Liquor Sales Ban: ಸೆ.31 ರವರೆಗೆ ಬೆಂಗಳೂರಿನ ಹಲವೆಡೆ ಮದ್ಯ ಮಾರಾಟ ನಿಷೇಧ: ಯಾವ ಪ್ರದೇಶಗಳು ತಿಳಿಯಿರಿ
ದೇಶಾದ್ಯಂದ ಸಂಭ್ರಮದ ಗಣೇಶ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಅದ್ದೂರಿ ಪೂಜೆಯ ಬಳಿಕ, ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಗುತ್ತದೆ. ರಾಜ್ಯದಲ್ಲಿ ಸಾರ್ವಜನಿಕವಾಗಿ ಗಣೇಶ ಪ್ರತಿಷ್ಟಾಪನೆ, ವಿಸರ್ಜನೆಗೆ ನಿಯಮಗಳನ್ನು ರೂಪಿಸಲಾಗಿದೆ.
ಬೆಂಗಳೂರಿನಲ್ಲಿ ಕೂಡ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ. ನಗರದ ಹಲವು ಭಾಗಗಳಲ್ಲಿ ಪ್ರಮುಖ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಸಾವಿರಾರು ಜನ ಸೇರುವ ನಿರೀಕ್ಷೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಹಲವು ಭಾಗಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಸೆ. 21ರಿಂದ ಸೆಪ್ಟೆಂಬರ್ 31ರವರೆಗೆ ನಗರದ ಹಲವು ಭಾಗಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಗಣಪತಿ ವಿಸರ್ಜನಾ ಮೆರವಣಿಗೆ ನಡೆಯುವ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿದೆ.
ಎಲ್ಲೆಲ್ಲಿ ಮದ್ಯ ಮಾರಾಟ ನಿಷೇಧ?
ಸೆಪ್ಟೆಂಬರ್ 21ರಂದು ಬೆಂಗಳೂರು ಕೇಂದ್ರ, ಉತ್ತರ, ಈಶಾನ್ಯ ಹಾಗೂ ಪೂರ್ವ ವಿಭಾಗದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಬೆಂಗಳೂರು ಉತ್ತರ ಭಾಗದ ಹೆಬ್ಬಾಳ, ಸಂಜಯನಗರ, ಆರ್ ಟಿ ನಗರ, ಹೆಬ್ಬಾಳ, ಜೆ ಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ. 21ರ ಬೆಳಗ್ಗೆ 6 ಗಂಟೆಯಿಂದ ಸೆ.22ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ಮಾಡುವುದುನ್ನು ನಿಷೇಧಿಸಲಾಗಿದೆ.
ಬೆಂಗಳೂರು ಪೂರ್ವ ವಿಭಾಗದ ಭಾರತಿನಗರ, ಪುಲಕೇಶಿನಗರ, ಡಿ.ಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 24, ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಹಲಸೂರು, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 24 ರ ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 25 ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಈಶಾನ್ಯ ವಿಭಾಗದ ಯಲಹಂಕ, ಕೊಡಿಗೆಹಳ್ಳಿ, ವಿದ್ಯಾರಣ್ಯಪುರ, ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಸಂಜೆ 6 ಗಂಟೆಯಿಂದ ಸೆ.25ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಪೊಲೀಸ್ ಇಲಾಖೆ ಆದೇಶಿಸಿದೆ.
ಬೆಂಗಳೂರು ಕೇಂದ್ರ ವಿಭಾಗದ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 30ರ ಬೆಳಗ್ಗೆ 6ರಿಂದ ಅಕ್ಟೋಬರ್ 1ರ ಬೆಳಗ್ಗೆ 6ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಿಯಮ ಮೀರಿ ಮದ್ಯ ಮಾರಾಟ ಮಾಡಲು ಪ್ರಯತ್ನ ಪಟ್ಟರೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications