Airshow 2025: ಬೆಂಗಳೂರು ಏರ್ ಶೋ 2025ರಿಂದ ಕೋಟಿ .. ಕೋಟಿ ಲಾಸ್ ?
ಬೆಂಗಳೂರಿನಲ್ಲಿ ಪ್ರತಿ ವರ್ಷ ನಡೆಯುವ ಏರ್ ಶೋನಿಂದಾಗಿ ಬೆಂಗಳೂರು ಹಾಗೂ ವಾಯುಸೇನೆಗೆ ಕೋಟ್ಯಾಂತರ ರೂಪಾಯಿ ಆದಾಯ ಬರುತ್ತದೆ. ಯಲಹಂಕದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಸಾವಿರಾರು ಜನ ದೇಶ - ವಿದೇಶಗಳಿಂದ ಭಾಗವಹಿಸುತ್ತಾರೆ. ಅಲ್ಲದೆ ವಿಮಾನಯಾನ ಕ್ಷೇತ್ರದಲ್ಲಿ ಕೋಟ್ಯಾಂತರ ರೂಪಾಯಿ ಹೂಡಿಕೆ ಆಗುತ್ತದೆ. ಹೊಸ ತಂತ್ರಜ್ಞಾನದ ಪರಿಚಯ ಹಾಗೂ ತಂತ್ರಜ್ಞಾನದ ವಿನಿಮಯ. ಬಂಡವಾಳ ಹೂಡಿಕೆ ಹಾಗೂ ಹೊಸ ಯೋಜನೆ ಸೇರಿದಂತೆ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತವೆ. ಆದರೆ ಈ ಬಾರಿಯ ಏರ್‌ಶೋನಲ್ಲಿ ಲೆಕ್ಕಾಚಾರಗಳು ತಲೆಕೆಳಗಾಗಿವೆ.
ಏರ್ ಶೋನಿಂದ ಬೆಂಗಳೂರಿನ ಉದ್ಯಮಗಳಿಗೆ ಪೆಟ್ಟು ಬೀಳುತ್ತಿದ್ದು, ಕೋಟ್ಯಾಂತರ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿದೆ. ಇಷ್ಟಕ್ಕೂ ಬೆಂಗಳೂರಿನಲ್ಲಿ ಏರ್‌ಶೋನಿಂದ ಯಾಕೆ ನಷ್ಟವಾಗುತ್ತಿದೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ನಡೆಯಲಿರುವ ವಿಶ್ವ ವಿಖ್ಯಾತ ಏರ್ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನ ಯಲಹಂಕದಲ್ಲಿ ಮಾಂಸ ಮಾರಾಟ ಮಾಡುವುದಕ್ಕೆ ನಿಷೇಧ ಹೇರಿರುವುದಕ್ಕೆ ಬೆಂಗಳೂರು ಹೋಟೆಲ್‌ಗಳ ಮಾಲೀಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಮಾಂಸ ಮಾರಾಟ ನಿಷೇಧ ಹಾಗೂ ಮಾಂಸ ಮಾರಾಟ ಮಾಡುವ ಹೋಟೆಲ್‌ಗಳ ಬಂದ್ ಹಿನ್ನೆಲೆಯಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 10ರಿಂದ ಫೆಬ್ರವರಿ 14ರವರೆಗೆ ನಡೆಯಲಿರುವ ಏರ್ ಶೋಗಾಗಿ ಈ ಭಾಗದಲ್ಲಿ ಮಾಂಸ ಮಾರಾಟ ಮಾಡುವುದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಲ್ಲಿಸಿದೆ. ಆದರೆ ಏರ್ ಶೋಗೆ 26 ದಿನಗಳು ಬಾಕಿ ಉಳಿದಿರುವಾಗಲೇ ಈ ಆದೇಶ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.

5000 ಸಾವಿರಕ್ಕೂ ಹೆಚ್ಚು ಹೋಟಲ್‌ಗಳಿಗೆ ಪೆಟ್ಟು: ಇನ್ನು ಬೆಂಗಳೂರಿನ ಯಲಹಂಕ ವ್ಯಾಪ್ತಿಯಲ್ಲಿ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ಅಂದಾಜು 5000 ಸಾವಿರಕ್ಕೂ ಹೆಚ್ಚು ಹೋಟೆಲ್‌ಗಳು ಇವೆ. ಆದರೆ ಬಿಬಿಎಂಪಿಯ ಈ ಆದೇಶದಿಂದ ಈ ಭಾಗದ ಹೋಟೆಲ್‌ಗಳಿಗೆ ಮುಂದಿನ 25 ದಿನಗಳ ವರೆಗೆ ಭಾರೀ ನಷ್ಟವುಂಟಾಗಲಿದೆ ಎಂದು ಹೇಳಲಾಗಿದೆ.
ಮಾಂಸ ಮಾರಾಟ ನಿಷೇಧವನ್ನು 26 ದಿನಗಳು ಮುಂಚೆಯೇ ಮಾಡುತ್ತಿರುವುದರಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರತಿ ಬಾರಿಯೂ ಬೆಂಗಳೂರಿಗೆ ವರದಾನವಾಗುತ್ತಿದ್ದ ಏರ್ ಶೋ ಈ ಬಾರಿ ಶಾಪವಾಗುತ್ತಿದೆ ಎಂದು ಹೋಟಲ್ ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.
ಬಿಬಿಎಂಪಿ ಆದೇಶದಲ್ಲಿ ಏನಿದೆ ?
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ 2025 ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜನವರಿ 23 ರಿಂದ ಫೆಬ್ರವರಿ 17ರವರೆಗೆ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯಲಹಂಕ ವಲಯ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್ ಅವರು ಆದೇಶ ಮಾಡಿದ್ದಾರೆ.
ಯಲಹಂಕ ಏರ್ ಪೋರ್ಸ್ ಸ್ಟೇಷನಲ್ಲಿ ಫೆಬ್ರವರಿ 10ರಿಂದ ಫೆಬ್ರವರಿ 14ರವರೆಗೆ ಅಂತರರಾಷ್ಟ್ರೀಯ ಏರ್ ಶೋ ನಡೆಯಲಿದೆ. ಹೀಗಾಗಿ, ಯಲಹಂಕ ವಲಯದ ಏರ್‌ಪೋರ್ಸ್ ಸ್ಟೇಷನಿಂದ 13 ಕಿ.ಮೀ ವ್ಯಾಪ್ತಿಗೆ ಒಳಪಡುವ ಎಲ್ಲಾ ಮಾಂಸ ಮಾರಾಟದ ಉದ್ಯಮಗಳನ್ನು ಮುಚ್ಚುವುದಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೆ ಈ ಭಾಗದ ಹೋಟೆಲ್ ಹಾಗೂ ಡಾಬಾಗಳಲ್ಲೂ ಮಾಂಸಾಹಾರ ತಯಾರಿಸುವುದು ಮತ್ತು ಮಾರಾಟ ಮಾಡುವುದನ್ನು ಸಹ ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯು ಆದೇಶ ಹೊರಡಿಸಿತ್ತು.
ಹೀಗಾಗಿ ಜನವರಿ 23ರಿಂದ ಫೆಬ್ರವರಿ 17ರವರೆಗೆ ಎಲ್ಲಾ ಮಾಂಸಾಹಾರ ಮಾರಾಟ ಉದ್ದಿಮೆಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ. ಈ ನಿಯಮವನ್ನು ಯಾರಾದರೂ ಉಲ್ಲಂಘನೆ ಮಾಡಿದರೆ, ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ರ ರೂಲ್ 91 ಅನ್ವಯ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸೂಚನೆ ನೀಡಲಾಗಿದೆ.

ವಾಯುಸೇನೆ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ
ಇನ್ನು ಈ ನಿರ್ಧಾರವನ್ನು ವಾಯುನೆಲೆಯ ಸೂಚನೆಯ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಬಿಬಿಎಂಪಿಯ ಯಲಹಂಕ ವಲಯ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್ ಅವರು ಹೇಳಿದ್ದಾರೆ. ಇನ್ನು ಬಿಬಿಎಂಪಿಯು ಈ ನಿಯಮವು ಮಾಂಸ ಮಾರಾಟ / ಕಸಾಯಿಖಾನೆಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿಯು ಮೊದಲು ಹೊರಡಿಸಿದ್ದ ಆದೇಶದಲ್ಲಿ ಇದು ತಪ್ಪಾಗಿದ್ದು, ಹೋಟೆಲ್‌ಗಳಿಗೆ ಇದು ಅನ್ವಯವಾಗುವುದಿಲ್ಲ. ಈ ಸಂಬಂಧ ಪರಿಷ್ಕೃತ ಆದೇಶವನ್ನು ಬಿಬಿಎಂಪಿಯಿಂದ ಹೊರಡಿಸಲಾಗುವುದು ಎಂದು ಅವರು Oneindia Kannadaಕ್ಕೆ ತಿಳಿಸಿದ್ದಾರೆ.
ಬಿಬಿಎಂಪಿಯ ಈ ಹೊಸ ಆದೇಶದಿಂದ ಬೆಂಗಳೂರಿನ ಹೋಟೆಲ್ ಉದ್ಯಮಗಳಿಗೆ ಕೋಟ್ಯಾಂತರ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿತ್ತು. ಆದರೆ ಕೊನೆಗೂ ಆದೇಶವನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಆದೇಶದಿಂದ ಅಂದಾಜು 250 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗುವ ಆತಂಕ ಸೃಷ್ಟಿಯಾಗಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications