Alcohol Sale Banned: ಆಗಸ್ಟ್‌ನಲ್ಲಿ ಮೂರು ದಿನ ಮದ್ಯ ಮಾರಾಟ ಇಲ್ಲ: ಈ ದಿನ ಮಾಂಸ ಮಾರಾಟವೂ ಇರಲ್ಲ!
Alcohol Sale Banned: ಮದ್ಯ ಪ್ರಿಯರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ. ಮದ್ಯ ಪ್ರಿಯರಿಗೆ ಮುಂದಿನ ಎರಡು ದಿನಗಳ ಕಾಲ ಮದ್ಯ ಸಿಗುವುದಿಲ್ಲ. ಅಷ್ಟೇ ಅಲ್ಲದೇ ಬೆಂಗಳೂರಿನಲ್ಲಿ ಮಾಂಸ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಮುಂದಿನ ಎರಡು ದಿನಗಳ ಕಾಲ ಅಂದರೆ ಆಗಸ್ಟ್ 15 ಹಾಗೂ ಆಗಸ್ಟ್ 16ರಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಯಾವ ಕಾರಣಕ್ಕೆ ಮದ್ಯ ಮಾರಾಟ ಇರುವುದಿಲ್ಲ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಆಗಸ್ಟ್ 16 ರಂದು ಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡ್ರೈ ಡೇ ಇರಲಿದೆ (ಮದ್ಯ ಮಾರಾಟ ಇರುವುದಿಲ್ಲ) ಎರಡು ದಿನಗಳ ಕಾಲ ಅಂದರೆ ಮುಂದಿನ 24 ಗಂಟೆ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಂಪೂರ್ಣವಾಗಿ ಬಾರ್‌ಗಳು, ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಮದ್ಯದಂಗಡಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಗಸ್ಟ್ 15ರಂದು ಮದ್ಯ ಮಾರಾಟ ಇರುವುದಿಲ್ಲ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿಶೇಷ ಆಚರಣೆಗಳು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ. ಈ ದಿನಗಳಲ್ಲಿ ಮದ್ಯ ಮಾರಾಟದಲ್ಲಿ ಯಾವುದೇ ವಿನಾಯಿತಿಗಳು ಸಹ ಅನ್ವಯವಾಗುವುದಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ಇಂದಿನಿಂದಲೇ ಮದ್ಯ ಪ್ರಿಯರು ಮದ್ಯ ಖರೀದಿ ಮಾಡುವುದಕ್ಕೆ ಮುಗಿಬಿದ್ದಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾನೂನಿನ ಪ್ರಕಾರ ಭಾರತದಾದ್ಯಂತ ಮದ್ಯ ಮಾರಾಟ ನಿಷೇಧ ಇರಲಿದೆ. ಭಾರತದಾದ್ಯಂತ ಕಡ್ಡಾಯ ಡ್ರೈ ಡೇ ಆಗಿರಲಿದೆ. ಈ ದಿನ ದೇಶದಾದ್ಯಂತ ಬಾರ್, ಪಬ್ ಹಾಗೂ ರೆಸ್ಟೋರೆಂಟ್‌ಗಳು ಸೇರಿದಂತೆ ಎಲ್ಲಾ ಮಾದರಿಯ ಮದ್ಯದ ಅಂಗಡಿಗಳು ಸಂಪೂರ್ಣವಾಗಿ ಬಂದ್ ಆಗಿರಲಿವೆ.
ಇನ್ನು ಆಗಸ್ಟ್ 16 (ಶನಿವಾರ)ರಂದು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ ಇರಲಿದೆ. ಅಲ್ಲದೇ ಬೆಂಗಳೂರಿನಲ್ಲಿ ಈ ದಿನ ಮಾಂಸ ಮಾರಾಟವೂ ಇರುವುದಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ. ಇನ್ನು ಆಗಸ್ಟ್ 27 (ಬುಧವಾರ)ರಂದು ಗಣೇಶ ಚತುರ್ಥಿ ಇರುವುದರಿಂದ ಅಂದು ಸಹ ಬೆಂಗಳೂರು ಹಾಗೂ ಕರ್ನಾಟಕದ ವಿವಿಧ ಭಾಗದಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧ ಇರಲಿದೆ.
ಬೆಂಗಳೂರಲ್ಲಿ ಮಾಂಸ ಮಾರಾಟ ನಿಷೇಧ
ಆಗಸ್ಟ್ 16ರಂದು ಶನಿವಾರ "ಶ್ರೀ ಕೃಷ್ಣಾ ಜನ್ಮಾಷ್ಟಮಿ" ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಆದೇಶ ಹೊರಡಿಸಿದ್ದಾರೆ. "ಶ್ರೀ ಕೃಷ್ಣಾ ಜನ್ಮಾಷ್ಟಮಿ" ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.












Click it and Unblock the Notifications