Alcohol: ಬೆಂಗಳೂರು ನಮ್ಮ ಮೆಟ್ರೋದಲ್ಲಿ ಮದ್ಯ ಪ್ರಿಯರಿಗೆ ಶೀಘ್ರ ಗುಡ್‌ನ್ಯೂಸ್, ಏನದು
Alcohol: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣ ದರ ಹೆಚ್ಚಳ ಮಾಡುವ ವಿಚಾರವು ಈಚೆಗೆ ವಿವಾದ ಸ್ವರೂಪವನ್ನು ಪಡೆದುಕೊಂಡಿತ್ತು. ಇದು ಮೆಟ್ರೋ ಪ್ರಯಾಣಿಕರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ನಡುವೆ ಬಿಎಂಆರ್‌ಸಿಎಲ್ ಮದ್ಯ ಪ್ರಿಯರಿಗೆ ಗುಡ್‌ನ್ಯೂಸ್ ಕೊಡುವುದಕ್ಕೆ ಮುಂದಾಗಿದೆ. ಮೆಟ್ರೋದಲ್ಲಿ ಕೆಲವೊಂದು ವಸ್ತುಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಿರ್ಬಂಧವಿದೆ. ಇದೀಗ ಇದರಲ್ಲಿ ಕೆಲವೊಂದು ಸಡಿಲಿಕೆಗಳನ್ನು ತರಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರು ನಮ್ಮ ಮೆಟ್ರೋದಲ್ಲಿ ಮದ್ಯ ಸಾಗಿಸುವುದನ್ನು ನಿಷೇಧಿಸಲಾಗಿದ್ದರೂ, ಅನುಮತಿಸಲಾದ ಪ್ರಮಾಣದಲ್ಲಿ ಮದ್ಯ ಸೇವಿಸಿದ ಪ್ರಯಾಣಿಕರು ಅನ್ಯ ಪ್ರಯಾಣಿಕರಿಗೆ ತೊಂದರೆ ಕೊಡದೆ ವರ್ತಿಸಿದರೆ ಮೆಟ್ರೋದಲ್ಲಿ ಪ್ರಯಾಣ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಪ್ರಸ್ತುತ ಪ್ರಯಾಣಿಕರು ಮೆಟ್ರೋದಲ್ಲಿ ಮದ್ಯ ಸಾಗಿಸಲು ಅನುಮತಿ ಇಲ್ಲ, ಮದ್ಯದ ಬಾಟಲಿ, ಚೂಪಾದ ವಸ್ತುಗಳು, ಬಂದೂಕುಗಳು, ಸ್ಫೋಟಕಗಳು, ಕೆಲವೊಂದು ರಾಸಾಯನಿಕಗಳು ಸೇರಿದಂತೆ ಕೆಲವೊಂದು ವಸ್ತುಗಳನ್ನು ಸಾಗಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

ನಮ್ಮ ಬೆಂಗಳೂರು ಮೆಟ್ರೋದಲ್ಲಿ ವಿಮಾನದಲ್ಲಿ ಪ್ರಯಾಣ ಮಾಡುವಾಗ ಕೆಲವೊಂದು ವಸ್ತುಗಳಿಗೆ ನಿರ್ಬಂಧ ವಿಧಿಸಿರುವ ಮಾದರಿಯಲ್ಲೇ ನಮ್ಮ ಮೆಟ್ರೋದಲ್ಲೂ ಕೆಲವೊಂದು ವಸ್ತುಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ವಿಮಾನ ಪ್ರಯಾಣದ ಡ್ಯೂಟಿ-ಫ್ರೀಯಿಂದ ಬಾಟಲಿಯನ್ನು ತೆಗೆದುಕೊಂಡಿದ್ದರೆ ಕೆಲವೊಂದು ನಿರ್ಬಂಧಗಳು ಇವೆ. ಬೆಂಗಳೂರಿನ ಮೆಟ್ರೋ ಪ್ರಯಾಣಿಕರು ಶೀಘ್ರದಲ್ಲೇ ನಮ್ಮ ಮೆಟ್ರೋದಲ್ಲಿ ಮುಚ್ಚಿದ ಮದ್ಯದ ಬಾಟಲಿಗಳನ್ನು ಸಾಗಿಸಲು ಅನುಮತಿ ನೀಡುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಅಸ್ತಿತ್ವದಲ್ಲಿರುವ ನಿಯಮಗಳ ಸಂಭವನೀಯ ಸಡಿಲಿಕೆಯ ಬಗ್ಗೆ ಚರ್ಚೆ ನಡೆಸಿದೆ.
ದೆಹಲಿ ಮಾದರಿಯಲ್ಲಿ ಮದ್ಯ ಸಾಗಾಣಿಕೆಗೆ ಅವಕಾಶ
ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಪ್ರಯಾಣಿಕರು ನಮ್ಮ ಮೆಟ್ರೋದಲ್ಲಿ ಮುಚ್ಚಿದ ಮದ್ಯದ ಬಾಟಲಿಗಳನ್ನು ಸಾಗಿಸಲು ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ.
ದೆಹಲಿ ಮೆಟ್ರೋದಲ್ಲಿ ಮದ್ಯ ಬಾಟಲಿ ಸಾಗಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅದಕ್ಕೆಂದು ಕೆಲವೊಂದು ಕಠಿಣ ನಿಯಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಇದೇ ಮಾದರಿಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲೂ ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ದೆಹಲಿ ಮೆಟ್ರೋ ಮಾದರಿಯಲ್ಲೇ ಇಲ್ಲೂ ಮದ್ಯ ಬಾಟಲಿ ಸಾಗಿಸುವುದಕ್ಕೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣ ಮಾರ್ಗ ಮೆಟ್ರೋ ಮಾರ್ಗವನ್ನು ಗಮನದಲ್ಲಿರಿಸಿಕೊಂಡು ಕೆಲವೊಂದು ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದೆಹಲಿ ಮಾದರಿಯನ್ನು ಬೆಂಗಳೂರಿನಲ್ಲಿ ಅಳವಡಿಸಿಕೊಂಡರೆ ಮದ್ಯ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಂತೆ ಆಗಲಿದೆ. ದೆಹಲಿಯಲ್ಲಿ ವಿಮಾನ ನಿಲ್ದಾಣ ಮಾರ್ಗದಲ್ಲಿ ಮದ್ಯದ ಬಾಟಲಿಗಳನ್ನು ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ಇದೆ. ಅದೇ ಮಾದರಿಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯಾಚರಣೆ ಪ್ರಾರಂಭವಾದ ನಂತರ ಅಳವಡಿಸಿಕೊಳ್ಳುವ ಸಾಧ್ಯತೆ ಇದೆ.
ಈ ಹೊಸ ಸಡಿಲಿಕೆಯು ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ಮಾರ್ಗಗಳ ಮೆಟ್ರೋಗಳಲ್ಲಿ ಮಾತ್ರ ಇರಲಿದೆಯೇ ಅಥವಾ ಬೆಂಗಳೂರಿನ ವಿವಿಧ ಭಾಗದ ಮೆಟ್ರೋ ಮಾರ್ಗಗಳಲ್ಲೂ ಪರಿಚಯಿಸಲಾಗುತ್ತದೆಯೇ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ಒಟ್ಟಾರೆ ಈ ಪ್ರಸ್ತಾವನೆಯು ಚರ್ಚೆಯ ಹಂತದಲ್ಲಿದೆ ಎಂದು ಹೇಳಲಾಗಿದೆ.












Click it and Unblock the Notifications