ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ದಾಖಲೆ ಮಟ್ಟಕ್ಕೆ ಕುಸಿತಕಂಡ ವಾಯು ಮಾಲಿನ್ಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 1: ಲಾಕ್‌ಡೌನ್ ನಿಂದಾಗಿ ಬೆಂಗಳೂರಲ್ಲಿ ವಾಯು ಮಾಲಿನ್ಯ ದಾಖಲೆ ಮಟ್ಟಕ್ಕೆ ಕುಸಿದಿದೆ.

ವಾಹನಗಳ ಸಂಚಾರ ತೀರಾ ವಿರಳವಾಗಿರುವುದರಿಂದ ವಾಯು ಮಾಲಿನ್ಯ ಪ್ರಮಾಣವೂ ತಗ್ಗಿದೆ.ಭಾರತ ಬಂದ್ ದಿನ ದೇಶಾದ್ಯಂತ ಎಲ್ಲಾ ರೀತಿಯ ವಾಹನಗಳನ್ನು ಸ್ಥಗಿತಗೊಳಿಸಲಾಗಿತ್ತು.

ಆದರೆ, ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಮಾಡಲಾಗಿದ್ದರೂ ಅಗತ್ಯ ವಸ್ತುಗಳ ಪೂರೈಕೆಗಾಗಿ ಕೆಲವು ವಾಹನಗಳು, ವೈದ್ಯಕೀಯ, ಪೊಲೀಸ್ , ಸರ್ಕಾರದ ಕೆಲವು ಅಧಿಕಾರಿಗಳು, ಮಾಧ್ಯಮ ಸೇರಿದಂತೆ ಅಗತ್ಯ ಸೇವಾ ಕ್ಷೇತ್ರಗಳ ಪ್ರತಿನಿಧಿಗಳು ಸಂಚರಿಸುತ್ತಿದ್ದಾರೆ.

Air Pollution Low In Record From 15 Days In Bengaluru

ವಾಯುಗುಣಮಟ್ಟ ಸೂಚ್ಯಂಕದ ಪ್ರಮಾಣ 0-50ರ ವರೆಗೆ ಗುಣಮಟ್ಟದ ಗಾಳಿ, 51-100ರವರೆಗೆ ಸಮಾಧಾನಕರ ಎಂದು ಪರಿಗಣಿಸಲಾಗುತ್ತಿದೆ. 50ರ ಆಸುಪಾಸಿನಲ್ಲಿ ಮಾಲಿನ್ಯ ಪ್ರಮಾಣ ಇರುವುದರಿಂದ ಉತ್ತಮ ,ಆರೋಗ್ಯಕರ ಗಾಳಿ ಬೀಸುತ್ತಿದೆ.

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ಕೆಲವರು ನುಸುಳಿ ವಾಹನ ಚಲಾಯಿಸುತ್ತಿದ್ದಾರೆ. ಹೀಗಾಗಿ , ಭಾರತ್ ಬಂದ್ ಸಿನಕ್ಕಿಂತ ಮಾಲಿನ್ಯ ಪ್ರಮಾಣ ಹೆಚ್ಚಳವಾಗಿದೆ. 15 ದಿನಗಳ ಹಿಂದಿನ ದಿನಗಳಿಗೆ ಹೋಲಿಸಿದರೆ ಸಾಕಷ್ಟು ಪ್ರಮಾಣದಲ್ಲಿ ಮಾಲಿನ್ಯ ಕುಸಿದಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ.
ಬೆಂಗಳೂರಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 45ಕ್ಕೇರಿದೆ.

English summary
Due To Janata Curfew Air Pollution Low In Record From 15 Days In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X