ಅಕ್ರಮ-ಸಕ್ರಮ ಅರ್ಜಿ ಸಲ್ಲಿಕೆಗೆ, ಮಾರ್ಚ್ 31ರವರೆಗೂ ಅವಧಿ ವಿಸ್ತರಣೆ
ಬೆಂಗಳೂರು, ಫೆಬ್ರವರಿ 21: ಜಮೀನು ಅಕ್ರಮ-ಸಕ್ರಮ ಅರ್ಜಿ ಸಲ್ಲಿಕೆಗೆ ಮಾರ್ಚ್ 31ರವರೆಗೂ ಅವಧಿ ವಿಸ್ತರಣೆ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್ವಿ ದೇಶಪಾಂಡೆ ರಾಜ್ಯದ ಗ್ರಾಮಾಂತರ ಮತ್ತು ನಗರ ಪ್ರದೇಶದ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಿಕೊಳ್ಳಲು ಹಾಗೂ ಬಗರ್ ಹುಕುಂ ಯೋಜನೆ ಅಡಿ ಸರ್ಕಾರಿ ಜಮೀನುಗಳನ್ನು ಸಕ್ರಮಗೊಳಿಸಿಕೊಳ್ಳಲು ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ.
ಅಕ್ರಮ ವಾಸ ಮನೆಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸುವ ಅವಧಿ 2018ರ ಸೆಪ್ಟೆಂಬರ್ 16ಕ್ಕೆ ಕೊನೆಗೊಂಡಿತ್ತು. ಈ ಅವಧಿಯನ್ನು ವಿಸ್ತರಿಸುವಂತೆ ಸಾರ್ವಜನಿಕರು, ಜನಪ್ರತಿನಿಧಿಗಳಿಂದ ಮನವಿ ಬಂದ ಹಿನ್ನೆಲೆಯಲ್ಲಿ ನಿಯಮಗಳಿಗೆ ತಿದ್ದುಪಡಿ ತಂದು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದವರು ನಿಗಧಿತ ಅಔದಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರ ಜಮೀನುಗಳನ್ನು ಸಕ್ರಮಗೊಳಿಸುವ ಸಲುವಾಗಿ ಅರ್ಜಿ ಸಲ್ಲಿಸುರವ ಅವಧಿಯನ್ನು 2019ರ ಮಾರ್ಚ್ 16ರವರೆಗೆ ವಿಸ್ತರಿಸಲಾಗಿದೆ. ನಮೂನೆ 53ರಲ್ಲಿ ಅರ್ಜಿ ಸಲ್ಲಿಸಲುಈ ಹಿಂದೆ ಅವಕಾಶ ಮಾಡಿಕೊಡಲಾಗಿತ್ತು.
-
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Bengaluru Real Estate: ಬೆಂಗಳೂರು ರಿಯಲ್ ಎಸ್ಟೇಟ್ ಮೇಲೆ ಹೊಸ ಪ್ರಭಾವ: AI, ಉದ್ಯೋಗ ಅನಿಶ್ಚಿತತೆ ನಡುವೆ ಬೆಲೆ ಇಳಿಕೆ ಭೀತಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications