• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನುದಾನ ಬಳಿಕ ಪಿಂಚಣಿಗಾಗಿ ಉಪವಾಸ ಕುಳಿತ ಶಿಕ್ಷಕರು

|

ಬೆಂಗಳೂರು, ಅಕ್ಟೋಬರ್ 15: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎನ್ನುವ ಕೂಗು ಒಂದೆಡೆಯಾದರೆ, ಅದೇ ಶಾಲೆಗಳಲ್ಲಿ ದುಡಿಯುತ್ತಿರುವ ಸುಮಾರು 40 ಸಾವಿರಕ್ಕೂ ಹೆಚ್ಚು ಶಿಕ್ಷಕರು ಹಾಗೂ ನೌಕರರಿಗೆ ನಿವೃತ್ತಿ ಜೀವನದ ನಂತರ ದೊರೆಯಬೇಕಾದ ಪಿಂಚಣಿ ಹಾಗೂ ಮತ್ತಿತರ ಪ್ರಮುಖ ಸೌಲಭ್ಯಗಳನ್ನು ನೀಡದೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ.

ಇತ್ತೀಚೆಗೆ ವೇತನಾನುದಾ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಅನುದಾನ ರಹಿತ ಅವಧಿಯಲ್ಲಿ ಅನೇಕ ವರ್ಷಗಳ ಕಾಲ ವೇತನವಿಲ್ಲದೆ ದುಡಿದ ಸೇವಾವಧಿಯನ್ನು ಪರಿಗಣಿಸಿ ವೇತನ ನಿಗದಿಗೊಳಿಸುವ ಸಲುವಾಗಿ ವಿಧಾನ ಪರಿಷತ್ತಿನ ಈಗಿನ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದ ಸಮಿತಿ ನೀಡಿರುವ ಕಾಲ್ಪನಿಕ ವೇತನ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು.

ಸರ್ಕಾರಿ ಶಾಲೆ ಮಕ್ಕಳು ಚೂಡಿದಾರಕ್ಕೆ ಕಾಯುತ್ತಿವೆ!

ಹಾಗೂ ನಿಶ್ಚಿತ ಪಿಂಚಣಿ ಯೋಜನೆ ಜಾರಿಗಾಗಿ ಆಗ್ರಹಿಸಿ ನಗರದ ಫ್ರೀಡಂ ಪಾರ್ಕಿನಲ್ಲಿ ಅನುದಾನಿತ ಪಿಂಚಣಿ ವಂಚಿತ ನೌಕರರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿರಿಸಿದೆ.

ಆದರೆ ಸರ್ಕಾರ ಮಾತ್ರ ಇವರ ಕೂಗನ್ನು ಕೇಳಿಯೂ ಕೇಳದಂತೆ ವರ್ತಿಸುತ್ತಿರುವದಕ್ಕೆ ಹೋರಾಟಗಾರರು ತೀವೃ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಎರಡು ವರ್ಷಗಳ ನಂತರ ಸರ್ಕಾರಿ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ!

ಪ್ರತಿಭಟನೆಯ ನೇತೃತ್ವ ವಹಿಸಿರುವ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ.ಹನುಮಂತಪ್ಪ ಮಾತನಾಡಿ 2006ರ ಏಪ್ರಿಲ್ ನಂತರ ಅನುದಾನಕ್ಕೊಳಪಟ್ಟು ವೇತನ ಪಡೆಯುತ್ತಿರುವ ಅನುದಾನಿತ ವಿದ್ಯಾ ಸಂಸ್ಥೆಗಳ ಸುಮಾರು ನಾಲವತ್ತು ಸಾವಿರಕ್ಕೂ ಹೆಚ್ಚು ನೌಕರರಿರಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಜಾರಿಯಾಗಬೇಕು.

ಶಿಕ್ಷಕರಿಗೆ ಪರೀಕ್ಷೆ: ರೋಹಿಣಿ ಸಿಂಧೂರಿ ಕ್ರಮಕ್ಕೆ ಸರ್ಕಾರದ ಅಡ್ಡಗಾಲು

ವೇತನಾನುದಾನಕ್ಕೊಳಪಟ್ಟು ಕೇವಲ ಬೆರಳೆಣಿಕೆಯಷ್ಟು ವರ್ಷ ಮಾತ್ರ ವೇತನ ಪಡೆದು ಈಗ ಕೊನೆ ತಿಂಗಳ ಸಂಬಳವನ್ನಷ್ಟೇ ಪಡೆದ ಸಾವಿರಾರು ನೌಕರರು ಬರಿಗೈಲಿ ನಿವೃತ್ತರಾಗಿದ್ದು ಅವರ ಸಂಧ್ಯಾಕಾಲದ ಆಸರಗೆ ಬಿಡಿಗಾಸು ಇಲ್ಲದೇ ಪರದಾಡುತ್ತಿದ್ದಾರೆ.ಅವರ ನಿವೃತ್ತಿ ಜೀವನ ನೆಮ್ಮದಿಯಾಗಿರಬೇಕೆಂದರೆ ಸರ್ಕಾರ ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.

English summary
Hundreds of aided school teachers were staging agitation at freedom park in Bengaluru. since five days seeking fixed pension scheme for them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X