Bengaluru-Mysuru Expressway: ಉದ್ಘಾಟನೆಗೂ ಮುನ್ನ ಸಿದ್ದರಾಮಯ್ಯ ಪರಿಶೀಲನೆ- ಹೆಚ್ಚಿದ ಕುತೂಹಲ, ದಿನಾಂಕ, ಮಾಹಿತಿ ತಿಳಿಯಿರಿ
ಮಾರ್ಚ್ 12 ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅದಕ್ಕೂ ಮುನ್ನ, ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಪರಿಶೀಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು, ಮಾರ್ಚ್ 06: ಮಾರ್ಚ್ 12 ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅದಕ್ಕೂ ಮುನ್ನ, ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಪರಿಶೀಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದು ರಾಜಕೀಯವಾಗಿ ಕುತೂಹಲ ಕೆರಳಿಸಿದೆ. ಹೋಳಿ ಹಬ್ಬದ ನಂತರ ಪರಿಶೀಲನೆ ನಡೆಯಲಿದೆ ಎಂದು ತಿಳಿದುಬಂದಿದೆ.

ಹೋಳಿ ಹಬ್ಬದ ನಂತರ ಪರಿಶೀಲನೆ
ಹೋಳಿ ಹಬ್ಬದ ನಂತರ ಮಾರ್ಚ್ 9 ರಂದು ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಪರಿಶೀಲಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಅವರು ಗುರುವಾರ ಮತ್ತೊಮ್ಮೆ ಮೈಸೂರಿಗೆ ಭೇಟಿ ನೀಡಲಿದ್ದು, ಅದೇ ದಿನ ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮಾರ್ಚ್ 12 ರಂದು ಪ್ರಧಾನಿ ಮೋದಿ ಉದ್ಘಾಟನೆ
ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ಪ್ರೆಸ್‌ವೇ ಅನ್ನು ಔಪಚಾರಿಕ ಉದ್ಘಾಟನೆ ಮಾಡಲಿದ್ದಾರೆ. ಅಂದಿನಿಂದಲೇ ಈ ರಸ್ತೆ ಜನರಿಗೆ ಮುಕ್ತವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅದಕ್ಕೂ ಮುನ್ನ ಸಿದ್ದರಾಮಯ್ಯ ಅವರ ಪರಿಶೀಲನೆ ನಡೆಲಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಯಲದಲ್ಲಿ ತೀವ್ರ ಕೂತುಹಲಕ್ಕೆ ಕಾರಣವಾಗಿರುವುದಂತೂ ಸತ್ಯ.

ಬೆಂಗಳೂರು-ಮೈಸೂರು ನಡುವಿನ 10 ಪಥಗಳ ಎಕ್ಸ್‌ಪ್ರೆಸ್‌ವೇ
ಬೆಂಗಳೂರು-ಮೈಸೂರು ನಡುವಿನ 10 ಪಥಗಳ ಎಕ್ಸ್‌ಪ್ರೆಸ್‌ವೇಯ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಹೆದ್ದಾರಿಗಿಂತ ಹೆಚ್ಚೇನೂ ಇಲ್ಲದ ಈ ಹೆದ್ದಾರಿಯನ್ನು ಅವರು ಮುಖ್ಯಮಂತ್ರಿಯಾಗಿದ್ದಾಗ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿತ್ತು. ಆ ಸಮಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಡಾ ಎಚ್ ಸಿ ಮಹದೇವಪ್ಪ ಲೋಕೋಪಯೋಗಿ ಸಚಿವರಾಗಿದ್ದರು.

ಆಸ್ಕರ್ ಫರ್ನಾಂಡಿಸ್ ನಿರ್ಧಾರ
ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವರಾಗಿದ್ದ ದಿವಂಗತ ಆಸ್ಕರ್ ಫರ್ನಾಂಡಿಸ್ ಅವರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿದ್ದಲ್ಲದೆ, ಹೆದ್ದಾರಿಯನ್ನು 10 ಪಥಗಳಾಗಿ ವಿಸ್ತರಿಸುವ ಪ್ರಸ್ತಾವನೆಗೆ ಹಸಿರು ನಿಶಾನೆ ತೋರಿದರು ಎಂದು ಮಾಜಿ ಸಿಎಂ ಹೇಳಿದ್ದಾರೆ.

ದೆಹಲಿಗೆ ಪ್ರಯಾಣ ಬೆಳೆಸಿದ್ದೆ
ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ನಂತರ ರಸ್ತೆ ವಿಸ್ತರಣೆಗೆ ಅನುಮೋದನೆ ಪಡೆಯಲು ಮಹದೇವಪ್ಪ ಅವರೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದೆ ಎಂದೂ ಅವರು ಹೇಳಿದರು. ಅಲ್ಲದೆ, ರಸ್ತೆ ಅಗಲೀಕರಣದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಪಾತ್ರವಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಮಂಡ್ಯ, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರತ್ತದೆ
ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರಿನಿಂದ ಹೊರವಲಯದಲ್ಲಿರುವ ಕಳಸ್ತವಾಡಿಯವರೆಗಿನ ಕೆಲವು ಕಿಲೋಮೀಟರ್‌ಗಳನ್ನು ಹೊರತುಪಡಿಸಿ ಕೇಂದ್ರ ಸರ್ಕಾರದ ಯಾವುದೇ ಸಹಾಯಹಸ್ತವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಉಳಿದ ಹೆದ್ದಾರಿಯು ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಸೇರಿದಂತೆ ಇತರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಅವರು ಹೇಳಿದರು.

ಒಟ್ಟು 2 ಸಾವಿರ ಕಿ.ಮೀ ಉದ್ದದ ರಾಜ್ಯ ಹೆದ್ದಾರಿ
ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ 2014ರಲ್ಲಿ ಒಟ್ಟು 2 ಸಾವಿರ ಕಿ.ಮೀ ಉದ್ದದ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸಲಾಗಿತ್ತು ಎಂದು ಹೇಳಿದ ಮಹದೇವಪ್ಪ, ಲೋಕೋಪಯೋಗಿ ಸಚಿವರಾಗಿ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ ನೀಡಿದ್ದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇತ್ತು ಎಂದು ತಿಳಿಸಿದ್ದಾರೆ. ಬಿಜೆಪಿ ನೇತೃತ್ವದ (ಎನ್‌ಡಿಎ) ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಿತು. ಆ ನಂತರ ಈ ಕಾರ್ಯವನ್ನು ನಿರ್ವಹಿಸಿತು ಎಂದು ಮಹದೇವಪ್ಪ ಹೇಳಿದರು.

ಶೀಘ್ರದಲ್ಲೇ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ಪಕ್ಷಗಳು ಕ್ರೆಡಿಟ್ ತೆಗೆದುಕೊಳ್ಳಲು ಹೋರಾಟ ನಡೆಸಿವೆ. ಮಾಜಿ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಮೈಸೂರು- ಕೊಡಗು ಸಂಸದ ಪ್ರತಾಪ ಸಿಂಹ ಕಿಡಿಕಾರಿದ್ದಾರೆ.












Click it and Unblock the Notifications