ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತೆಗೆ ಉನ್ನತ ಸ್ಥಾನ
ಬೆಂಗಳೂರು ಏಪ್ರಿಲ್ 12: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೈಂಗಿಕ ಅಲ್ಪಸಂಖ್ಯಾತೆಗೆ ರಾಜಕೀಯದಲ್ಲಿ ಅತ್ಯುನ್ನತ ಸ್ಥಾನ ಲಭಿಸಿದೆ. ಲೈಂಗಿಕ ಅಲ್ಪಸಂಖ್ಯಾತ ಅಥವಾ ಮಂಗಳಮುಖಿಯರ ಪರವಾಗಿ ಹೋರಾಡಿದ ಅಕ್ಕಯ್ ಪದ್ಮಶಾಲಿ ಅವರಿಗೆ ಕಾಂಗ್ರೆಸ್ ರಾಜ್ಯ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಿ ಗೌರವಿಸಿದೆ.
ಸಾಧನೆಗೆ ಲಿಂಗತಾರತಮ್ಯವಿಲ್ಲ. ಗಂಡಾಗಿ ಹುಟ್ಟಿ, ಹೆಣ್ಣಾದ ಅಕ್ಕಯ್ ಪದ್ಮಶಾಲಿ ಕುಟುಂಬ ಹಾಗೂ ಸಮಾಜದಿಂದ ನಾನಾ ನೋವುನ್ನ ಅನುಭವಿಸಿದ್ರೂ, ಅವೆಲ್ಲವನ್ನೂ ಮೆಟ್ಟಿ ರಾಷ್ಟ್ರಪತಿ ಭವನದ ಮೆಟ್ಟಿಲನ್ನು ತುಳಿದ ಗಟ್ಟಿಗಿತ್ತಿ. ಅಸಹಾಯಕರ ಏಳಿಗೆಗೆ ಕಂಕಣ ಬದ್ಧಳಾಗಿರುವ ಇವರ ಉತ್ಸಾಹ ಮೆಚ್ಚುಗೆಗೆ ಪಾತ್ರವಾಗಿದೆ.
ರಸ್ತೆಯ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಮಂಗಳಮುಖಿಯರು ಹಣಕ್ಕಾಗಿ ಕಾಡುವುದು ಸಾಮಾನ್ಯ. ಅವರನ್ನು ಕಂಡರೆ ಮುಖ ಸಿಂಡರಿಸುವ ಜನರನ್ನು ಓಲೈಸುತ್ತಲೇ ತುತ್ತಿನ ಚೀಲ ತುಂಬಿಸಬೇಕು. ಇಂತಹ ಕಟು ಚಿತ್ರಣದ ನಡುವೆಯೇ ಲೈಂಗಿಕ ಅಲ್ಪಸಂಖ್ಯಾತಳಾಗಿ ಹುಟ್ಟಿದ್ದು, ಶಾಪವಲ್ಲ, ಅದನ್ನು ವರವಾಗಿ ಪರಿವರ್ತಿಸಿಕೊಂಡ ಅಕ್ಕಯ್ ಪದ್ಮಶಾಲಿ ನಮ್ಮೆಲ್ಲರ ನಡುವೆ ಭಿನ್ನವಾಗಿ ನಿಲ್ಲುತ್ತಾರೆ. ರಾಜ್ಯದಲ್ಲೇ ಪ್ರಥಮ ಬಾರಿಗೆ ತೃತೀಯ ಲಿಂಗಿಯಾಗಿ ರಾಜ್ಯೋತ್ಸವ ಪಡೆದ ಹೆಗ್ಗಳಿಕೆ ಇವರದು. ಇವರ ಸಾಧನೆಗೆ ಮೆಚ್ಚಿದ ಸರ್ಕಾರ 2015ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯ ಕಿರೀಟವನ್ನು ತೊಡಿಸಿದೆ.

ಮೊನ್ನೆಯಷ್ಟೇ ಕಾಂಗ್ರೆಸ್ 40 ಉಪಾಧ್ಯಕ್ಷರು ಮತ್ತು 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿದೆ. ಅದರಲ್ಲಿ ಲೈಂಗಿಕ ಅಲ್ಪಸಂಖ್ಯಾತ ಹಾಗೂ ಮಾನವ ಹಕ್ಕುಗಳ ಪರ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಇವರು ಕರ್ನಾಟಕದ ರಾಜಕೀಯದಲ್ಲಿ ಮೊದಲ ಬಾರಿಗೆ ದೊಡ್ಡ ಹುದ್ದೆ ಪಡೆದಿದ ಲೈಂಗಿಕ ಅಲ್ಪಸಂಖ್ಯಾತೆಯಾಗಿದ್ದಾರೆ.

ಈ ಬಗ್ಗೆ 'ಒನ್‌ಇಂಡಿಯಾ ಕನ್ನಡ' ವರದಿಗಾರರೊಂದಿಗೆ ಮಾತನಾಡಿದ ಅವರು, 'ನಮ್ಮ ಸಮುದಾಯದವರು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಶೋಷಣೆಗಳನ್ನು ಎದುರಿಸಿಕೊಂಡು ಬಂದಿದ್ದಾರೆ. ಇಂಥಹ ಸಮಯದಾಯಕ್ಕೆ ನಮ್ಮ ಅಧ್ಯಕ್ಷರು ಡಿಕೆ ಶಿವಕುಮಾರ್ ಅವರು ರಾಜಕೀಯ ಸ್ಥಾನಮಾನವನ್ನು ನೀಡಬೇಕು ಎಂದು ತುಂಬಾ ವರ್ಷಗಳಿಂದ ಛಲ ಹೊಂದಿದ್ದರು. ಅವರ ಛಲಕ್ಕೆ ನಾನು ಋಣಿಯಾಗಿದ್ದೇನೆ. ನಾನು ರಾಜಕೀಯಕ್ಕೆ ಸೇರಬೇಕಾ ಬೇಡಾ? ಎನ್ನುವ ಚರ್ಚೆ ಕಳೆದ ಹನ್ನೊಂದು ವರ್ಷಗಳಿಂದ ಮಾಡಿಕೋಮಡು ಬರಲಾಗಿದೆ. ಅಂತಿಮವಾಗಿ ನಾನು 2020ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡೆ. ಇದನ್ನು ಸೌಮ್ಯ ರೆಡ್ಡಿ ಅವರು ವಿಶೇಷ ಕಾಳಜಿ ತೆಗೆದುಕೊಂಡಿದ್ದಾರೆ" ಎಂದರು.
ನಾನು ಸಾಮಾಜಿಕ, ಧಾರ್ಮಿಕ ಚಳುವಳಿ ಭಾಗವಾಗಿ, ಮಹಿಳಾ, ಅಲ್ಪಸಂಖ್ಯಾತರ ಪರ ಎಲ್ಲಾ ಸಮಾಜಮುಖಿಯಾಗಿ ಹೋರಾಟವನ್ನು ಮಾಡಿಕೊಂಡು ಬಂದಿರೋಳು. ಹೋರಾಟ ಅಂದರೇನು? ಕಷ್ಟಗಳು ಅಂದರೇನು? ರಾಜಕೀಯ, ಧರ್ಮ ವ್ಯವಸ್ಥೆಯನ್ನು ನಾನು ನೋಡಿಕೊಂಡು ಬಂದಿದ್ದೇನೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ನನಗೆ ಕೊಟ್ಟ ಸ್ಥಾನ ಬಹುಶ: ದೇಶದ ಇತಿಹಾಸದಲ್ಲಿ ಅಲ್ಪಸಂಖ್ಯಾತರಿಗೆ ಕೊಟ್ಟ ದೊಡ್ಡ ಸ್ಥಾನವಿದು. ದೇಶದ ದೊಡ್ಡ ರಾಷ್ಟ್ರೀಯ ಪಕ್ಷ ರಾಜ್ಯದ ಪ್ರಧಾನ ಕಾರ್ಯದರ್ಶಿ ಹುದ್ದೆ ನನಗೆ ನೀಡಿರುವುದು ದೊಡ್ಡ ಜವಬ್ದಾರಿಯಾಗಿದೆ ಎಂದು ಹೇಳಿದರು. ಇದು ಅಕ್ಕಯ್ ಪದ್ಮಶಾಲಿ ಅವರಿಗೆ ಕೊಟ್ಟ ಗೌರವ ಮಾತ್ರವಲ್ಲ. ಇದು ಸಹಸ್ರ ನಾಗರೀಕ ಚಳುವಳಿಗಳು ಯಾವಿದ್ದಾವೋ ಅವೆಲ್ಲದರ ಧ್ವನಿಯಾಗಿ ಪಕ್ಷದ ಜೊತೆಗೆ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ.

ಅಕ್ಕಯ್ ಪದ್ಮಶಾಲಿ ಲೈಂಗಿಕ ಅಲ್ಪಸಂಖ್ಯಾತ ಅಥವಾ ಮಂಗಳಮುಖಿಯರ ಪರವಾಗಿ ಹಲವು ವರ್ಷಗಳಿಂದ ಹೋರಾಟವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇವರು ರಾಜ್ಯೋತ್ಸವ ಪ್ರಶಸ್ತಿ ವಿಜೇತೆಯೂ ಹೌದು. ಮಾನವ ಹಕ್ಕುಗಳು ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧವಾಗಿ ಹಲವು ವರ್ಷಗಳಿಂದ ಧ್ವನಿ ಎತ್ತುತ್ತಿದ್ದಾರೆ. ಮಂಗಳಮುಖಿಯರಿಗೆ ಸಮಾಜದಲ್ಲಿ ಗೌರವದ ಸ್ಥಾನಮಾನ ಸಿಗಬೇಕು ಎಂಬುವುದು ಇವರ ಬೇಡಿಕೆಯಾಗಿದೆ. 2018 ವಿಧಾನಸಭೆ ಚುನಾವಣೆಯ ಅವಧಿಯಲ್ಲಿ ಅಕ್ಕಯ್ ಪದ್ಮಶಾಲಿ ಸೇರಿದಂತೆ ಲೈಂಗಿಕ ಅಲ್ಪಸಂಖ್ಯಾತರು ಮೊದಲು ಬಾರಿ ಮತದಾನ ನಡೆಸಿದ್ದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ಪದಾಧಿಕಾರಿಗಳ ನೇಮಕಕ್ಕೆ ಪಕ್ಷದ ಹೈಕಮಾಂಡ್ ಅಂಕಿತ ಹಾಕಿದ್ದು, ಅಭಯ್‌ಚಂದ್ರ ಜೈನ್, ಪಿ.ಎಂ. ಅಶೋಕ್, ಬಿ.ಎನ್.ಚಂದ್ರಪ್ಪ, ಡಾ.ಎಲ್.ಹನುಮಂತಯ್ಯ ಸೇರಿದಂತೆ 40 ಮಂದಿಯನ ಉಪಧ್ಯಕ್ಷರು ಹಾಗೂ 109 ಮಂದಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆದೇಶದ ಮೇರೆಗೆ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಶನಿವಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಸಮಿತಿಗಳನ್ನು ವಿಸರ್ಜನೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿತ್ತು.
ಪದಾಧಿಕಾರಿಗಳ ಪಟ್ಟಿಯಲ್ಲಿ ಹಿಂದುಳಿದ ವರ್ಗ (ಒಬಿಸಿ)-53, ಪರಿಶಿಷ್ಟ ಜಾರಿ (ಎಸ್ಸಿ)-25, ಪಿಶಿಷ್ಟ ಪಂಗಡ(ಎಸ್ಟಿ)- 4, ಮಹಿಳೆಯರಿಗೆ-23, ಅಲ್ಪಸಂಖ್ಯಾತರು- 22, ಲಿಂಗಾಯತರು-19, ರೆಡ್ಡಿ ಲಿಂಗಾಯತರು5, ಒಕ್ಕಲಿಗರು-16 ಸೇರಿದಂತೆ ಒಟ್ಟು ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications