2 ವರ್ಷದ ಬಳಿಕ ಕಾಂಗ್ರೆಸ್‌ನಲ್ಲಿ ಹೊಸಬರಿಗೆ ಸಚಿವರಾಗುವ ಅವಕಾಶ?

Recommended Video

      ಪಕ್ಷದಲ್ಲಿ ಮಹತ್ವದ ಬದಲಾವಣೆ ಮಾಡಿದ ಕಾಂಗ್ರೆಸ್ | Oneindia Kannada

      ಬೆಂಗಳೂರು, ಜೂನ್ 10: ಎರಡು ವರ್ಷದ ಬಳಿಕ ಕಾಂಗ್ರೆಸ್‌ನಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಿದೆ. ಜೆಡಿಎಸ್ ಕೂಡ ಹೀಗೆ ಮಾಡಲಿ ಎಂದು ಕಾಂಗ್ರೆಸ್ ಪ್ರಸ್ತಾಪವನ್ನು ಮುಂದಿಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

      ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಮೊದಲ ಎರಡು ವರ್ಷ ಅಂದರೆ ಇನ್ನೂ ಒಂದು ವರ್ಷ ಕಳೆ ಮೇಲೆ ಎಲ್ಲಾ ಸಚಿವರನ್ನೂ ಬದಲಾಯಿಸಿ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಪಕ್ಷದ ಹಿರಿಯ ನಾಯಕರುಗಳ ಮಧ್ಯೆ ಚರ್ಚೆ ನಡೆಯುತ್ತಿದೆ.

      ಕಾಂಗ್ರೆಸ್ ಪಕ್ಷ ತನ್ನಲ್ಲಿರುವ ಅತೃಪ್ತ ಶಾಸಕರನ್ನೂ ಸಮಾಧಾನಪಡಿಸುವ ಉದ್ದೇಶದಿಂದ ಇಂಥದ್ದೊಂದು ಪ್ರಸ್ತಾಪವನ್ನು ಮುಂದಿಟ್ಟಿದೆ , ಇದಕ್ಕೆ ಜೆಡಿಎಸ್ ಕೂಡ ಸಹಮತ ಸೂಚಿಸಿದೆ. ಎರಡು ವರ್ಷ ಕಳೆದ ಬಳಿಕೆ ಎಲ್ಲಾ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಏನನ್ನೂ ಹೇಳಿಲ್ಲ ಎನ್ನಲಾಗಿದೆ.

      All congress ministers will change after two years

      ಸದ್ಯ ಅಸಮಾಧಾನ ತಲೆದೋರಿರುವ ಕಾಂಗ್ರೆಸ್ ಪಕ್ಷದಲ್ಲಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶಾಸಕರ ಅತೃಪ್ತಿ ಕಡಿಮೆಗೊಳಿಸಲು ಪಕ್ಷ ಏನು ಬೇಕಾದರೂ ಮಾಡಲು ಸಿದ್ಧವಿದ್ದಂತಿದೆ. ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ನಾವು ಬದ್ಧ , ನಮ್ಮ ಪಕ್ಷದಲ್ಲಿ ಯಾವ ಸಚಿವರನ್ನು ಕೈಬಿಡಬೇಕು ಎನ್ನುವುದು ನಮಗೆ ಬಿಟ್ಟ ವಿಚಾರ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+