ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ರಮ-ಸಕ್ರಮ ಅರ್ಜಿ ಸಲ್ಲಿಕೆಗೆ, ಮಾರ್ಚ್ 31ರವರೆಗೂ ಅವಧಿ ವಿಸ್ತರಣೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 21: ಜಮೀನು ಅಕ್ರಮ-ಸಕ್ರಮ ಅರ್ಜಿ ಸಲ್ಲಿಕೆಗೆ ಮಾರ್ಚ್ 31ರವರೆಗೂ ಅವಧಿ ವಿಸ್ತರಣೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್‌ವಿ ದೇಶಪಾಂಡೆ ರಾಜ್ಯದ ಗ್ರಾಮಾಂತರ ಮತ್ತು ನಗರ ಪ್ರದೇಶದ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಿಕೊಳ್ಳಲು ಹಾಗೂ ಬಗರ್‌ ಹುಕುಂ ಯೋಜನೆ ಅಡಿ ಸರ್ಕಾರಿ ಜಮೀನುಗಳನ್ನು ಸಕ್ರಮಗೊಳಿಸಿಕೊಳ್ಳಲು ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು ಅಕ್ರಮ-ಸಕ್ರಮ ಯೋಜನೆ: ಸುಪ್ರೀಂ ಶೀಘ್ರ ವಿಚಾರಣೆ ಬೆಂಗಳೂರು ಅಕ್ರಮ-ಸಕ್ರಮ ಯೋಜನೆ: ಸುಪ್ರೀಂ ಶೀಘ್ರ ವಿಚಾರಣೆ

ಅಕ್ರಮ ವಾಸ ಮನೆಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸುವ ಅವಧಿ 2018ರ ಸೆಪ್ಟೆಂಬರ್‌ 16ಕ್ಕೆ ಕೊನೆಗೊಂಡಿತ್ತು. ಈ ಅವಧಿಯನ್ನು ವಿಸ್ತರಿಸುವಂತೆ ಸಾರ್ವಜನಿಕರು, ಜನಪ್ರತಿನಿಧಿಗಳಿಂದ ಮನವಿ ಬಂದ ಹಿನ್ನೆಲೆಯಲ್ಲಿ ನಿಯಮಗಳಿಗೆ ತಿದ್ದುಪಡಿ ತಂದು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದವರು ನಿಗಧಿತ ಅಔದಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Akrama sakrama application will be recieved till march 31

ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರ ಜಮೀನುಗಳನ್ನು ಸಕ್ರಮಗೊಳಿಸುವ ಸಲುವಾಗಿ ಅರ್ಜಿ ಸಲ್ಲಿಸುರವ ಅವಧಿಯನ್ನು 2019ರ ಮಾರ್ಚ್ 16ರವರೆಗೆ ವಿಸ್ತರಿಸಲಾಗಿದೆ. ನಮೂನೆ 53ರಲ್ಲಿ ಅರ್ಜಿ ಸಲ್ಲಿಸಲುಈ ಹಿಂದೆ ಅವಕಾಶ ಮಾಡಿಕೊಡಲಾಗಿತ್ತು.

English summary
State government extended to receive application of akrama sakrama, earlier September 16 was the last date.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X