ರೈಲ್ವೆ ದರ ಏರಿಕೆ ಖಂಡಿಸಿದ ಜನವಾದಿ ಮಹಿಳಾ ಸಂಘಟನೆ

ಬೆಂಗಳೂರು, ಜೂ. 23 : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಮತ್ತು ಸರಕು ಸಾಗಾಣಿಕೆ ದರಗಳನ್ನು ಏರಿಕೆ ಮಾಡಿರುವುದನ್ನು ಜನವಾದಿ ಮಹಿಳಾ ಸಂಘಟನೆ ತೀವ್ರವಾಗಿ ಖಂಡಿಸಿದೆ. ದರ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್, ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆಗಳೊಂದಿಗೆ ರಾಜ್ಯ ವ್ಯಾಪಿ ಹೋರಾಟಕ್ಕೆ ಕರೆ ನೀಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರೈಲ್ವೆ ಪ್ರಯಾಣ ದರಗಳನ್ನು ಶೇ 14 ರಷ್ಟು ಮತ್ತು ಸರಕು ಸಾಗಣೆ ದರಗಳನ್ನು ಶೇ 6.5ರಷ್ಟು ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮದಿಂದಾಗಿ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಾಗಿದೆ ಎಂದು ದೂರಿದೆ. [ರೈಲ್ವೆ ಪ್ರಯಾಣ ದರ ಏರಿಕೆಗೆ ಅಸ್ತು]

Indian Railway

ಜೀವನಗತ್ಯ ಎಲ್ಲ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಇಂದಿನ ಸಂದರ್ಭದಲ್ಲಿ ಈ ಪ್ರಯಾಣದರ ಏರಿಕೆ ಮುಖ್ಯವಾಗಿ ಈ ದೇಶದ ದುಡಿಯುವ ವಿಭಾಗದ ಮೇಲೆ, ಅಸಂಘಟಿತ ವಿಭಾಗದ ಮಹಿಳೆಯರ ಮೇಲೆ, ಬದುಕನ್ನರಸಿ ಪರ ಊರಿಗೆ ಪ್ರಯಾಣ ಮಾಡುವವರಿಗೆ ಹೊರೆಯಾಗಿದೆ ಎಂದು ಸಮಿತಿ ಹೇಳಿದೆ.

ಸರಕು ಸಾಗಾಣೆ ದರ ಏರಿಕೆ ಮಾಡಿರುವುದರಿಂದ ರೈಲ್ವೆ ಮೂಲಕ ಸಾಗಾಣಿಕೆ ಮಾಡುತ್ತಿದ್ದ ಎಲ್ಲ ಅಗತ್ಯ ಪದಾರ್ಥಗಳ ಬೆಲೆ ಏರಿಕೆಯಾಗಲಿದೆ. ಆದ್ದರಿಂದ ಅಗತ್ಯ ಪದಾರ್ಥಗಳ ಬೆಲೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಸಂಘಟನೆ ಆತಂಕ ವ್ಯಕ್ತಪಡಿಸಿದೆ. [ರೈಲ್ವೆ ಪ್ರಯಾಣ ದರ ಏರಿಕೆ ಜೇಟ್ಲಿ ಸಮರ್ಥನೆ]

ರೇಲ್ವೆ ಬಜೆಟ್ ಮಂಡನೆಯಾಗುವ ಮುನ್ನವೇ ದರಗಳನ್ನು ಹೆಚ್ಚಿಸಿರುವುದು ಪ್ರಜಾಸತ್ತಾತ್ಮಕ ವಿರೋಧಿ ಕ್ರಮವಾಗಿದ್ದು ಇದನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್, ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆಗಳೊಂದಿಗೆ ರಾಜ್ಯ ವ್ಯಾಪಿ ಹೋರಾಟ ನಡೆಸುವುದಾಗಿ ಸಂಘಟನೆ ಎಚ್ಚರಿಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+