇವರಿಗೆ ನಾಚಿಕೆ ಆಗಬೇಕು. ಇದು ಅಮಾನವೀಯ, ಅಸಾಂವಿಧಾನಿಕ ಮತ್ತು ಅಕ್ಷಮ್ಯ ಅಪರಾಧ ಎಂದು ಹೇಳಿದರು.

ಬಿಜೆಪಿಯಿಂದ ಎನ್‌ಇಪಿ ಜಾರಿ

ಕೇಂದ್ರ ಬಿಜೆಪಿ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿನ ಸುಧಾರಣೆಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ತಂದಿತ್ತು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರವು ಇದನ್ನು ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೊಳಿಸಿತ್ತು.

ಇದೀಗ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಈ ನೀತಿಯಲ್ಲಿ RSS ಕಾರ್ಯನೀತಿ ಅಂಶಗಳಿಗೆ ಎಂದು ಆರೋಪಿಸಿದೆ. ಅಲ್ಲದೇ ಮುಂದಿನ ರ್ವ 2024ರ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ನೀತಿ ರದ್ದು ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+