Bengaluru Second Airport: 2ನೇ ಏರ್‌ಪೋರ್ಟ್ ಸ್ಥಳ ಅಧ್ಯಯನ ವರದಿ ಸರ್ಕಾರದ ಕೈಗೆ; ಕನಕಪುರಕ್ಕೆ ಗುಡ್‌ನ್ಯೂಸ್?
ಬೆಂಗಳೂರು, ಸೆಪ್ಟೆಂಬರ್ 03: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ನಿರ್ಮಿಸಲು ಕರ್ನಾಟಕ ಸರ್ಕಾರವು ಮುಂದಾಗಿದೆ. ಈ ಬಗ್ಗೆ ಮಹತ್ವದ ಚರ್ಚೆ ನಡೆಸಲು ಕೇಂದ್ರ ಸರ್ಕಾರದ ವಿಮಾನಯಾನ ಸಚಿವರನ್ನು ಭೇಟಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಎರಡನೇ ವಿಮಾನ ನಿಲ್ದಾಣಕ್ಕೆ ಗುರುತಿಸಿರುವ ಬೆಂಗಳೂರು ಸುತ್ತಲ 3 ಸ್ಥಳಗಳು ಸೂಕ್ತವಲ್ಲ ಎಂದು ವಿಮಾನಯಾನ ತಜ್ಞ ದೇವೇಶ್ ಅಗರ್ವಾಲ್ ಶಾಕ್ ಕೊಟ್ಟಿದ್ದರು, ಇದೀಗ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಮಹತ್ತರ ಚರ್ಚೆಗಳು ನಡೆಯುತ್ತಿದೆ.
ಬೆಂಗಳೂರು ನಗರವು ಐಟಿ, ಕೈಗಾರಿಕೆ, ಉದ್ಯಮ ಕೇಂದ್ರವಾಗಿ ದಿನೇದಿನೇ ವಿಸ್ತಾರವಾಗುತ್ತಿದೆ. ಇದರಿಂದಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಯೋಚನೆಗೆ ಚುರುಕು ನೀಡಿದೆ. ಇನ್ನೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ನಿರ್ಮಿಸುತ್ತಿರುವ ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಇನ್ನು 2 ವಾರದಲ್ಲಿ ಸ್ಥಳ ಅಂತಿಮವಾಗಲಿದೆ. ಈ ಹಿಂದೆ ಗುರುತಿಸಿದ್ದ 3 ಸ್ಥಳಗಳ ಕುರಿತು ಯಾವುದು ಬೆಸ್ಟ್ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ಅಂತಿಮ ವರದಿ ನೀಡಲಿದೆ.

ಎರಡನೇ ವಿಮಾನ ನಿಲ್ದಾಣಕ್ಕೆ ಆಯ್ಕೆ ಮಾಡಲಾದ ಮೂರು ಸ್ಥಳಗಳ ಕುರಿತು ಮುಂದಿನ ಎರಡು ವಾರಗಳಲ್ಲಿ ರಾಜ್ಯ ಸರ್ಕಾರವು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ (ಎಎಐ) ವರದಿಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ವಿಮಾನ ನಿಲ್ದಾಣ ಪ್ರಾಧಿಕಾರ ಮೂರು ಸ್ಥಳಗಳ ಬಗ್ಗೆ ವರದಿಯನ್ನು ಮುಂದಿನ ಎರಡು ವಾರಗಳಲ್ಲಿ ನೀಡುವ ನಿರೀಕ್ಷೆ ಇದೆ ಎಂದು ಮೂಲ ಸೌಕರ್ಯ ಹಾಗೂ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕಾಗಿ ಕನಕಪುರದ ಬಳಿ 9 ಸಾವಿರ ಎಕರೆ ಪ್ರದೇಶ ಉತ್ತಮ ಎಂಬ ಮಾತುಗಳು ಕೇಳಿ ಬಂದಿದೆ. ವಿಮಾನ ನಿಲ್ದಾಣ ಪ್ರಾಧಿಕಾರವು ಎರಡು ವಾರಗಳಲ್ಲಿ ಅಂತಿಮ ವರದಿ ನೀಡಲಿದ್ದು, ಪರಿಸರ ಇಲಾಖೆಯ ಅನುಮತಿಗಾಗಿ ಕಾಯಲಾಗುತ್ತಿದೆ. ಇತ್ತ ಕರ್ನಾಟಕ ಕೈಗಾರಿಕೆ ಸಚಿವರಾದ ಎಂ ಬಿ ಪಾಟೀಲ್ ಅವರು ವರದಿ ಪ್ರಕ್ರಿಯೆಯನ್ನು ವೇಗಗೊಳಿಸಲು ಮನವಿ ಮಾಡಿದ್ದಾರೆ. ವರದಿ ಬಂದ ನಂತರ ಸ್ಥಳವನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ಎರಡನೇ ವಿಮಾನ ನಿಲ್ದಾಣಕ್ಕೆ ಗುರುತಿಸಿದ್ದ ನೆಲಮಂಗಲ ಹಾಗೂ ಕನಕಪುರ ಸಮೀಪದ 3 ಸ್ಥಳಗಳ ಪೈಕಿ ಕನಕಪುರದ ಬಳಿಯ 9 ಸಾವಿರ ಎಕರೆ ಪ್ರದೇಶ ಉತ್ತಮ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕನಕಪುರದ ಬಳಿಯೇ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕಳೆದ ಏಪ್ರಿಲ್ ನಲ್ಲಿ ಕರ್ನಾಟಕಕ್ಕೆ ಆಗಮಿಸಿದ್ದ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ರಾಜ್ಯ ಸರ್ಕಾರ ಗುರುತಿಸಿದ್ದ ಮೂರು ಸ್ಥಳಗಳನ್ನ ಪರಿಶೀಲನೆ ನಡೆಸಿತ್ತು, ಈ ವೇಳೆ ಸಾಧಕ ಭಾದಕಗಳನ್ನು ಅಧ್ಯಯನ ನಡೆಸಿ ವರದಿಯನ್ನು ಸಿದ್ಧಪಡಿಸಿ, ಆ ವರದಿಯನ್ನು ಜೂನ್ ಅಂತ್ಯದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಸಲ್ಲಿಸಿದ್ದಾರೆ. ಪರಿಸರ ಇಲಾಖೆಯ ಅನುಮತಿಗಾಗಿ ಕಾಯಲಾಗುತ್ತಿದ್ದು, ಅನುಮತಿ ಸಿಕ್ಕಿದ ನಂತರ ವರದಿಯನ್ನು ಸರ್ಕಾರಕ್ಕೆ ನೀಡಲಾಗುತ್ತದೆ.












Click it and Unblock the Notifications