ಮೀಸಲಾತಿ ಶೇ. 70 ರಷ್ಟು ಹೆಚ್ಚಿಸುವ ಬಗ್ಗೆ ಚಿಂತನೆ - ಸಿದ್ದರಾಮಯ್ಯ
ಸಾಮಾಜಿಕ, ಶೈಕ್ಷಣಿಕ ಜಾತಿ ಸಮೀಕ್ಷಾ ವರದಿ ಬಂದ ನಂತರ ಅದರ ಆಧಾರದ ಮೇಲೆ ಈಗಿರುವ ಮೀಸಲಾತಿಯನ್ನು ಶೇ. 50 ರಿಂದ 70 ರಷ್ಟು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು, ಮೇ 19: ಸಾಮಾಜಿಕ, ಶೈಕ್ಷಣಿಕ ಜಾತಿ ಸಮೀಕ್ಷಾ ವರದಿ (ಜಾತಿ ಗಣತಿ) ಬಂದ ನಂತರ ಅದರ ಆಧಾರದ ಮೇಲೆ ಈಗಿರುವ ಮೀಸಲಾತಿಯನ್ನು ಶೇ. 50 ರಿಂದ 70 ರಷ್ಟು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ನಗರದ ಬೆಂಗಳೂರು ಪ್ರೆಸ್‍ಕ್ಲಬ್‍ನಲ್ಲಿ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಜೊತೆ ಮಾಧ್ಯಮದವರ ಸಂವಾದದಲ್ಲಿ ಮಾತನಾಡುತ್ತಿದ್ದ ಅವರು, "ಸರ್ವರನ್ನೂ ಒಳಗೊಂಡ ಬೆಳವಣಿಗೆ ನಮ್ಮ ಸರ್ಕಾರದ ಉದ್ದೇಶ. ನಮ್ಮ ಸರ್ಕಾರದ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅವಲೋಕಿಸಿದರೆ ಹಿಂದಿನ ಸರ್ಕಾರಕ್ಕಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಹಣ ಒದಗಿಸಿದ್ದೇವೆ," ಎಂದು ತಿಳಿಸಿದರು.[ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ - ಸಿದ್ದರಾಮಯ್ಯ]

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 5.00 ಲಕ್ಷ ರೂ. ಪರಿಹಾರ ಹಾಗೂ ಹೆಂಡತಿಗೆ 2,000/- ರೂ. ತಿಂಗಳ ಪಿಂಚಣಿ ಮತ್ತು ಮಕ್ಕಳಿಗೆ ಉಚಿತ ಶಿಕ್ಷಣದಂತ ಸೌಲಭ್ಯ ನೀಡಿದ ದೇಶದ ಏಕೈಕ ಸರ್ಕಾರ ನಮ್ಮದು. ರಾಜ್ಯದಲ್ಲಿ ಭೀಕರ ಬರ ಇದ್ದರೂ ಹಳ್ಳಿಗಳಲ್ಲಿ ಜನರು ಗುಳೆ ಹೋಗುವುದು ಕಡಿಮೆಯಾಗಿದೆ. ಅದಕ್ಕೆ ಅನ್ನಭಾಗ್ಯ ಯೋಜನೆ ಕಾರಣ ಎಂದು ಅವರು ಹೇಳಿದರು.
ಬೆಂಗಳೂರು ನಗರಕ್ಕೆ ಸೇರ್ಪಡೆಯಾದ 110 ಹಳ್ಳಿಗಳಿಗೆ ನೀರು ಹಾಗೂ ಮೂಲ ಸೌಲಭ್ಯ ಒದಗಿಸಲಾಗಿದೆ. ಹಾರೋಹಳ್ಳಿಯಲ್ಲಿ ಮಹಿಳಾ ಉದ್ಯಮಿಗಳಿಗಾಗಿ ಕೈಗಾರಿಕಾ ವಲಯ ಸ್ಥಾಪಿಸಲಾಗಿದೆ. ಈ ನಾಲ್ಕು ವರ್ಷಗಳ ಸರ್ಕಾರದ ಸಾಧನೆಗಳನ್ನು ಹಾಗೂ ಚುನಾವಣಾ ಸಮಯದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ ಹಾಗೂ ನಡೆಯುತ್ತೇವೆ ಎಂದರು.
ಸರ್ಕಾರ ಕನ್ನಡ ಮಾಧ್ಯಮ ಶಾಲೆಗಳ ವಿರೋಧಿಯಲ್ಲ. ಇಂಗ್ಲೀಷ್ ಮಾಧ್ಯಮ ಶಾಲೆಗಳಿಗೆ ಅನುಮತಿ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅನಿವಾರ್ಯವಾಗಿ ನಿರಾಕರಿಸುವಂತಿಲ್ಲ. ಮಕ್ಕಳಿಗೆ ಯಾವ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕು ಎಂಬುದು ಹೆತ್ತವರ ಆಯ್ಕೆಗೆ ಬಿಟ್ಟಿದ್ದು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿಗಳು ಉತ್ತರಿಸಿದರು.
ಸಂವಾದದಲ್ಲಿ ಮಾಧ್ಯಮದವರು ಕೇಳಿದ ಹಲವು ಪ್ರಶ್ನೆಗಳಿಗೆ ಮುಖ್ಯಮಂತ್ರಿಯವರು ಉತ್ತರಿಸಿದರು. ಪ್ರೆಸ್‍ಕ್ಲಬ್‍ನ ಅಧ್ಯಕ್ಷ ಸದಾಶಿವ ಶಣೈ ಹಾಗೂ ಇತರ ಪದಾಧಿಕಾರಿಗಳು ಸೇರಿದಂತೆ ಹಲವು ಪತ್ರಕರ್ತರ ಒಕ್ಕೂಟದ ಸದಸ್ಯರು ಸಂವಾದದಲ್ಲಿ ಭಾಗವಹಿಸಿದ್ದರು.
-
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications