Air India Recruitment 2023: ಖಾಲಿ ಇರುವ ಹಿರಿಯ ಟ್ರೈನಿ ಪೈಲಟ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 27: ಏರ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪೈಲಟ್ ಆಗುವ ಕನಸಿರುವವರು ಕೂಡಲೇ ಅರ್ಜಿ ಸಲ್ಲಿಬೇಕು.
ಏರ್ ಇಂಡಿಯಾ ಲಿಮಿಟೆಡ್‌ನಲ್ಲಿ ಹಲವು ಹಿರಿಯ ಟ್ರೈನಿ ಪೈಲಟ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಕೆಗೆ 2023ರ ಜನವರಿ 1ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಮುಂಬೈ ಹಾಗೂ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ ಕಂಪನಿ ತಿಳಿಸಿದೆ.
ಏರ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಸಂಬಳ, ಅರ್ಜಿ ಶುಲ್ಕ, ವಯೋಮಿತಿ ಕುರಿತು ಇಲ್ಲಿ ತಿಳಿಕೊಳ್ಳಿ.

ಅಭ್ಯರ್ಥಿಗಳು ಗಮನಿಸಬೇಕಾದ ದಿನಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಡಿಸೆಂಬರ್ 12
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 01
ಲಿಖಿತ ಪರೀಕ್ಷೆ ನಡೆಯುವ ದಿನಾಂಕ: ಜನವರಿ 08
ಸಂದರ್ಶನ ಆರಂಭದ ದಿನಾಂಕ: ಜನವರಿ 2ನೇ ವಾರ
ಅರ್ಜಿದಾರರ ಶೈಕ್ಷಣಿಕ ಅರ್ಹತೆ
ಏರ್ ಇಂಡಿಯಾ ಲಿಮಿಟೆಡ್ ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥಾವ ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು.
ವಯಸ್ಸಿನ ಮಿತಿ
ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಸಂಸ್ಥೆಯ ನಿಯಮಾನುಸಾರ ಆಯ್ಕೆ ಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ನಿಗದಿಯಾಗಲಿದೆ. ಇದಕ್ಕೂ ಮೊದಲು ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಇಲ್ಲವೇ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಏರ್ ಇಂಡಿಯಾ ಲಿಮಿಟೆಡ್ ತಿಳಿಸಿದೆ.












Click it and Unblock the Notifications