ಬೆಂಗಳೂರಿನ ಜಿಬಿಎ ಆಡಳಿತ ನಿರ್ಲಕ್ಷ್ಯಕ್ಕೆ ತೀವ್ರ್ ಛೀಮಾರಿ ಹಾಕಿದ ನಟಿ ಐಂದ್ರಿತಾ ರೇ
ಬೆಂಗಳೂರು: ಬೆಂಗಳೂರಿನಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದೀಗ ಬೆಂಗಳೂರಿನ ವಿವಿಧ ಭಾಗದಲ್ಲಿ ಕಸ ಸುಡುವುದು ಹೆಚ್ಚಾಗಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಗ್ರೇಟರ್ ಬೆಂಗಳೂರು ಆಡಳಿತದ ಕಾರ್ಯವೈಖರಿಗೆ ಇದೀಗ ನಟಿ ಐಂದ್ರಿತಾ ರೇ (Aindrita Ray) ಅವರು ಸಹ ಛೀಮಾರಿ ಹಾಕಿದ್ದಾರೆ. ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಾಗುತ್ತಿದೆ. ಜನ ವಸತಿ ಪ್ರದೇಶದಲ್ಲಿ ಕಸ ಸುಡಲಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಉಸಿರಾಡುವುದಕ್ಕೂ ಸಮಸ್ಯೆ ಆಗಿದೆ ಎಂದು ಅವರು ಹೇಳಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರು ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕಸ ಸಂಗ್ರಹ ಹಾಗೂ ವಿಲೇವಾರಿಗೆ ಸಂಬಂಧಿಸಿದಂತೆ ಹೊಸ ಟೆಂಡರ್ ಕರೆಯುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರಾದರೂ, ಈ ನಿಟ್ಟಿನಲ್ಲಿ ಯಾವುದೇ ಪ್ರಗತಿ ಆಗಿಲ್ಲ. ಇದೀಗ ಎಲ್ಲೆಂದರಲ್ಲಿ ಕಸ ಸುಡುವುದು ಹೆಚ್ಚಾಗಿದೆ.

ಬೆಂಗಳೂರಲ್ಲಿ ಕಸ ಸುಡುವ ಸಮಸ್ಯೆ ಹೆಚ್ಚಳ
ಇನ್ನು ಬೆಂಗಳೂರಿನಲ್ಲಿ ಕಸ ಸುಡುವ ಸಮಸ್ಯೆ ಹೆಚ್ಚಾಗಿದೆ. ನಗರದ ರಾಜರಾಜೇಶ್ವರಿ ನಗರ ಪ್ರದೇಶದಲ್ಲಿ ಮೂರು ದಿನಗಳಿಂದ ಕಸ ಸುಡುತ್ತಿದ್ದಾರೆ. ಏನಿದು ಸಮಸ್ಯೆ ಎಂದು ನೋಡಿದಾಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಿಬ್ಬಂದಿಯೇ ಕಸ ಸುಡುತ್ತಿದ್ದಾರೆ. ನಮ್ಮ ಅಪಾರ್ಟ್ಮೆಂಟ್ನಲ್ಲಿ ಉಸಿರಾಡುವುದಕ್ಕೂ ಆಗುತ್ತಿಲ್ಲ ಎಂದು ನಟಿ ಐಂದ್ರಿತಾ ರೇ ಬೇಸರ ವ್ಯಕ್ತಪಡಿಸಿದ್ದಾರೆ. ಕಸದಿಂದಾಗಿ ನಮಗೆ 3 ದಿನದಿಂದ ಸಮಸ್ಯೆ ಎದುರಾಗಿದೆ. ಈ ವಿಚಾರವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಾಯವಾಣಿಗೆ ಕರೆ ಮಾಡಿದರೂ ಕನೆಕ್ಟ್ ಆಗುತ್ತಿಲ್ಲ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗತ್ತಿದೆ.
ಕಸ ಸುರಿಯುವ ಅಭಿಯಾನ ಏನಾಯ್ತು ?
ಇನ್ನು ನಟಿ ಐಂದ್ರಿತಾ ರೇ ಅವರ ವಿಡಿಯೋದಲ್ಲಿ ಹಲವು ಬೆಂಗಳೂರಿಗರು ಈಚೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪಾಲಿಕೆಗಳು ಎಲ್ಲೆಂದರಲ್ಲಿ ಕಸ ಎಸೆಯುವವರ ಮನೆಯ ಮುಂದೆ ಕಸ ಎಸೆಯುವ ಅಭಿಯಾನವನ್ನು ಪ್ರಾರಂಭಿಸಿತ್ತು. ಆದರೆ ಇದೀಗ ಎಲ್ಲೆಂದರಲ್ಲಿ ಕಸಕ್ಕೆ ಬೆಂಕಿ ಹಾಕಲಾಗುತ್ತಿದ್ದರೂ ಯಾಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಅಲ್ಲದೇ ದೆಹಲಿ ಸೇರಿದಂತೆ ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯುಮಾಲಿನ್ಯ ಪ್ರಮಾಣ ಹೆಚ್ಚಳದಿಂದಾಗಿ ಕೆಲವು ಪ್ರದೇಶಗಳಲ್ಲಿ ಉಸಿರಾಡುವುದಕ್ಕೂ ಸಮಸ್ಯೆ ಆಗುತ್ತಿದೆ. ಈ ರೀತಿ ಇರುವಾಗ ಕಸ ಸುಡುವುದು ತಪ್ಪು. ಅದರಲ್ಲೂ ನಿರಂತರವಾಗಿ ಬೃಹತ್ ಪ್ರಮಾಣದ ಕಸವನ್ನು ಬೆಂಗಳೂರಿನಲ್ಲಿ ಸುಡುತ್ತಿದ್ದರೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಗತ್ಯ ಮುಂಜಾಗ್ರತಾ ಕ್ರಮ ವಹಿಸದೆ ಇರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
AQI ಪ್ರಭಾವ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಸುಡುತ್ತಿರುವುದರಿಂದ ವಾಯುಗುಣಮಟ್ಟದ ಮೇಲೆ ಪ್ರಭಾವ ಬೀರಲಿದೆ. ಈಗಾಗಲೇ ಈ ವರ್ಷ ಬೆಂಗಳೂರಿನಲ್ಲಿ ವಾಯುಗುಣಮಟ್ಟ ಕುಸಿತ ಕಂಡಿದೆ. ಈ ರೀತಿ ಇರುವಾಗ ಕಸ ಸುಡುವುದು ಎಷ್ಟು ಸರಿ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೆಲವರು ಐಂದ್ರಿತಾ ರೇ ಅವರನ್ನು ವೈಯಕ್ತಿಕವಾಗಿ ಟೀಕೆ ಮಾಡುವುದಕ್ಕೂ ಮುಂದಾಗಿದ್ದಾರೆ. ನೀವು ದಂಪತಿಗಳು ಬೆಟ್ಟಿಂಗ್ ಆ್ಯಪ್ ಪ್ರಮೋಟ್ ಮಾಡುವಾಗ ಸಮಾಜದ ಬಗ್ಗೆ ಕಾಳಜಿ ವಹಿಸಿರಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಈ ರೀತಿಯ ಕಮೆಂಟ್ಗಳಿಗೆ ಜನರೇ ಪ್ರತಿಕ್ರಿಯೆ ನೀಡಿದ್ದು, ಅದಕ್ಕೂ ಇದಕ್ಕೂ ಏನಾದರೂ ಸಂಬಂಧವಿದೆಯೇ ಯಾರೂ ಸರ್ಕಾರದ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಪ್ರಶ್ನೆ ಮಾಡಬಾರದು ಎಂದರೆ ಹೇಗೆ ಎಂದು ಕೇಳಿದ್ದಾರೆ.
-
Viral Video: ಕಡಿಮೆ ಹಣದಲ್ಲಿ ಬದುಕೋದು ಹೇಗೆ ? ಬೆಂಗಳೂರು ಇಂಟರ್ನ್ ಹೇಳಿದ ಟ್ರಿಕ್ಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications