ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ಗೆ ತಂದವರು ಯಾರು? ಅವರೇ ಹೇಳಿದ್ದಾರೆ ನೋಡಿ
ಬೆಂಗಳೂರು, ಆಗಸ್ಟ್ 20: ಗೆಳೆಯ ವಿಶ್ವನಾಥ್ಗೆ ಮೋಸ ಮಾಡಿದರು ಎಂಬುದು ಸಿದ್ದರಾಮಯ್ಯ ಅವರ ಮೇಲಿರುವ ಆರೋಪಗಳಲ್ಲಿ ಒಂದು ಆದರೆ ಇದನ್ನು ಸಿದ್ದರಾಮಯ್ಯ ಅಲ್ಲಗಳೆದು ಕಾರಣವನ್ನೂ ನೀಡಿದ್ದಾರೆ.
ಕಾಂಗ್ರೆಸ್ನಲ್ಲಿದ್ದ ವಿಶ್ವನಾಥ್ ಅವರು, ಜೆಡಿಎಸ್ನಲ್ಲಿದ್ದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಗೆ ತಂದರು ಆದರೆ ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರನ್ನು ಮೂಲೆಗುಂಪು ಮಾಡಿ ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿ ಎತ್ತರಕ್ಕೆ ಏರಿದರು ವಿಶ್ವನಾಥ್ ಕಾಂಗ್ರೆಸ್ ಪಕ್ಷದಲ್ಲಿ ಅಪ್ರಸ್ತುತರಾಗಿಬಿಟ್ಟರು. ಆದರೆ ಸಿದ್ದರಾಮಯ್ಯ ಹೇಳುವ ಪ್ರಕಾರ ಇದು ಸುಳ್ಳಂತೆ.
ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ಗೆ ತಂದವರು ವಿಶ್ವನಾಥ್ ಅಲ್ಲ ಅಹ್ಮದ್ ಪಟೇಲ್ ಎಂದು ಸ್ವತಃ ಅವರೇ ಹೇಳಿದ್ದಾರೆ.

ಕುರುಬ ಸಂಘದ ಕಾರ್ಯಕ್ರಮದಲ್ಲಿ ಮನಬಿಚ್ಚಿ ಮಾತನಾಡಿದ ಅವರು, ನನ್ನನ್ನು ಬೇರೆ ಯಾರೂ ಕಾಂಗ್ರೆಸ್ಗೆ ತಂದಿಲ್ಲ ನಾನು ಕಾಂಗ್ರೆಸ್ಗೆ ಬರಲು ಕಾರಣ ಅಹ್ಮದ್ ಪಟೇಲ್ ಎಂದು, ವಿಶ್ವನಾಥ್ ಅವರಿಗೆ ಛಾಟಿ ಬೀಸಿದ್ದಾರೆ.
ಈ ಹಿಂದೆ ನಾನೂ ಕುರುಬನೇ ನನಗೆ ಸಿದ್ದರಾಮಯ್ಯ ಅನ್ಯಾಯ ಮಾಡಿದ್ದಾರೆ ಎಂದು ಈಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ವಿಶ್ವನಾಥ್ ಅವರು ಹೇಳಿದ್ದರು. ಅದಕ್ಕೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ತಮ್ಮ ಚುನಾವಣಾ ಸೋಲಿನ ಬಗ್ಗೆಯೂ ಮಾತನಾಡಿರುವ ಸಿದ್ದರಾಮಯ್ಯ, 'ನಾನು ಜಾತಿಗಳನ್ನು ಒಡೆಯುತ್ತೇನೆ ಎಂದು ಹೇಳಿ ನನ್ನನ್ನು ಚುನಾವಣೆಯಲ್ಲಿ ಸೋಲಿಸಿದರು, ಕೋಮುವಾದಿಗಳ ವಿರುದ್ಧ ನಿಲ್ಲಬೇಕಿದ್ದ ಜಾತ್ಯಾತೀತರು, ಹಿಂದುಳಿದ ಸಮಾಜದವರು ಸಹ ಸೂಕ್ತ ಪ್ರಮಾಣದಲ್ಲಿ ಪ್ರತಿಕ್ರಿಯಿಸದ ಕಾರಣ ನನಗೆ ಸೋಲಾಯಿತು' ಎಂದು ಮನದ ಮಾತನ್ನಾಡಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications