ಜಿಕೆವಿಕೆ ಆವರಣದಲ್ಲಿ ನ.11ರಿಂದ 14ರ ವರೆಗೆ ಕೃಷಿ ಮೇಳ
ಬೆಂಗಳೂರು, ಅ.19: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ (ಜಿಕೆವಿಕೆ) ಆವರಣದಲ್ಲಿ ನ.11ರಿಂದ 14ರ ವರೆಗೆ 2021ನೇ ಸಾಲಿನ ಕೃಷಿ ಮೇಳ ನಡೆಯಲಿದೆ.
ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಸಹಿತ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಾಲ್ಕು ದಿನಗಳ ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ. ಕೋವಿಡ್ ನಿಯಮಗಳ ಅನುಸಾರ ಮೇಳವನ್ನು ಆಯೋಜಿಸಲಾಗಿದೆ. ರೈತರು ಮತ್ತು ಸಾರ್ವಜನಿಕರು ನೇರವಾಗಿ ಪಾಲ್ಗೊಳ್ಳಬಹುದು ಮತ್ತು ಆನ್‌ಲೈನ್ ಮೂಲಕವೂ ವೀಕ್ಷಿಸಬಹುದು ಎಂದು ಜಿಕೆವಿಕೆ ವಿಸ್ತರಣಾ ನಿರ್ದೇಶಕ ಎನ್. ದೇವಕುಮಾರ್ ಹೇಳಿದ್ದಾರೆ.
10 ತಳಿ, 28 ಯಂತ್ರೋಪಕರಣ ಬಿಡುಗಡೆ
ಕೃಷಿ ವಿಶ್ವವಿದ್ಯಾಲಯ ಪ್ರತಿ ವರ್ಷವೂ ಸಹ ರಾಗಿ, ಭತ್ತ, ಗೋಧಿ, ಮೆಕ್ಕೆಜೋಳ ಸಹಿತ ಹಲವು ಬೆಳೆಗಳ ನೂತನ ತಳಿಗಳನ್ನು ಅಭಿವೃದ್ಧಿ ಪಡಿಸಿ ಅದರಲ್ಲಿ ಉತ್ತಮ ವಾಗಿರುವುದನ್ನು ರೈತರಿಗೆ ಪರಿಚಯಿಸುತ್ತದೆ. ಅಲ್ಲದೆ, ಈ ನೂತನ ತಳಿಗಳನ್ನು ಜಿಕೆವಿಕೆ ಆವರಣದಲ್ಲಿ ಪ್ರತ್ಯಕ್ಷಿಕೆಯಲ್ಲಿ ಬೆಳೆದು ಅದನ್ನು ಪ್ರದರ್ಶನ ಮಾಡುತ್ತದೆ.

ಅದೇ ರೀತಿ ಈ ವರ್ಷವೂ ಸಹ 10 ನೂತನ ತಳಿಗಳನ್ನು ಕೃಷಿ ಮೇಳದಲ್ಲಿ ಬಿಡುಗಡೆ ಮಾಡಲಿದೆ. ಅದಲ್ಲದೆ, ರೈತರ ನಿತ್ಯ ಕೃಷಿ ಚಟುವಟಿಕೆಗಳಿಗೆ ಅನುಕೂಲಕರವಾದಂತಹ 28 ಬಗೆಯ ಯಂತ್ರೋಪಕರಣಗಳನ್ನೂ ಸಹ ಕೃಷಿ ಮೇಳದಲ್ಲಿ ರೈತರಿಗೆ ಪರಿಚಯಿಸಲಾಗುತ್ತದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವಂತಹ ಜಿಲ್ಲೆಗಳಿಂದ ಪ್ರಗತಿಪರ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಅತ್ಯುತ್ತಮ ರೈತ ಪ್ರಶಸ್ತಿ ನೀಡಲಾಗುತ್ತದೆ.
ಅಲ್ಲದೆ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಉದ್ದಿಮೆಗಳಷ್ಟೇ ಆಲ್ಲದೆ, ಖಾಸಗಿ ಕ್ಷೇತ್ರದಲ್ಲಿಯೂ ಸಹ ಕೃಷಿ ಕ್ಷೇತ್ರದಲ್ಲಿ ಆಗಿರುವ ಬೆಳವಣಿಗೆಗಳ ಕುರಿತು ರೈತರಿಗೆ ಪರಿಚಯಿಸಲು ವಿವಿಧ ಮಳಿಗೆಗಳನ್ನು ಹಾಕಲಾಗುತ್ತದೆ. ಅಲ್ಲಿ ಕಂಪೆನಿಗಳು ತಮ್ಮ ಯಂತ್ರೋಪಕರಣಗಳನ್ನು ಪರಿಚಯ ಮಾಡುತ್ತವೆ. ಈ ಬಾರಿ ಈ ರೀತಿ 250 ವಿಶೇಷ ಮಳಿಗೆಗಳು ಇರಲಿವೆ. ರೈತರು ಯಾವುದೇ ಕೃಷಿ ಸಂಬಂಧಿತ ಯಾವುದೇ ಸಮಸ್ಯೆಗಳ ಕುರಿತು ಸ್ಥಳದಲ್ಲಿಯೇ ತತ್ಞರಿಂದ ಮಾಹಿತಿಗಳನ್ನು ಪಡೆದುಕೊಳ್ಳಬಹುದು.
ಎಷ್ಟು ಜನ ಭಾಗಿ?:
ಕೋವಿಡ್‌ಗಿಂತ ಪೂರ್ವದಲ್ಲಿ ನಡೆಯುತ್ತಿದ್ದ ಕೃಷಿ ಮೇಳದಲ್ಲಿ ಸರಾಸರಿ 5 ಲಕ್ಷಕ್ಕೂ ಅಧಿಕ ರೈತರು ಮತ್ತ ಸಾರ್ವಜನಿಕರು ಭಾಗವಹಿಸುತ್ತಿದ್ದರು. ಆದರೆ, ಈ ಬಾರಿ ಎಷ್ಟು ಜನ ರೈತರು ಬರುತ್ತಾರೆ ಎಂಬುದನ್ನು ಕೃಷಿ ವಿಶ್ವವಿದ್ಯಾಲಯ ಸ್ಪಷ್ಟಪಡಿಸಿಲ್ಲ.
ಬಳ್ಳಾರಿ ರಸ್ತೆಯ ಜಿಕೆವಿಕೆ ಮುಖ್ಯದ್ವಾರದಿಂದ ಕೃಷಿ ಮೇಳದ ಆವರಣದವರೆಗೆ ಉಚಿತ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರವೇಶವೂ ಸಹ ಉಚಿತವಾಗಿದ್ದು, ಯಾವುದೇ ಪ್ರದರ್ಶನಗಳಿಗೂ ಟಿಕೆಟ್ ವಿಧಿಸಿಲ್ಲ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
Recommended Video
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications